ಎಕ್ಸಿಟ್ ಪೋಲ್ ಬಳಿಕ ಸೋನಿಯಾ ಗಾಂಧಿ ಮೊದಲ ಪ್ರತಿಕ್ರಿಯೆ? ಹೇಳಿದ್ದೇನು?
18ನೇ ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಮುಗಿದಿದೆ. ಚುನಾವಣೋತ್ತರ ಸಮೀಕ್ಷೆಗಳು ಸಹ ಹೊರ ಬಿದ್ದಿವೆ. ಈ ಬಗ್ಗೆ ಹಲವು ಪಕ್ಷಗಳು ಮುಖಂಡರು ತಮ್ಮ ತಮ್ಮ ಅಭಿಪ್ರಾಯವನ್ನು ನೀಡಿದ್ದಾರೆ. ಆದರೆ ಈ ಬಗ್ಗೆ ಸೋನಿಯಾ ಗಾಂಧಿ ಮಾತ್ರ ಮೌನಕ್ಕೆ ಶರಣಾಗಿದ್ದಾರು. ಅವರು ಸಹ ಸೋಮವಾರ ಈ ಬಗ್ಗೆ ತಮ್ಮ ಮಾತುಗಳನ್ನು ತಿಳಿಸಿದ್ದಾರೆ.
ಹಲವು ಸಂಸ್ಥೆಗಳು ನಡೆಸಿರುವ ಚುನಾವಣೋತ್ತರ ಸಮೀಕ್ಷೆಗಳಲ್ಲಿ ಕಾಂಗ್ರೆಸ್ ಹಿನ್ನಡೆ ಅನುಭಸಿದೆ ಎಂದು ತಿಳಿಸಿವೆ. ಅಲ್ಲದೆ ಬಿಜೆಪಿ ಹ್ಯಾಟ್ರಿಕ್ ಸಾಧನೆ ಮಾಡುವುದು ಕನ್ಫರ್ಮ್ ಎಂದು ತಿಳಿಸಿವೆ. ಬಿಜೆಪಿ 400 ಗಡಿ ಮುಟ್ಟುವುದಿಲ್ಲ ಎಂದು ಸಮೀಕ್ಷೆಗಳು ತಿಳಿಸಿವೆ. ಈ ಬಗ್ಗೆ ಪರ ಹಾಗೂ ವಿರೋಧ ಚರ್ಚೆಗಳು ಆರಂಭವಾಗಿವೆ. ಈ ನಡುವೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಸಹ ತಮ್ಮ ಮನದಾಳದ ಮಾತನ್ನು ಹೇಳಿದ್ದಾರೆ.

ಸೋನಿಯಾ ಹೇಳಿದ್ದೇನು?
ಈಗ ಎಕ್ಸಿಟ್ ಪೋಲ್ ರಿಸಲ್ಟ್ ಮಾತ್ರ ಬಂದಿದೆ. ಇನ್ನು ನಿಶ್ಚಿತ ಫಲಿತಾಂಶ ಬರುವುದು ಮಾತ್ರ ಬಾಕಿ ಇದೆ ಎಂದು ಸೋನಿಯಾ ಗಾಂಧಿ ತಿಳಿಸಿದ್ದರು.
ವಾಸ್ತವವಾಗಿ, ಸಾರ್ವಜನಿಕ ಎಕ್ಸಿಟ್ ಪೋಲ್‌ನಲ್ಲಿ 295 ಸ್ಥಾನಗಳನ್ನು ಪಡೆಯಲಿದೆ ಎಂದು ವಿರೋಧ ಪಕ್ಷದ ಮೈತ್ರಿಕೂಟ 'INDIA' ಹೇಳಿಕೊಳ್ಳುತ್ತಿದೆ. ಇತ್ತೀಚೆಗಷ್ಟೇ ವಿಪಕ್ಷಗಳ ಮೈತ್ರಿಕೂಟದ 'INDIA' ಸಭೆಯ ನಂತರವೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ವಿಷಯವನ್ನು ಪುನರುಚ್ಚರಿಸಿದ್ದಾರೆ.
ಇತ್ತೀಚಿಗಷ್ಟೇ ಎಕ್ಸಿಟ್ ಪೋಲ್ ಆರಂಭಕ್ಕೂ ಮುನ್ನ INDIA ಮೈತ್ರಿ ಕೂಟದ ಸಭೆ ನಡೆದಿತ್ತು. ಈ ಸಭೆಯಲ್ಲಿ INDIA ಮೈತ್ರಿ ಕೂಟ ಅಧಿಕಾರಕ್ಕೆ ಬರುವ ವಿಶ್ವಾಸವನ್ನು ಹೊಂದಲಾಗಿದೆ. ಅಲ್ಲದೆ ಸಭೆ ಬಳಿಕ ಮಲ್ಲಿಕಾರ್ಜುನ್ ಖರ್ಗೆ ತಮ್ಮ ಮೈತ್ರಿ ಕೂಟ 295 ಸ್ಥಾನಗಳಿಗಿಂತಲೂ ಹೆಚ್ಚಿನ ಸ್ಥಾನವನ್ನು ಗೆಲ್ಲ ಬಹುದು ಎಂದು ತಿಳಿಸಿತ್ತು.

ಬಹುತೇಕ ಎಕ್ಸಿಟ್ ಪೋಲ್‌ಗಳು ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತೆ ಅಧಿಕಾರಕ್ಕೆ ಬರಬಹುದು ಎಂದು ಹೇಳಿವೆ. ವಿರೋಧ ಪಕ್ಷಗಳ ಒಕ್ಕೂಟ 'INDIA' ಇದನ್ನು ಅಲ್ಲಗಳೆಯುತ್ತಿದೆ.
ಜೂನ್ 4 ರಂದು ಫಲಿತಾಂಶ
ದೇಶದಲ್ಲಿ ಈಗಾಗಲೇ ಏಳು ಹಂತದಲ್ಲಿ ಚುನಾವಣೆಗಳು ಮುಗಿದಿವೆ. ಕರ್ನಾಟಕದಲ್ಲೂ ಎರಡೂ ಹಂತದಲ್ಲಿ ಚುನಾವಣೆಗಳು ಮುಗಿದಿದ್ದು, ರಾಜ್ಯದ ಜನರು ಯಾವ ಪಕ್ಷದ ಪರ ಒಲವು ಹೊಂದಿದ್ದಾರೆ ಎಂಬುದನ್ನು ನೋಡಲು ಕ್ಷಣ ಗಣನೆ ಆರಂಭವಾಗಿದೆ. ದೇಶದ 543 ಕ್ಷೇತ್ರದ ಚುನಾವಣಾ ಫಲಿತಾಂಶ ಜೂನ್ 4 ರಂದು ಹೊರ ಬೀಳಲಿದೆ.
ಕರ್ನಾಟಕದಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಲಿದೆ ಎಂದು ಎಕ್ಸಿಟ್ ಪೋಲ್‌ಗಳು ಭವಿಷ್ಯ ನುಡಿದಿವೆ. ಇನ್ನು ಕಾಂಗ್ರೆಸ್ ಡಬಲ್ ಡಿಜಿಟ್ ಸಾಧನೆಯನ್ನು ಸಹ ಮಾಡುವುದಿಲ್ಲ ಎಂದು ಭವಿಷ್ಯ ನುಡಿದಿವೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications