ಮೋದಿ ನೇತೃತ್ವದಲ್ಲಿ ದಕ್ಷಿಣ ಭಾರತದ ಬಿಜೆಪಿ ಸಂಸದರ ಸಭೆ
ಇತ್ತೀಚೆಗೆ ನಡೆದ ಪಂಚರಾಜ್ಯ ಚುನಾವಣೆಗಳಲ್ಲಿ ಬಿಜೆಪಿಯು ಭರ್ಜರಿ ಜಯ ಗಳಿಸಿದ ನಂತರ ಇದೇ ಮೊದಲ ಬಾರಿಗೆ ದಕ್ಷಿಣ ಭಾರತದ ಎಲ್ಲಾ ಬಿಜೆಪಿ ಸಂಸದರ ಸಭೆಯನ್ನು ಕರೆದಿರುವುದು ಸಾಕಷ್ಟು ಕುತೂಹಲಗಳಿಗೆ ಕಾರಣವಾಗಿದೆ.
ನವದೆಹಲಿ, ಮಾರ್ಚ್ 31: ಪ್ರಧಾನಿ ನರೇಂದ್ರ ಮೋದಿಯವರು ಇಂದು ದಕ್ಷಿಣ ಭಾರತದ ಬಿಜೆಪಿ ಸಂಸದರ ಸಭೆ ಕರೆದಿದ್ದಾರೆ. ಇಂದು ಬೆಳಗ್ಗೆ (ಮಾ. 31ರ ಬೆಳಗ್ಗೆ8 ಗಂಟೆಗೆ) ಸಭೆ ನಡೆಯಲಿದೆ.
ಸಭೆಯಲ್ಲಿ ಪಾಲ್ಗೊಳ್ಳುವ ಸಂಬಂಧ, ಕರ್ನಾಟಕ, ಕೇರಳ, ಆಂಧ್ರಪ್ರದೇಶ, ತಮಿಳುನಾಡು, ಪಾಂಡಿಚೇರಿ ರಾಜ್ಯಗಳ ಸಂಸದರು ಸಭೆಗೆ ಹಾಜರಾಗಲಿದ್ದಾರೆ.

ಕರ್ನಾಟಕದಿಂದ ಕೇಂದ್ರ ಸಚಿವರಾದ ಅನಂತ್ ಕುಮಾರ್, ಡಿವಿ ಸದಾನಂದ ಗೌಡ, ರಮೇಶ್ ಜಿಗಜಿಣಗಿ ಮುಂತಾದವರು ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇತ್ತೀಚೆಗೆ ನಡೆದ ಪಂಚರಾಜ್ಯ ಚುನಾವಣೆಗಳಲ್ಲಿ ಬಿಜೆಪಿಯು ಭರ್ಜರಿ ಜಯ ಗಳಿಸಿದ ನಂತರ ಇದೇ ಮೊದಲ ಬಾರಿಗೆ ದಕ್ಷಿಣ ಭಾರತದ ಎಲ್ಲಾ ಬಿಜೆಪಿ ಸಂಸದರ ಸಭೆಯನ್ನು ಕರೆದಿರುವುದು ಸಾಕಷ್ಟು ಕುತೂಹಲಗಳಿಗೆ ಕಾರಣವಾಗಿದೆ.
ಮುಂದಿನ ದಿನಗಳಲ್ಲಿ ದಕ್ಷಿಣ ಭಾರತವನ್ನೂ ಬಿಜೆಪಿಯ ಭದ್ರ ನೆಲೆಯನ್ನಾಗಿ ಪರಿವರ್ತಿಸುವುದರ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.

Click it and Unblock the Notifications