ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದಲ್ಲಿ ಮುಂಗಾರು ದುರ್ಬಲ: ಯಾವ ರಾಜ್ಯಗಳಲ್ಲಿ ಹೆಚ್ಚು ಮಳೆ

|
Google Oneindia Kannada News

ಬೆಂಗಳೂರು,ಜೂನ್ 16: ಕರ್ನಾಟಕದ ಉತ್ತರ ಒಳನಾಡಿನಲ್ಲಿ ಮುಂಗಾರು ದುರ್ಬಲವಾಗಿದೆ. ಕೆಲವೇ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ.

Recommended Video

COVID-19 have connection with the solar eclipse? | Oneindia Kannada

ದಕ್ಷಿಣ ಕನ್ನಡದ ಮಾಣಿಯಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಪುತ್ತೂರು, ಪಣಂಬೂರು, ಶಿರಾಲಿ, ಕಾರ್ಕಳ, ಉಡುಪಿ, ಕೊಲ್ಲೂರು, ಮಂಗಳೂರು, ಭಾಗಮಂಡಲ, ತಾಳಗುಪ್ಪ, ಹೊನ್ನಾವರ, ಸಿದ್ದಾಪುರ, ಕುಂದಾಪುರ, ಯಲ್ಲಾಪುರ, ಕದ್ರಾ, ಕಮ್ಮರಡಿ, ಸೋಮವಾರಪೇಟೆ, ವಿರಾಜಪೇಟೆ, ಸಾವಣೂರು, ಶಿಗ್ಗಾಂ, ಮಡಿಕೇರಿ, ಹಾಸನ, ಎನ್‌ಆರ್‌ ಪುರದಲ್ಲಿ ಮಳೆಯಾಗಿದೆ.

ಮುಂದಿನ 2 ದಿನಗಳಲ್ಲಿ ಕರ್ನಾಟಕದ ಈ ಮೂರು ಜಿಲ್ಲೆಗಳಲ್ಲಿ ಭಾರಿ ಮಳೆಮುಂದಿನ 2 ದಿನಗಳಲ್ಲಿ ಕರ್ನಾಟಕದ ಈ ಮೂರು ಜಿಲ್ಲೆಗಳಲ್ಲಿ ಭಾರಿ ಮಳೆ

ಮುಂಗಾರು ಆರಂಭಕ್ಕೂ ಮುನ್ನವೇ ರಾಜ್ಯದಲ್ಲಿ ಮಳೆ ಆರಂಭವಾಗಿತ್ತು. ಒಂದೆರೆಡು ದಿನಗಳ ಮಳೆ ಬಳಿಕ ಈಗ ಕಳೆದ ಎರಡು ದಿನಗಳಿಂದ ಸಣ್ಣ ಪ್ರಮಾಣದಲ್ಲಿ ಮಳೆಯಾಗುತ್ತಿದೆ.

ಕನಾಟಕದಲ್ಲಿ ಎಲ್ಲೆಲ್ಲಿ ಮಳೆ

ಕನಾಟಕದಲ್ಲಿ ಎಲ್ಲೆಲ್ಲಿ ಮಳೆ

ಕರ್ನಾಕದ ಕರಾವಳಿ ಭಾಗ, ಉತ್ತರ ಕನ್ನಡ, ದಕ್ಷಿಣ ಕನ್ನ, ಉಡುಪಿಯಲ್ಲಿ ಜೂನ್ 16-20ರವರೆಗೂ ಭಾರಿ ಮಳೆಯಾಗಲಿದೆ.

ಬೆಂಗಳೂರು ಹವಾಮಾನ ಹೇಗಿದೆ?

ಬೆಂಗಳೂರು ಹವಾಮಾನ ಹೇಗಿದೆ?

ಬೆಂಗಳೂರಿನಲ್ಲಿಇನ್ನೆರೆಡು ದಿನ ಮೋಡಕವಿದ ವಾತಾವರಣ, ತುಂತುರು ಮಳೆಯಾಗಲಿದೆ.ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿರಲಿದೆ.

ಈ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇಲ್ಲ

ಈ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇಲ್ಲ

ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಮೈಸೂರು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆ ಇದೆ.

ಎಲ್ಲೆಲ್ಲಿ ಮುಂಗಾರು ಚುರುಕು

ಎಲ್ಲೆಲ್ಲಿ ಮುಂಗಾರು ಚುರುಕು

ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಉತ್ತರ ಪ್ರದೇಶ, ಮಧ್ಯಪ್ರದೇಶದಲ್ಲಿ ಮುಂಗಾರು ಚುರುಕುಗೊಂಡಿದೆ. ಕೊಲ್ಕತ್ತದಲ್ಲಿ ಗುರುವಾರದಿಂದ ಭಾರಿ ಮಳೆಯಾಗುವ ಮುನ್ಸೂಚನೆ ದೊರೆತಿದೆ. ಉತ್ತರ ಪ್ರದೇಶದ ಬುಲಂದ್ ಶೆಹರ್‌ನಲ್ಲಿ ಮುಂದಿನ 2 ದಿನ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮಹಾರಾಷ್ಟ್ರ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಒಡಿಶಾ, ಜಾರ್ಖಂಡ್‌, ಬಿಹಾರದಲ್ಲಿ ಮುಂದಿನ 2-3 ದಿನ ಅತಿ ಹೆಚ್ಚು ಮಳೆ ಬೀಳಲಿದೆ.

English summary
Indian Meteorological Department predicted that Southwest Monsoon Was Weak Over Karnataka.rainfall is very likely to continue over Maharashtra, Chhattisgarh, West Bengal and Sikkim, Odisha, Jharkhand and Bihar during next 2-3 days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X