• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಲಾಯಂ ಸಿಂಗ್ ಯಾದವ್ ನಿಧನ

|
Google Oneindia Kannada News

ಲಕ್ನೋ, ಅಕ್ಟೋಬರ್ 10; ಸಮಾಜವಾದಿ ಪಕ್ಷದ ಸಂಸ್ಥಾಪಕ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ವಿಧಿವಶರಾದರು. ಹಲವು ತಿಂಗಳುಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು.

ಸೋಮವಾರ ಬೆಳಗ್ಗೆ ಮುಲಾಯಂ ಸಿಂಗ್ ಯಾದವ್ (82) ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೂರು ಬಾರಿ ಮುಲಾಯಂ ಸಿಂಗ್ ಯಾದವ್ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದರು.

ಮುಲಾಯಂ ಸಿಂಗ್ ಯಾದವ್ ಆರೋಗ್ಯ ಸ್ಥಿತಿ ಚಿಂತಾಜನಕಮುಲಾಯಂ ಸಿಂಗ್ ಯಾದವ್ ಆರೋಗ್ಯ ಸ್ಥಿತಿ ಚಿಂತಾಜನಕ

ಸಮಾಜವಾದಿ ಪಕ್ಷದ ನಾಯಕ ಮುಲಾಯಂ ಸಿಂಗ್ ಯಾದವ್‌ಗೆ ಹಲವು ದಿನಗಳಿಂದ ಜೀವರಕ್ಷಕ ಔಷಧಿಗಳನ್ನು ನೀಡಿ ಚಿಕಿತ್ಸೆ ನೀಡಲಾಗುತ್ತಿತ್ತು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿವಿಧ ಗಣ್ಯರು ಮುಲಾಯಂ ಸಿಂಗ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಮುಲಾಯಂ ಸಿಂಗ್ ಯಾದವ್ ಗಂಭೀರ, ಜೀವರಕ್ಷಕ ಔಷಧಗಳನ್ನು ನೀಡಲಾಗುತ್ತಿದೆಮುಲಾಯಂ ಸಿಂಗ್ ಯಾದವ್ ಗಂಭೀರ, ಜೀವರಕ್ಷಕ ಔಷಧಗಳನ್ನು ನೀಡಲಾಗುತ್ತಿದೆ

ಗುರುಗ್ರಾಮದಲ್ಲಿರುವ ಮೇದಾಂತ ಆಸ್ಪತ್ರೆಯಲ್ಲಿ ಮುಲಾಯಂ ಸಿಂಗ್ ಯಾದವ್ ಚಿಕಿತ್ಸೆ ಪಡೆಯುತ್ತಿದ್ದರು. ಆಗಸ್ಟ್ 22ರಂದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಸಂಜೀವ್ ಗುಪ್ತ ನೇತೃತ್ವದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಭಾನುವಾರ ಮುಲಾಯಂ ಸಿಂಗ್ ಯಾದವ್ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಸಮಾಜವಾದಿ ಪಕ್ಷ ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿತ್ತು.

ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮುಲಾಯಂ ಸಿಂಗ್ ಪುತ್ರ ಅಖಿಲೇಶ್ ಯಾದವ್‌ಗೆ ಕರೆ ಮಾಡಿ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದರು.

1939, ನವೆಂಬರ್ 22ರಂದು ಜನಿಸಿದ ಮುಲಾಯಂ ಸಿಂಗ್ ಯಾದವ್ 1989-91, 1993-95 ಮತ್ತು 2003-07ರ ತನಕ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಣೆ ಮಾಡಿದ್ದರು.

ಮುಲಾಯಂ ಸಿಂಗ್ ಯಾದವ್ ಆಗ್ರಾ ವಿಶ್ವವಿದ್ಯಾಲಯದಿಂದ ಪೊಲಿಟಿಕಲ್ ಸೈನ್ಸ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು. 15ನೇ ವಯಸ್ಸಿನಲ್ಲಿಯೇ ರಾಜಕೀಯದ ಸಂಪರ್ಕ ಪಡೆದ ಅವರು, ರಾಮ್ ಮನೋಹರ್ ಲೋಹಿಯಾ ಪ್ರಭಾವಕ್ಕೆ ಒಳಗಾದರು.

1967ರಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದ ಮುಲಾಯಂ ಸಿಂಗ್ ಯಾದವ್ 1974ರಲ್ಲಿ ಮರು ಆಯ್ಕೆಯಾದರು. ತುರ್ತು ಪರಿಸ್ಥಿತಿ ಘೋಷಣೆ ಮಾಡಿದಾಗ ಬಂಧನಕ್ಕೊಳಗಾದರು. 1977ರಲ್ಲಿ ಬಿಡುಗಡೆಗೊಂಡ ಬಳಿಕ ಮತ್ತೆ ಚುನಾವಣೆಗೆ ಸ್ಪರ್ಧಿಸಿ ಗೆಲುವು ಕಂಡರು.

ಮುಲಾಯಂ ಸಿಂಗ್ ಯಾದವ್
Know all about
ಮುಲಾಯಂ ಸಿಂಗ್ ಯಾದವ್

1992ರಲ್ಲಿ ಮುಲಾಯಂ ಸಿಂಗ್ ಯಾದವ್ ಸಮಾಜವಾದಿ ಪಕ್ಷ ಸ್ಥಾಪನೆ ಮಾಡಿದರು. 1993ರ ಉತ್ತರ ಪ್ರದೇಶ ಚುನಾವಣೆಯಲ್ಲಿ ಮೈತ್ರಿ ಸರ್ಕಾರ ರಚನೆ ಮಾಡುವಷ್ಟು ಸ್ಥಾನಗಳನ್ನು ಪಕ್ಷ ಪಡೆಯಿತು.

English summary
Uttar Pradesh former chief minister Mulayam Singh Yadav (82) died on October 10, 2022.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X