ಗುಜರಾತ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಸಮಾಜವಾದಿ ಪಕ್ಷ ಬೆಂಬಲ
ಅಹಮದಾಬಾದ್, ಅಕ್ಟೋಬರ್ 23: ಈ ವರ್ಷಾಂತ್ಯಕ್ಕೆ ನಡೆಯಲಿರುವ ಗುಜರಾತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲು ಸಮಾಜವಾದಿ ಪಕ್ಷ ನಿರ್ಧರಿಸಿದೆ.
"ಗುಜರಾತ್ ಚುನಾವಣೆಯಲ್ಲಿ 5 ಕ್ಷೇತ್ರಗಳಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು. ಉಳಿದೆಡೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸಲಾಗುವುದು," ಎಂದು ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ಹೇಳಿದ್ದಾರೆ.

ಇನ್ನು ದಿನಾಂಕ ಘೋಷಣೆಯಾಗದಿದ್ದರೂ ದಿನದಿಂದ ದಿನಕ್ಕೆ ಗುಜರಾತ್ ಚುನಾವಣಾ ಕಣ ರಂಗೇರುತ್ತಿದ್ದುಇಂದು ಅಹಮದಾಬಾದ್ ನಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಒಬಿಸಿ ವರ್ಗದವರ 'ನವ್ಸರ್ಜನ್ ಜನಾದೇಶ ಮಹಾಸಮ್ಮೇಳನ' ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಇನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಗಾಂಧಿನಗರದಲ್ಲಿ ಬಂದಿಳಿದಿದ್ದು ಬಿಜೆಪಿ ರಾಜ್ಯ ಮಂಡಳಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.












Click it and Unblock the Notifications