ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಧ್ಯಪ್ರದೇಶ ಚುನಾವಣೆ: ಕೂಸು ಹುಟ್ಟುವ ಮುನ್ನವೇ ಕುಲಾವಿ ಹೆಣೆದ ಕಾಂಗ್ರೆಸ್

|
Google Oneindia Kannada News

ರಫೇಲ್ ಯುದ್ದವಿಮಾನ ಖರೀದಿ ವಿಚಾರವನ್ನು ಇಟ್ಟುಕೊಂಡು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ & ಕೋ, ಬೀದಿಗಿಳಿದು ಕೆಲವು ತಿಂಗಳುಗಳಾಯಿತು. ಅದಾದ ನಂತರ, ಹೊರಬಿದ್ದ ಜನಾಭಿಪ್ರಾಯ ಸಂಗ್ರಹಣೆಯಲ್ಲಿ ಪ್ರಧಾನಿ ಹುದ್ದೆಗೆ ಯಾರು ಸೂಕ್ತ ಎನ್ನುವ ಪ್ರಶ್ನೆಗೆ ಮೋದಿಯೇ ಸೂಕ್ತ ಎನ್ನುವ ಫಲಿತಾಂಶ ಹೊರಬಿದ್ದಿತ್ತು.

ಇದುವರೆಗೆ ಪ್ರಕಟಗೊಂಡ ಹಲವು ಚುನಾವಣಾಪೂರ್ವ ಸಮೀಕ್ಷೆಯ ಪ್ರಕಾರ, ಇನ್ನೇನು ಕೆಲವು ದಿನಗಳಲ್ಲಿ ನಡೆಯಲಿರುವ ಮಧ್ಯಪ್ರದೇಶದ ಅಸೆಂಬ್ಲಿ ಚುನಾವಣೆಯಲ್ಲಿ ಶಿವರಾಜ್ ಸಿಂಗ್ ಚೌಹಾಣ್ ಅವರು ಇನ್ನೊಂದು ಅವಧಿಗೂ ಮುಂದುವರಿಯುವ ಸಾಧ್ಯತೆ ದಟ್ಟವಾಗಿದೆ ಎನ್ನುವ ರಿಸಲ್ಟ್ ಬಂದಿತ್ತು.

ಹಿರಿಯ ನಾಯಕರಿಗೆ ಟಿಕೆಟ್ ಇಲ್ಲ! ಫಲಿಸುತ್ತಾ, ಉಲ್ಟಾ ಹೊಡೆಯತ್ತಾ ಕಾಂಗ್ರೆಸ್ ತಂತ್ರ? ಹಿರಿಯ ನಾಯಕರಿಗೆ ಟಿಕೆಟ್ ಇಲ್ಲ! ಫಲಿಸುತ್ತಾ, ಉಲ್ಟಾ ಹೊಡೆಯತ್ತಾ ಕಾಂಗ್ರೆಸ್ ತಂತ್ರ?

ಈ ಫಲಿತಾಂಶಗಳನ್ನು ಮೀರಿ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದೇ ಆದಲ್ಲಿ, ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾರು ಮತ್ತು ಟಿಕೆಟ್ ಹಂಚಿಕೆಯ ವಿಚಾರದಲ್ಲಿ ಕಾಂಗ್ರೆಸ್ಸಿನ ಮೊದಲ ಪಂಕ್ತಿಯಲ್ಲಿ ಕಾಣಿಸಿಕೊಳ್ಳುವ ನಾಯಕರು, ರಾಹುಲ್ ಗಾಂಧಿಯ ಮುಂದೆಯೇ ಜಗಳವಾಡಿಕೊಂಡಿದ್ದಾರೆ ಎನ್ನುವ ಮಾಹಿತಿಯಿದೆ.

ಈ ನಡುವೆ, ಮಧ್ಯಪ್ರದೇಶ ಕಾಂಗ್ರೆಸ್ ಕಮಿಟಿಯ ಕಾರ್ಯದರ್ಶಿಯಾಗಿರುವ ಜೀತೂ ಪಟ್ವಾರಿ, ಇಂದೋರ್ ನಲ್ಲಿ ತಮ್ಮ ಚುನಾವಣಾ ಪ್ರಚಾರದ ವೇಳೆ, 'ಪಕ್ಷದ ಮರ್ಯಾದೆ ಹೋದರೆ ಹೋಗಲಿ.. ನನ್ನ ಮರ್ಯಾದೆ ಉಳಿಸಿ' ಎಂದು ಜನರಲ್ಲಿ ಮತಯಾಚಿಸುವ ವಿಡಿಯೋ ವೈರಲ್ ಆಗಿದ್ದು, ಕಾಂಗ್ರೆಸ್ಸಿಗೆ ಭಾರೀ ಮುಜುಗರ ತಂದೊಡ್ಡಿದೆ.

ಸಮೀಕ್ಷೆಗಳ ಸಮೀಕ್ಷೆ: ಮಧ್ಯಪ್ರದೇಶದಲ್ಲಿ ಮೋದಿ ಬಲದಿಂದ ಮತ್ತೆ ಅಧಿಕಾರಸಮೀಕ್ಷೆಗಳ ಸಮೀಕ್ಷೆ: ಮಧ್ಯಪ್ರದೇಶದಲ್ಲಿ ಮೋದಿ ಬಲದಿಂದ ಮತ್ತೆ ಅಧಿಕಾರ

ಇದಲ್ಲದೇ, ಪಕ್ಷದ ಮುಖಂಡರಾದ ಜ್ಯೋತಿರಾದಿತ್ಯ ಸಿಂಧ್ಯಾ ಮತ್ತು ಕಮಲ್ ನಾಥ್ ಜೊತೆಗೆ, ಇಂದೋರ್ ನಗರದ ಐಸ್ ಕ್ರೀಂ ಪಾರ್ಲರ್ ನಲ್ಲಿ, ಪಕ್ಷದ ಹಿರಿಯ ಮುಖಂಡ ಕಮಲ್ ನಾಥ್ ಅವರನ್ನು ಏಕವಚನದಲ್ಲಿ ರಾಹುಲ್ ಸಂಭೋದಿಸುವ ವಿಚಾರವನ್ನು ಇಟ್ಟುಕೊಂಡು, ಇದೇನಾ ರಾಹುಲ್ ಸಂಸ್ಕೃತಿ ಎಂದು ಬಿಜೆಪಿ ಮುಖಂಡರು ಹೋದಲೆಲ್ಲಾ ಟೀಕಿಸುತ್ತಿದ್ದಾರೆ. ಒಂದು ಸಿಎಂ ಹುದ್ದೆಗೆ ಮೂರು ಟವೆಲ್, ಮುಂದೆ ಓದಿ..

ಮಧ್ಯಪ್ರದೇಶದಲ್ಲಿ ಅಸೆಂಬ್ಲಿ ಚುನಾವಣೆ

ಮಧ್ಯಪ್ರದೇಶದಲ್ಲಿ ಅಸೆಂಬ್ಲಿ ಚುನಾವಣೆ

ಇದೇ ನವೆಂಬರ್ 28ರಂದು ಮಧ್ಯಪ್ರದೇಶದಲ್ಲಿ ಅಸೆಂಬ್ಲಿ ಚುನಾವಣೆ ನಡೆಯಲಿದೆ. ಅಭ್ಯರ್ಥಿ ಆಯ್ಕೆಯ ಸಂಬಂಧ, ಪಕ್ಷವನ್ನು ದಡ ಸೇರಿಸುವ ಶಕ್ತಿಯುಳ್ಳವರ ಪಟ್ಟಿಯನ್ನು ಸಿದ್ದಮಾಡಲು ರಾಹುಲ್, ಸಿಂಧ್ಯಾ, ಕಮಲ್ ನಾಥ್ ಮತ್ತು ದಿಗ್ವಿಜಯ್ ಸಿಂಗ್ ಅವರಿಗೆ ಸೂಚಿಸಿದ್ದರು. ಇದೇ ವಿಚಾರದಲ್ಲಿ ದಿಗ್ವಿಜಯ್ ಸಿಂಗ್ ಮತ್ತು ಜ್ಯೋತಿರಾದಿತ್ಯ ಸಿಂಧ್ಯಾ ನಡುವೆ ರಾಹುಲ್ ಸಮ್ಮುಖದಲ್ಲೇ ಮಾತಿನ ಚಕಮಕಿ ನಡೆದಿತ್ತು ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಗೆಹ್ಲೋಟ್, ಮೊಯ್ಲಿ, ಪಟೇಲ್ ಒಳಗೊಂಡ ಕಮಿಟಿ

ಗೆಹ್ಲೋಟ್, ಮೊಯ್ಲಿ, ಪಟೇಲ್ ಒಳಗೊಂಡ ಕಮಿಟಿ

ಇವರಿಬ್ಬರ ನಡುವಿನ ಮನಸ್ತಾಪ ಮುಂದಿನ ದಿನಗಳಲ್ಲಿ ಪಕ್ಷಕ್ಕೆ ತೊಂದರೆಯಾಗುವ ಸಾಧ್ಯತೆಯನ್ನು ಅರಿತ ರಾಹುಲ್ ಗಾಂಧಿ, ಅಶೋಕ್ ಗೆಹ್ಲೋಟ್, ವೀರಪ್ಪ ಮೊಯ್ಲಿ ಮತ್ತು ಅಹಮದ್ ಪಟೇಲ್ ಒಳಗೊಂಡ ಕಮಿಟಿಯನ್ನು ರಚಿಸಿ, ಅಭ್ಯರ್ಥಿಗಳ ಆಯ್ಕೆ ಕಮಿಟಿ ಮುಖಾಂತರವೇ ನಡೆಯಲಿದೆ ಎಂದು ಇಬ್ಬರನ್ನೂ ಸಮಾಧಾನ ಮಾಡಿ ಕಳುಹಿಸಿದ್ದಾರೆ.

ಎಬಿಪಿ ನ್ಯೂಸ್ ಸಮೀಕ್ಷೆ: ರಾಜಸ್ತಾನ, ಮಧ್ಯಪ್ರದೇಶದಲ್ಲಿ ಬಿಜೆಪಿ ಹವಾಎಬಿಪಿ ನ್ಯೂಸ್ ಸಮೀಕ್ಷೆ: ರಾಜಸ್ತಾನ, ಮಧ್ಯಪ್ರದೇಶದಲ್ಲಿ ಬಿಜೆಪಿ ಹವಾ

ಮುಖ್ಯಮಂತ್ರಿ ಅಭ್ಯರ್ಥಿಯಾರು

ಮುಖ್ಯಮಂತ್ರಿ ಅಭ್ಯರ್ಥಿಯಾರು

ಮಧ್ಯಪ್ರದೇಶದ ಮುಖ್ಯಮಂತ್ರಿ ಅಭ್ಯರ್ಥಿಯಾರು ಎನ್ನುವುದನ್ನು ಕಾಂಗ್ರೆಸ್ ಇನ್ನೂ ಘೋಷಿಸಲಿಲ್ಲ. ಆದರೆ, ಸಿಂಧ್ಯಾ ಮತ್ತು ಕಮಲ್ ನಾಥ್ ಅವರ ಹೆಸರು ಮಂಚೂಣಿಯಲ್ಲಿ ಕೇಳಿಬರುತ್ತಿರುವ ಹೊತ್ತಿನಲ್ಲಿ ದಿಗ್ವಿಜಯ್ ಸಿಂಗ್ ಹೆಸರನ್ನು ಉದ್ದೇಶಪೂರ್ವಕವಾಗಿ ತೇಲಿಬಿಡಲಾಗಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ರಾಹುಲ್ ಗಾಂಧಿ, ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಸಿಂಧ್ಯಾ ಮತ್ತು ಕಮಲ್ ನಾಥ್ ಇಬ್ಬರನ್ನು ಮಾತ್ರ ಹೊಗಳುತ್ತಿದ್ದಾರೆ.

ಪಕ್ಷದ ಚಟುವಟಿಕೆಯಿಂದ ದೂರ ಸರಿಯುತ್ತಿರುವ ಸಿಂಗ್

ಪಕ್ಷದ ಚಟುವಟಿಕೆಯಿಂದ ದೂರ ಸರಿಯುತ್ತಿರುವ ಸಿಂಗ್

ಸಿಎಂ ಅಭ್ಯರ್ಥಿಗೆ ತನ್ನ ಹೆಸರು ಕೇಳಿಬರುತ್ತಿರುವ ಹೊತ್ತಿನಲ್ಲೇ ದಿಗ್ವಿಜಯ್ ಸಿಂಗ್ ಪಕ್ಷದ ಚಟುವಟಿಕೆಯಿಂದ ದೂರ ಸರಿಯುತ್ತಿದ್ದಾರೆ. ಸೋನಿಯಾ ಗಾಂಧಿಗೆ ಸುದೀರ್ಘ ಪತ್ರ ಬರೆದಿರುವ ದಿಗ್ವಿಜಯ್ ಸಿಂಗ್, ಪಕ್ಷದಲ್ಲಿ ನನ್ನನ್ನು ಮೂಲೆಗುಂಪು ಮಾಡಲಾಗುತ್ತಿದೆ ಎಂದು ದೂರಿದ್ದಾರೆ. ಜೊತೆಗೆ, ತಾನು ಸೂಚಿಸುವ 57 ಅಭ್ಯರ್ಥಿಗಳಿಗೆ ಟಿಕೆಟ್ ನೀಡಬೇಕೆಂದು ಮನವಿ ಮಾಡಿದ್ದಾರೆಂದು ವರದಿಯಾಗಿದೆ.

ಮಧ್ಯಪ್ರದೇಶದಲ್ಲಿ ಮತ್ತೆ ಬಿಜೆಪಿಯೇ ಅಧಿಕಾರಕ್ಕೆ! ಚೌಹಾಣ್ ವಿಶ್ವಾಸಮಧ್ಯಪ್ರದೇಶದಲ್ಲಿ ಮತ್ತೆ ಬಿಜೆಪಿಯೇ ಅಧಿಕಾರಕ್ಕೆ! ಚೌಹಾಣ್ ವಿಶ್ವಾಸ

ಮೂಲ ಕಾಂಗ್ರೆಸ್ಸಿಗರನ್ನು ಕಡೆಗಣಿಸಲಾಗುತ್ತಿದೆ ಎಂಬ ಆಕ್ರೋಶ

ಮೂಲ ಕಾಂಗ್ರೆಸ್ಸಿಗರನ್ನು ಕಡೆಗಣಿಸಲಾಗುತ್ತಿದೆ ಎಂಬ ಆಕ್ರೋಶ

ಟಿಕೆಟ್ ಹಂಚಿಕೆಯ ಸಮಯದಲ್ಲಿ ಮೂಲ ಕಾಂಗ್ರೆಸ್ಸಿಗರನ್ನು ಕಡೆಗಣಿಸಲಾಗುತ್ತಿದೆ ಎಂಬ ಆಕ್ರೋಶವೂ ವ್ಯಕ್ತವಾಗುತ್ತಿದೆ. ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಜೊತೆ ಬಿಎಸ್ಪಿ ಮೈತ್ರಿ ಮಾಡಿಕೊಳ್ಳದಿದ್ದರೂ ಬಿಎಸ್ಪಿಯಿಂದ ಟಿಕೆಟ್ ವಂಚಿತರಾದ ಹಲವರು ಕಾಂಗ್ರೆಸ್ ಸೇರಿದ್ದಾರೆ. ಅವರಲ್ಲಿ ಗೆಲ್ಲಬಹುದಾದ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಟಿಕೆಟ್ ನೀಡಲು ನಿರ್ಧರಿಸಿದೆ. ಇದರಿಂದ ಮೂಲ ಕಾಂಗ್ರೆಸ್ಸಿಗರಲ್ಲಿ ಅಸಮಾಧಾನ ಉಂಟಾಗಿದೆ.

English summary
Spat between Digvijaya Singh and Jyotiraditya Scindia over ticket distribution and who is the Chief Ministerial candidate.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X