ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದಿಂದ ಉಕ್ರೇನ್‌ನತ್ತ ಹೊರಟ ಏರ್ ಇಂಡಿಯಾ ವಿಮಾನ

|
Google Oneindia Kannada News

ನವದೆಹಲಿ, ಫೆಬ್ರವರಿ 22:ಉಕ್ರೇನ್‌ನಲ್ಲಿ ದಿನದಿಂದ ದಿನಕ್ಕೆ ಪರಿಸ್ಥಿತಿ ಬಿಗಡಾಯಿಸುತ್ತಿದೆ. ಅಲ್ಲಿರುವ ಭಾರತೀಯರನ್ನು ಸುರಕ್ಷಿತವಾಗಿ ಕರೆತರಲು ಏರ್ ಇಂಡಿಯಾ ವಿಮಾನಗಳು ತೆರಳಿವೆ.

ಉಕ್ರೇನ್‌ನಲ್ಲಿ ಸತತ ಮೂರು ದಿನಗಳ ಕಾಲ ಕಾರ್ಯಾಚರಣೆ ನಡೆಯಲಿದ್ದು, ಭಾರತೀಯರನ್ನು ಸುರಕ್ಷಿತವಾಗಿ ಕರೆತರುವ ಕೆಲಸ ಇದಾಗಿದೆ.

ಉಕ್ರೇನ್‌-ರಷ್ಯಾ ಬಿಕ್ಕಟ್ಟು: ಉಕ್ರೇನ್‌ ತೊರೆಯಲು ಭಾರತೀಯರಿಗೆ ಮತ್ತೆ ಸೂಚನೆಉಕ್ರೇನ್‌-ರಷ್ಯಾ ಬಿಕ್ಕಟ್ಟು: ಉಕ್ರೇನ್‌ ತೊರೆಯಲು ಭಾರತೀಯರಿಗೆ ಮತ್ತೆ ಸೂಚನೆ

ಉಕ್ರೇನ್​ ಮೇಲೆ ರಷ್ಯಾ ಯುದ್ಧ ಸಾರುವ ಭೀತಿ ದಟ್ಟವಾದ ಹಿನ್ನೆಲೆಯಲ್ಲಿ ಉಕ್ರೇನ್​ನಲ್ಲಿರುವ ಭಾರತೀಯರನ್ನು ರಕ್ಷಿಸಲು ಭಾರತ ಸರ್ಕಾರ ವಿಶೇಷ ವಿಮಾನ ವ್ಯವಸ್ಥೆ ಮಾಡಿದೆ. ಇಂದು ರಾತ್ರಿ ಉಕ್ರೇನ್​ನಿಂದ ಭಾರತೀಯ ಪ್ರಜೆಗಳನ್ನು ಹೊತ್ತ ಏರ್​ ಇಂಡಿಯಾ ವಿಮಾನ ಭಾರತಕ್ಕೆ ಹಾರಲಿದೆ.

Special Air India Flight Leaves For Ukraine To Bring Back Indians As Tensions Escalate

ಉಕ್ರೇನ್​ನಿಂದ ಭಾರತಕ್ಕೆ ಮರಳಲು ಇಚ್ಚಿಸಿದ ಭಾರತೀಯರನ್ನು ಕರೆತರಲು ಏರ್​ ಇಂಡಿಯಾ ಮೂರು ವಿಮಾನಗಳನ್ನು ವ್ಯವಸ್ಥೆ ಮಾಡಿದೆ. ಇವು ಫೆಬ್ರವರಿ 22, 24, 26 ರಂದು ಕಾರ್ಯಾಚರಣೆ ನಡೆಸಲಿವೆ.

ಇದಲ್ಲದೇ, ದೆಹಲಿಯಿಂದ ಬೋಯಿಂಗ್ ಡ್ರೀಮ್‌ಲೈನರ್ ಬಿ-787 ವಿಮಾನವು ಉಕ್ರೇನ್​ಗೆ ಇಂದು ಹೊರಟಿದೆ. ಇದು 200ಕ್ಕೂ ಹೆಚ್ಚು ಆಸನಗಳ ಸಾಮರ್ಥ್ಯ ಹೊಂದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಉಕ್ರೇನ್​ ತೊರೆಯಲು ಇಚ್ಚಿಸಿ ನೋಂದಾಯಿಸಿಕೊಂಡಿದ್ದ ವಿದ್ಯಾರ್ಥಿಗಳು ಸೇರಿದಂತೆ ಭಾರತೀಯ ಪ್ರಜೆಗಳನ್ನು ಸುರಕ್ಷಿತವಾಗಿ ಕರೆತರಲು ಟಾಟಾ ಒಡೆತನದ ಏರ್​ ಇಂಡಿಯಾದ ಮೂರು ವಿಮಾನಗಳಲ್ಲಿ ಒಂದು ವಿಮಾನ ಇಂದು ರಾತ್ರಿಯೇ ನಾಗರಿಕರನ್ನು ಕರೆತರಲಿದೆ ಎಂದು ವಿಮಾನಸಂಸ್ಥೆಯ ಅಧಿಕಾರಿಯೊಬ್ಬರು ತಿಳಿಸಿದರು.

ಏರ್‌ ಇಂಡಿಯಾದ ಎಐ-1946 ಮೊದಲ ವಿಶೇಷ ವಿಮಾನದಲ್ಲಿ ಭಾರತೀಯ ಪ್ರಜೆಗಳು ಇಂದು ರಾತ್ರಿ ತವರು ದೇಶಕ್ಕೆ ಮರಳಲಿದ್ದಾರೆ ಎಂದು ಏರ್‌ಲೈನ್‌ ಮೂಲಗಳು ತಿಳಿಸಿವೆ. ಏರ್‌ ಇಂಡಿಯಾ ಫೆರ್ರಿ ವಿಮಾನವು ಸೋಮವಾರ ಉಕ್ರೇನ್‌ನಿಂದ ಭಾರತೀಯರನ್ನು ವಾಪಸ್‌ ಕರೆತಂದಿತ್ತು. ಏರ್‌ ಇಂಡಿಯಾದ ಮೂರು ವಿಮಾನಗಳು ಈ ಕಾರ್ಯಾಚರಣೆಯಲ್ಲಿವೆ.

ಏರ್‌ ಇಂಡಿಯಾದ ಮೂರು ವಿಮಾನಗಳು ಫೆ.22, 24 ಮತ್ತು 26ರಂದು ಭಾರತ ಮತ್ತು ಉಕ್ರೇನ್‌ ನಡುವೆ ಕಾರ್ಯಾಚರಣೆ ನಡೆಸಲಿದೆ ಎಂದು ತಿಳಿಸಲಾಗಿದೆ. ಉಕ್ರೇನ್‌ಗೆ ವಿಶೇಷ ಕಾರ್ಯಾಚರಣೆಯ ಭಾಗವಾಗಿ ದೆಹಲಿಯಿಂದ ಬೋಯಿಂಗ್‌ ಡ್ರೀಮ್‌ಲೈನರ್‌ ಎಐ-1947 ವಿಮಾನವು ಟೇಕ್‌ ಆಫ್‌ ಆಗಿದೆ. ಇದು 200ಕ್ಕೂ ಹೆಚ್ಚು ಆಸನಗಳ ಸಾಮರ್ಥ್ಯವನ್ನು ಹೊಂದಿದೆ.

ರಷ್ಯಾದೊಂದಿಗೆ ಉಕ್ರೇನ್ ಗಡಿಯಲ್ಲಿ ಉಲ್ಬಣಗೊಳ್ಳುತ್ತಿರುವ ಉದ್ವಿಗ್ನತೆಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಭಾರತ ಮಂಗಳವಾರ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ವಿಶೇಷ ಸಭೆಯಲ್ಲಿ ಪರಸ್ಪರ ಸೌಹಾರ್ದಯುತ ಪರಿಹಾರವನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಕಡೆಯವರು ಅತ್ಯಂತ ಸಂಯಮ ಮತ್ತು ರಾಜತಾಂತ್ರಿಕ ಪ್ರಯತ್ನಗಳನ್ನು ಮಾಡಬೇಕು ಎಂದು ಬಲವಾಗಿ ಪ್ರತಿಪಾದಿಸಿತ್ತು

ವಿದ್ಯಾರ್ಥಿಗಳು ಸೇರಿದಂತೆ ಭಾರತೀಯ ಪ್ರಜೆಗಳನ್ನು ವಾಪಸ್‌ ಕರೆಸಿಕೊಳ್ಳಲು ಭಾರತ ಸರ್ಕಾರ ಮುಂದಾಗಿದೆ. ಉಕ್ರೇನ್‌ನಲ್ಲಿ ನೆಲೆಸಿರುವ ಭಾರತೀಯರು ಸುರಕ್ಷಿತವಾಗಿ ಹಿಂದಿರುಗಲು ಈಗಾಗಲೇ ನೋಂದಾಯಿಸಿಕೊಂಡಿದ್ದಾರೆ.

ಉಕ್ರೇನ್‌ ಮೇಲೆ ರಷ್ಯಾದ ಸಂಭವನೀಯ ಆಕ್ರಮಣದ ಭೀತಿ ಹೆಚ್ಚಿದೆ. ಹೀಗಾಗಿ ಆತಂಕವಿರುವ ಪ್ರದೇಶಗಳಲ್ಲಿ ನೆಲೆಸಿರುವ ಭಾರತೀಯ ಪ್ರಜೆಗಳನ್ನು ವಾಪಸ್‌ ಕರೆಸಿಕೊಳ್ಳಲು ಟಾಟಾ ಒಡೆತನದ ಏರ್‌ ಇಂಡಿಯಾ ಇಂದು ರಾತ್ರಿ ಉಕ್ರೇನ್‌ ತಲುಪಲಿದೆ..

English summary
Air India's special flight left for Ukraine this morning to bring back Indian nationals stranded in the former soviet state which has found itself in the middle of soaring tensions between Russia and the West.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X