ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಶೇಷ ನಿರ್ದೇಶಕ ರಾಕೇಶ್ ಆಸ್ತಾನಗೆ ಆಘಾತ, ಸಿಬಿಐಯಿಂದ ವರ್ಗಾವಣೆ

|
Google Oneindia Kannada News

ನವದೆಹಲಿ, ಜನವರಿ 18 : ಸಿಬಿಐನ ವಿಶೇಷ ನಿರ್ದೇಶಕ ರಾಕೇಶ್ ಆಸ್ತಾನ ಅವರಿಗೆ ಆಘಾತಕಾರಿ ಸುದ್ದಿಯನ್ನು ನೀಡಲಾಗಿದೆ. ರಾಕೇಶ್ ಅವರ ಅಧಿಕಾರ ಅವಧಿಯನ್ನು ಮೊಟಕುಗೊಳಿಸಲಾಗಿದ್ದು, ಸಿಬಿಐನಿಂದ ಕೂಡಾ ವರ್ಗಾಯಿಸಿ ಆದೇಶ ಹೊರಡಿಸಲಾಗಿದೆ.

ಸಿಬಿಐ ಮಾಜಿ ನಿರ್ದೇಶಕ ಅಲೋಕ್ ವರ್ಮಾ ಅವರನ್ನು ಅವರ ಸ್ಥಾನದಿಂದ ಕೆಳಗಿಳಿಸಿದ ಬಳಿಕ ಈ ಬೆಳವಣಿಗೆ ನಡೆದಿದೆ. ಅಲೋಕ್ ವರ್ಮಾ ಅವರನ್ನು ಅಗ್ನಿಶಾಮಕ ದಳ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿತ್ತು. ಆದರೆ, ಆ ಹುದ್ದೆಯನ್ನು ಒಪ್ಪಿಕೊಳ್ಳದೆ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಸಿಬಿಐ ವಿವಾದ: ರಾಕೇಶ್ ಅಸ್ಥಾನಾ ವಿರುದ್ಧದ ಕೇಸುಗಳೇ ನಾಪತ್ತೆ!ಸಿಬಿಐ ವಿವಾದ: ರಾಕೇಶ್ ಅಸ್ಥಾನಾ ವಿರುದ್ಧದ ಕೇಸುಗಳೇ ನಾಪತ್ತೆ!

ಅಲೋಕ್ ವರ್ಮಾ ಹಾಗೂ ರಾಕೇಶ್ ಆಸ್ತಾನ ಇಬ್ಬರು ಪರಸ್ಪರ ಭ್ರಷ್ಟಾಚಾರದ ಆರೋಪ ಹೊರೆಸಿ, ಕಿತ್ತಾಡಿಕೊಂಡಿದ್ದು, ಪ್ರಕರಣ ಕೋರ್ಟ್ ಮೆಟ್ಟಿಲೇರಿತ್ತು.

Special Director Rakesh Asthana moved out of CBI

ಸದ್ಯ ನಾಗೇಶ್ವರ್ ರಾವ್ ಅವರು ಸಿಬಿಐ ಹಂಗಾಮಿ ನಿರ್ದೇಶಕರಾಗಿದ್ದಾರೆ. ಜನವರಿ 24ರಂದು ಪ್ರಧಾನಿ ಮೋದಿ ನೇತೃತ್ವದ ಉನ್ನತಾಧಿಕಾರಿಗಳ ಆಯ್ಕೆ ಸಮಿತಿಯು ಹೊಸ ನಿರ್ದೇಶಕರನ್ನು ಆಯ್ಕೆ ಮಾಡಲಾಗಿದೆ.

ರಾಕೇಶ್ ಆಸ್ತಾನ ಅವರನ್ನು ಸಿಬಿಐನಿಂದ ವರ್ಗಾವಣೆ ಮಾಡಿ ನಾಗರಿಕ ವಿಮಾನಯಾನ ಭದ್ರತೆ ಇಲಾಖೆಗೆ ಕಳಿಸಲಾಗಿದೆ.ಜೊತೆಗೆ ಇನ್ನಿತರ ಅಧಿಕಾರಿಗಳಾದ ಜಂಟಿ ನಿರ್ದೇಶಕ ಅರುಣ್ ಕುಮಾರ್ ಶರ್ಮ, ಎಂಕೆ ಸಿನ್ಹಾ, ಜಯಂತ್ ನಾಯ್ಕ್ ನವರೆ ಅವರಿಗೂ ವರ್ಗಾವಣೆಯಾಗಿದೆ. ಈ ಮೂರು ಅಧಿಕಾರಿಗಳ ಅಧಿಕಾರ ಅವಧಿಯನ್ನು ಕಡಿತಗೊಳಿಸಲಾಗಿದೆ. ರಾಕೇಶ್ ಆಸ್ತಾನ ಅವರ ಅಧಿಕಾರ ಅವಧಿ ಜುಲೈ 2021ರ ತನಕವಿದೆ.

ಸಿಬಿಐ ವಿವಾದ: ರಾಜಕಾರಣಿಗಳ ನಂಟು ಮತ್ತು ಲಂಚದ ವಿವರ ಬಾಯ್ಬಿಟ್ಟ ಉದ್ಯಮಿಸಿಬಿಐ ವಿವಾದ: ರಾಜಕಾರಣಿಗಳ ನಂಟು ಮತ್ತು ಲಂಚದ ವಿವರ ಬಾಯ್ಬಿಟ್ಟ ಉದ್ಯಮಿ

ವಿಜಯ್ ಮಲ್ಯ ಮನಿಲಾಂಡ್ರಿಂಗ್ ಕೇಸ್, ಅಗಸ್ಟಾ ವೆಸ್ಟ್ ಲ್ಯಾಂಡ್ ಕೇಸ್, ಐಎಎಫ್ ಮುಖ್ಯಸ್ಥರಾಗಿದ್ದ ಎಸ್ ಪಿ ತ್ಯಾಗಿ ಬಂಧನ ಎಲ್ಲವೂ ರಾಕೇಶ್ ಆಸ್ತಾನ ಅವರ ಅವಧಿಯಲ್ಲಿನ ಬೆಳವಣಿಗೆಗಳು, ಗುಜರಾತ್ ಕೇಡರ್ ನ ಐಪಿಎಸ್ ಅಧಿಕಾರಿ ಅವರು ಏಪ್ರಿಲ್ 2016ರಲ್ಲಿ ಸಿಬಿಐ ಸೇರಿದರು, ಡಿಸೆಂಬರ್ 2016ರಿಂದ ಜನವರಿ 2017ರ ತನಕ ಸಿಬಿಐನ ಮಧ್ಯಂತರ ನಿರ್ದೇಶಕರಾಗಿದ್ದರು.

English summary
Tenure of CBI Special Director Rakesh Asthana and three other CBI officers has been curtailed by Appointments Committee of the Cabinet, with immediate effect.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X