MeToo Protest: ಕ್ರೀಡಾ ಸಚಿವ ಅನುರಾಗ್ ಠಾಕೂರ್ ವಿರುದ್ಧ ವಿನೇಶ್ ಫೋಗಟ್ ಗಂಭೀರ ಆರೋಪ
ದೆಹಲಿ ಮೇ 3: ಲೈಂಗಿಕ ಕಿರುಕುಳ ಆರೋಪದ ಮೇಲೆ ವ್ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾದ (WFI) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಮಹಿಳಾ ಕುಸ್ತಿಪಟುಗಳು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ನಡುವೆ ಬ್ರಿಜ್ ಭೂಷಣ್ ಶರಣ್ ಸಿಂಗ್ ಪ್ರಕರಣವನ್ನು ಮುಚ್ಚಿ ಹಾಕಲು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಪ್ರಯತ್ನಿಸಿದ್ದಾರೆ ಎಂದು ಮಹಿಳಾ ಕುಸ್ತಿಪಟುಗಳು ಆರೋಪಿಸಿದ್ದಾರೆ.
ಶಕ್ತಿಯುತ ವ್ಯಕ್ತಿಯ ವಿರುದ್ಧ ನಿಲ್ಲುವುದು ತುಂಬಾ ಕಷ್ಟ, ವಿಶೇಷವಾಗಿ ದೀರ್ಘಕಾಲ ಆ ಸ್ಥಾನದಲ್ಲಿದ್ದು ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವವರ ವಿರುದ್ಧ ನಿಲ್ಲುವುದು ತುಂಬಾ ಕಷ್ಟ ಎಂದು ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಅವರು ಹೇಳಿದ್ದಾರೆ.

ದೆಹಲಿಯ ಜಂತರ್ ಮಂತರ್ ನಲ್ಲಿ ಶರಣ್ ಸಿಂಗ್ ವಿರುದ್ಧ ಕುಸ್ತಿಪಟು ಬ್ರಿಜ್ ಭೂಷಣ್ ಕೂಡ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕುಸ್ತಿಪಟುಗಳು ಬ್ರಿಜ್ ಭೂಷಣ್ ಶರಣ್ ಸಿಂಗ್ ಬಂಧನಕ್ಕೆ ಆಗ್ರಹಿಸುತ್ತಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ವಿನೇಶ್ ಫೋಗಟ್, ಪ್ರತಿಭಟನೆ ಪ್ರಾರಂಭಿಸುವ ಮೊದಲು ನಾವು ಅಧಿಕಾರಿಯನ್ನು ಭೇಟಿ ಮಾಡಿದ್ದೇವೆ. ಆದರೆ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ, ನಂತರ ನಾವು ಧರಣಿ ಕುಳಿತಿದ್ದೇವೆ ಎಂದು ಹೇಳಿದ್ದಾರೆ.
ಮೂರ್ನಾಲ್ಕು ತಿಂಗಳ ಹಿಂದೆ ನಾವು ಜಂತರ್ ಮಂತರ್‌ನಲ್ಲಿ ಕುಳಿತಿದ್ದೆವು. ಅಧಿಕಾರಿಗಳನ್ನು ಭೇಟಿಯಾಗಿದ್ದೆವು, ಮಹಿಳಾ ಆಟಗಾರ್ತಿಯರಿಗೆ ಹೇಗೆ ಲೈಂಗಿಕ ದೌರ್ಜನ್ಯ ಮತ್ತು ಮಾನಸಿಕ ಕಿರುಕುಳ ನೀಡಲಾಯಿತು ಎಂಬುದನ್ನು ನಾವು ಅವರಿಗೆ ತಿಳಿಸಿದ್ದೇವೆ. ಆದರೂ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ವಿನೇಶ್ ಫೋಗಟ್ ಹೇಳಿದ್ದಾರೆ.
ಸಚಿವ ಅನುರಾಗ್ ಠಾಕೂರ್ ಅವರು ವಿಚಾರಣಾ ಸಮಿತಿಯನ್ನು ರಚಿಸುವ ಮೂಲಕ ವಿಷಯವನ್ನು ಮುಚ್ಚಿಹಾಕಲು ಪ್ರಯತ್ನಿಸಿದರು. ಅನುರಾಗ್ ಠಾಕೂರ್ ಅವರನ್ನು ಭೇಟಿಯಾದ ನಂತರ ನಾವು ನಮ್ಮ ಪ್ರತಿಭಟನೆಯನ್ನು ಕೊನೆಗೊಳಿಸಿದ್ದೆವು. ಎಲ್ಲಾ ಆಟಗಾರರು ಪ್ರತಿಭಟನೆಯನ್ನು ಹಿಂಪಡೆದಿದ್ದೆವು. ಆದರೆ ಅವರು ವಿಚಾರಣಾ ಸಮಿತಿಯನ್ನು ರಚಿಸುವ ಮೂಲಕ ವಿಷಯವನ್ನು ಮುಚ್ಚಿಡಲು ಪ್ರಯತ್ನಿಸಿದರು. ಆ ಸಮಯದಲ್ಲಿ ಯಾವುದೇ ಕ್ರಮವನ್ನು ತೆಗೆದುಕೊಳ್ಳಲಿಲ್ಲ.

ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಆಟಗಾರರು ಪ್ರತಿಭಟನೆ ನಡೆಸುತ್ತಿರುವ ಕಾರಣ ನಾವು ಹೊಸ ನಿಯಮವನ್ನು ಮಾಡಿದ್ದೇವೆ. ಆದರೆ ಇದು ಒಲಿಂಪಿಕ್ಸ್ ಬಗ್ಗೆ ಅಲ್ಲ. ಆದರೆ ಲೈಂಗಿಕ ಕಿರುಕುಳದ ಬಗ್ಗೆ ಎಂದು ಹೇಳಿದರು. ನಾನು ಒಲಿಂಪಿಕ್ಸ್‌ನ ನಿಯಮಗಳ ಬಗ್ಗೆ ಮಾತನಾಡಿದರೆ, ಅವರು ನಮ್ಮ ಮೇಲೆ ಪ್ರತಿಕಾರ ತೀರಿಸಿಕೊಳ್ಳಲು ಪ್ರಯತ್ನಿಸಿದರು ಎಂದು ಕ್ರಿಡಾಪಟುಗಳು ದೂರಿದ್ದಾರೆ.
ಆದರೆ 'ನಾನು ರಾಜೀನಾಮೆ ನೀಡಿದರೆ ನಾನು ಆರೋಪಗಳನ್ನು ಒಪ್ಪಿಕೊಂಡಂತೆ ತೋರುತ್ತದೆ' ಎಂದು ಬ್ರಿಜ್ ಭೂಷಣ್ ಶರಣ್ ಸಿಂಗ್ ಹೇಳಿದ್ದಾರೆ. ಇಲ್ಲಿ ಯಾರೇ ಏನೇ ಹೇಳಿಕೊಂಡರೂ ನಮಗೆ ನ್ಯಾಯ ಮಾತ್ರ ಬೇಕು ಎಂದು ವಿನೇಶ್ ಫೋಗಟ್ ಹೇಳಿದ್ದಾರೆ.
ಈ ಪ್ರಕರಣದಲ್ಲಿ ಶುಕ್ರವಾರ ದೆಹಲಿ ಪೊಲೀಸರು ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಮತ್ತೊಂದೆಡೆ, ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಹರಿಯಾಣದ ಶೇಕಡಾ 90 ರಷ್ಟು ಆಟಗಾರರು ತಮ್ಮ ಪರವಾಗಿದ್ದಾರೆ ಎಂದು ಹೇಳುತ್ತಾರೆ. ಆದರೆ ಒಂದು ಕುಟುಂಬದ ಕುಸ್ತಿಪಟುಗಳು ನನ್ನ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಅವರು ಹೇಳಿಕೊಂಡಿದ್ದಾರೆ.












Click it and Unblock the Notifications