ಮುಂದಿನ ವಾರದಿಂದ ಸ್ಪುಟ್ನಿಕ್ ವಿ ಮಾರುಕಟ್ಟೆಯಲ್ಲಿ ಲಭ್ಯ

ನವದೆಹಲಿ, ಮೇ 13: ಕೋವಿಶೀಲ್ಡ್ ಹಾಗೂ ಕೊವ್ಯಾಕ್ಸಿನ್ ನಂತರ ಭಾರತದಲ್ಲಿ ಅನುಮೋದನೆ ಪಡೆದಿರುವ ಮೂರನೇ ಲಸಿಕೆ ಸ್ಪುಟ್ನಿಕ್ ವಿ ಮುಂದಿನ ವಾರದಿಂದ ಮಾರುಕಟ್ಟೆಯಲ್ಲಿ ಲಭ್ಯವಾಗಲಿದೆ ಎಂದು ನೀತಿ ಆಯೋಗದ ಸದಸ್ಯ ಡಾ. ವಿಕೆ ಪಾಲ್ ಹೇಳಿದ್ದಾರೆ.

ರಷ್ಯಾ ಮೂಲದ ಸ್ಪುಟ್ನಿಕ್ ವಿ ಲಸಿಕೆಯನ್ನು ಭಾರತದಲ್ಲಿ ದೇಶಿ ಔಷಧ ತಯಾರಿಕಾ ಕಂಪನಿ ಡಾ. ರೆಡ್ಡಿ ಲ್ಯಾಬೊರೇಟರೀಸ್ ಜುಲೈ ತಿಂಗಳಿನಿಂದ ಉತ್ಪಾದಿಸಲಿದೆ. ಸದ್ಯಕ್ಕೆ ರಷ್ಯಾದಿಂದ ಹಂತ ಹಂತವಾಗಿ ಲಸಿಕೆ ಆಮದು ಮಾಡಿಕೊಳ್ಳಲಾಗುತ್ತಿದೆ. ಭಾರತದಲ್ಲಿ 15.6 ಕೋಟಿ ಡೋಸ್ ಲಸಿಕೆ ಉತ್ಪಾದನೆ ಗುರಿ ಹೊಂದಲಾಗಿದೆ. ಮುಂದಿನ ಐದು ತಿಂಗಳಲ್ಲಿ 2 ಬಿಲಿಯನ್ ಡೋಸ್ ಸ್ಪುಟ್ನಿಕ್ ವಿ ಲಭ್ಯವಾಗಲಿದೆ ಎಂದು ವಿಕೆ ಪಾಲ್ ಹೇಳಿದರು.

ಸರಿ ಸುಮಾರು ಶೇ 91.6ರಷ್ಟು ಪರಿಣಾಮಕಾರಿ ಎನಿಸಿಕೊಂಡಿರುವ ಸ್ಪುಟ್ನಿಕ್ ಅತ್ಯಂತ ಸುರಕ್ಷಿತ ಹಾಗೂ ಯುಕೆ ರೂಪಾಂತರಿ ವೈರಸ್ ಮೇಲೂ ಪ್ರಭಾವ ಬೀರಬಲ್ಲದು ಎಂದು ವರದಿಗಳು ಬಂದಿವೆ. ಸುಮಾರು 60ಕ್ಕೂ ಅಧಿಕ ದೇಶಗಳಲ್ಲಿ ತುರ್ತು ಬಳಕೆಗೆ ಸ್ಪುಟ್ನಿಕ್ ಲಸಿಕೆ ನೀಡಲು ಅನುಮೋದನೆ ಸಿಕ್ಕಿದೆ.

Sputnik V Covid-19 vaccine to be available in market from next week: NITI Aayog member VK Paul

ಡಿಸೆಂಬರ್ ವೇಳೆಗೆ ಸೀರಂ ಇನ್ಸ್ಟಿಟ್ಯೂಟ್ ಉತ್ಪಾದಿಸುವ ಆಸ್ಟ್ರಾಜೆನಿಕಾ ಲಸಿಕೆ(ಕೋವಿಶೀಲ್ಡ್) 750 ಮಿಲಿಯನ್ ಡೋಸ್, ಭಾರತ್ ಬಯೋಟೆಕ್ ಉತ್ಪಾದಿಸುವ ಕೋವ್ಯಾಕ್ಸಿನ್ 550 ಮಿಲಿಯನ್ ಡೋಸ್ ಲಭ್ಯವಾಗಲಿದೆ.

ಭಾರತದಲ್ಲಿ ಕೊರೊನಾ ಲಸಿಕೆ ಅಭಿಯಾನವು ಜನವರಿ 16ರಿಂದ ಆರಂಭಗೊಂಡಿದ್ದು, ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಹಾಗೂ ಕೊರೊನಾ ವಿರುದ್ಧದ ಹೋರಾಟದಲ್ಲಿ ಭಾಗಿಯಾಗಿದ್ದ ಕಾರ್ಯಕರ್ತರಿಗೆ ಲಸಿಕೆ ನೀಡಲಾಗಿತ್ತು. ಮಾರ್ಚ್ 1ರಿಂದ ಎರಡನೇ ಹಂತದ ಲಸಿಕೆಯನ್ನು 60 ವರ್ಷ ಮೇಲ್ಪಟ್ಟವರಿಗೆ ನೀಡಲಾಗುತ್ತಿದ್ದು, ಏಪ್ರಿಲ್ 2ರಿಂದ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗಿದೆ. ಮೇ 1ರಿಂದ ವಿವಿಧೆಡೆ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಅಭಿಯಾನ ಆರಂಭಗೊಂಡರೂ ಸಮರ್ಪಕವಾಗಿ ಜಾರಿಗೊಳಿಸಲು ಆಗಿಲ್ಲ. ದೆಹಲಿ, ಮಹಾರಾಷ್ಟ್ರ, ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಲಸಿಕೆ ಕೊರತೆಯಿಂದಾಗಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, 45 ವರ್ಷ ಮೇಲ್ಪಟ್ಟವರಿಗೆ ಆದ್ಯತೆ ಮೇರೆಗೆ 2ನೇ ಡೋಸ್ ನೀಡಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+