ಭಾರತೀಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಕನ್ನಡಿಗನ ನೇಮಕ

ಬೆಂಗಳೂರು, ಜುಲೈ 29 : ಭಾರತೀಯ ಯುವ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷರಾಗಿ ಶ್ರೀನಿವಾಸ ಬಿ. ವಿ. ನೇಮಕಗೊಂಡಿದ್ದಾರೆ. ಕರ್ನಾಟಕ ಮೂಲದ ಶ್ರೀನಿವಾಸ ಯುವ ಕಾಂಗ್ರೆಸ್ ರಾಷ್ಟ್ರೀಯ ಉಪಾಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ.

ಸೋಮವಾರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಶ್ರೀನಿವಾಸ ಬಿ. ವಿ. ಅವರನ್ನು ಭಾರತೀಯ ಯುವ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷರಾಗಿ ನೇಮಿಸಲಾಗಿರುವ ಪ್ರಕಟಣೆ ಬಿಡುಗಡೆ ಮಾಡಿದರು. ಯುವ ಕಾಂಗ್ರೆಸ್ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದ ಶ್ರೀನಿವಾಸ ಕಾರ್ಯ ನಿರ್ವಹಣೆ ಮಾಡಿದ್ದರು.

Srinivas BV Appointed As Interim President Of Indian Youth Congress

ಭಾರತೀಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಕೇಶವ್ ಚಾಂದ್ ಯಾದವ್ ರಾಜೀನಾಮೆಯಿಂದಾಗಿ ಹುದ್ದೆ ತೆರವಾಗಿತ್ತು. 2018ರ ಮೇ 11ರಂದು ಅಧಿಕಾರ ವಹಿಸಿಕೊಂಡಿದ್ದ ಕೇಶವ್ ಚಾಂದ್ ಲೋಕಸಭಾ ಚುನಾವಣೆಯಲ್ಲಿನ ಪಕ್ಷದ ಸೋಲಿನ ಬಳಿಕ ರಾಜೀನಾಮೆ ನೀಡಿದ್ದರು.

ಶ್ರೀನಿವಾಸ ಬಿ. ವಿ. ಕರ್ನಾಟಕ ಮೂಲದವರು. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನವರು. ಭಾರತೀಯ ಯುವ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷರಾಗಿ ನೇಮಕವಾದ ಬಳಿಕ ಟ್ವೀಟ್ ಮಾಡಿ ಅವರು ಸಂತಸ ಹಂಚಿಕೊಂಡಿದ್ದಾರೆ.

2019ರ ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್‌ನ ಹಲವು ನಾಯಕರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಸ್ವತಃ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದು, ಹೊಸ ಅಧ್ಯಕ್ಷರ ನೇಮಕ ಇನ್ನೂ ಆಗಿಲ್ಲ.

ಶ್ರೀನಿವಾಸ ಬಿ. ವಿ. ಟ್ವೀಟ್

Youth Congress
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+