ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರತಿಭಟನೆಗೆ ಮಣಿದ ಮೋದಿ ಸರ್ಕಾರ, ಎಸ್​ಎಸ್​​ಸಿ ಹಗರಣ ತನಿಖೆ ಸಿಬಿಐಗೆ

By Mahesh
|
Google Oneindia Kannada News

ಬೆಂಗಳೂರು, ಮಾರ್ಚ್ 05: ಸಿಬ್ಬಂದಿ ನೇಮಕ ಆಯೋಗ (ಎಸ್​ಎಸ್​​ಸಿ) ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪ ಕೇಳಿ ಬಂದಿದ್ದು, ಕಳೆದ ಒಂದು ವಾರದಿಂದ ಹುದ್ದೆ ಆಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರತಿಭಟನಾ ಸ್ಥಳಕ್ಕೆ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅವರು ಕೂಡಾ ಭೇಟಿ ನೀಡಿ, ಅಭ್ಯರ್ಥಿಗಳ ಸಮಸ್ಯೆಯನ್ನು ಆಲಿಸಿದ್ದರು. ಪ್ರತಿಭಟನಾಕಾರರ ಒತ್ತಡಕ್ಕೆ ಮಣಿದ ಮೋದಿ ಸರ್ಕಾರ ಕೊನೆಗೂ ಸಿಬಿಐ ತನಿಖೆಗೆ ಆದೇಶಿಸಿದೆ.

SSC scam : Govt orders CBI probe into alleged Leak of Papers

ಈ ಕುರಿತು ಮಾತನಾಡಿರುವ ಕೇಂದ್ರ ಗೃಹಮಂತ್ರಿ ರಾಜನಾಥ್​ ಸಿಂಗ್​, ಎಸ್​ಎಸ್​ಸಿ ಅಭ್ಯರ್ಥಿಗಳು ಮುಂದಿಟ್ಟಿರುವ ಬೇಡಿಕೆಗಳನ್ನು ಒಪ್ಪಿಕೊಂಡು ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಿದ್ದೇವೆ. ಮಾರ್ಚ್ 12ರಂದು ಸುಪ್ರೀಂಕೋರ್ಟ್​ ಕೂಡ ಈ ವಿಷಯದ ವಿಚಾರಣೆ ಕೈಗೆತ್ತಿಕೊಳ್ಳಲಿದೆ. ಅಭ್ಯರ್ಥಿಗಳು ಕೂಡಲೇ ಪ್ರತಿಭಟನೆಯನ್ನು ನಿಲ್ಲಿಸಬೇಕು ಎಂದಿದ್ದಾರೆ.

ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಎಸ್​​ಎಸ್​​ಸಿ ಶಿಫಾರಸು ಮಾಡಿದ ನಂತರ ಕೇಂದ್ರ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ.ನಮ್ಮ ಬೇಡಿಕೆಗಳು ಸಂಪೂರ್ಣವಾಗಿ ಈಡೇರುವವರೆಗೂ ಹಾಗೂ ನಮಗೆ ನ್ಯಾಯ ಸಿಗುವವರೆಗೂ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಪ್ರತಿಭಟನಕಾರ ಎಸ್​ಎಸ್​ಸಿ ಆಕಾಂಕ್ಷಿಗಳು ತಿಳಿಸಿದ್ದಾರೆ.

ಫೆಬ್ರವರಿ 21ರಂದು ನಡೆದ ಪತ್ರಿಕೆ-1ರ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂದು ಆರೋಪಿಸಿ ದೆಹಲಿಯ ಸಿಜಿಒ ಕಾಂಪ್ಲೆಕ್ಸ್​ನ ಎಸ್​ಎಸ್​ಸಿ ಕಚೇರಿಯ ಮುಂದೆ ಫೆಬ್ರವರಿ 27ರಿಂದ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಫೆಬ್ರವರಿ 17ರಿಂದ 22ರ ವರೆಗೆ ನಡೆದ ಎರಡನೇ ದರ್ಜೆಯ ಪರೀಕ್ಷೆ ನಡೆದಿತ್ತು.

English summary
The union government on Monday(March 05) ordered Central Bureau of Investigation probe into the allegations of leak of questions of the Staff Selection Commission-Combined Graduate Level (Tier-II) Examination 2017 held from February 17 to 22.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X