TTD Big Offer for SSLC Students: 10ನೇ ತರಗತಿ ಪಾಸಾದ ವಿದ್ಯಾರ್ಥಿಗಳಿಗೆ ತಿರುಪತಿದಿಂದ ಬಿಗ್ ಆಫರ್

ಎಸ್‌ಎಸ್‌ಎಲ್‌ಸಿ ಫಲಿತಾಂಶ ಇಂದು ಹೊರಬೀಳಲಿದೆ. ಇದಕ್ಕಾಗಿ ಪರೀಕ್ಷೆ ಬರೆದ ಲಕ್ಷಾಂತರ ಮಕ್ಕಳು ಕಾತುರದಿಂದ ಕಾಯುತ್ತಿದ್ದಾರೆ. ಇಂದು ಬೆಳಿಗ್ಗೆ (ಮೇ 9) 10.30ಕ್ಕೆ ಫಲಿತಾಂಶ ಹೊರಬೀಳಲಿದ್ದು ಈ ನಡುವೆ ತಿರುಪತಿ ತಿರುಮಲ ದೇವಸ್ಥಾನ (ಟಿಟಿಡಿ) ಬಿಗ್ ಆಫರ್ ಕೊಟ್ಟಿದೆ.

ಹೌದು.. 10ನೇ ತರಗತಿ ಪಾಸಾದ ವಿದ್ಯಾರ್ಥಿಗಳಿಗೆ ತಿರುಪತಿದಿಂದ ಬಂಪರ್ ಆಫರ್ ನೀಡಿದೆ. ಶಿಲ್ಪಕಲೆಯಲ್ಲಿ ಆಸಕ್ತಿಯುಳ್ಳ ವಿದ್ಯಾರ್ಥಿಗಳಿಂದ ಎಸ್‌.ವಿ ಸಂಪ್ರದಾಯಿಕ ದೇವಾಲಯ ಶಿಲ್ಪಕಲಾ ಮಹಾವಿದ್ಯಾಲಯಕ್ಕೆ ಪ್ರವೇಶ ಪಡೆಯಲು ಅರ್ಜಿಗಳನ್ನು ಆಹ್ವಾನಿಸಿದೆ. ಪರೀಕ್ಷೆಯಲ್ಲಿ ಪಾಸಾದ ವಿದ್ಯಾರ್ಥಿಗಳು, ವಿಶೇಷವಾಗಿ ತಿರುಪತಿಯಲ್ಲಿ ವಿದ್ಯಾಭ್ಯಾಸ ಮಾಡಲು ಬಯಸುವ ವಿದ್ಯಾರ್ಥಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದೆ.

SSLC Result Today Big offer from Tirupati for 10th passed students

ಪರೀಕ್ಷೆಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ (Sri Venkateswara Traditional Sculpture And Architecture College) ಎಸ್‌.ವಿ ಸಾಂಪ್ರದಾಯಿಕ ದೇವಾಲಯ ಶಿಲ್ಪಕಲಾ ಮಹಾವಿದ್ಯಾಲಯಕ್ಕೆ ಪ್ರವೇಶ ಪಡೆಯಲು ಅರ್ಜಿಗಳನ್ನು ಆಹ್ವಾನಿಸಿದೆ. 2024-25ನೇ ಶೈಕ್ಷಣಿಕ ವರ್ಷಕ್ಕೆ ಸಾಂಪ್ರದಾಯಿಕ ಶಿಲ್ಪಕಲಾ ಮಹಾವಿದ್ಯಾಲಯಕ್ಕೆ ಸೇರಬಯಸುವ ವಿದ್ಯಾರ್ಥಿಗಳು ಡಿಪ್ಲೊಮಾ ಮತ್ತು ಸರ್ಟಿಫಿಕೇಟ್ ಕೋರ್ಸ್‌ಗಳಿಗೆ ಪ್ರವೇಶಕ್ಕಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಡಿಪ್ಲೊಮಾ ಕೋರ್ಸ್‌ಮ ಅವಧಿ ನಾಲ್ಕು ವರ್ಷಗಳು ಮತ್ತು ಸರ್ಟಿಫಿಕೇಟ್ ಕೋರ್ಸ್ ನ ಅವಧಿ ಎರಡು ವರ್ಷಗಳು ಇರುತ್ತದೆ.

ಜೊತೆಗೆ ಅರ್ಜಿ ಸಲ್ಲಿಸಲು ದಿನಾಂಕ ಕೂಡ ಘೋಷಿಸಿದೆ. ಈ ದಿನಾಂಕದ ಒಳಗೆ ಎಸ್‌ಎಸ್‌ಎಲ್‌ಸಿ ಪಾಸಾದ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. 10ನೇ ತರಗತಿ ಪಾಸಾದ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಇಂದಿನಿಂದ ಜೂನ್ 17ರವರೆಗೆ ಅವಕಾಶ ಇರುತ್ತದೆ. ಕೋರ್ಸ್‌ಗಳಿಗೆ ಸಂಬಂಧಿಸಿದ ವಿವರಗಳಿಗಾಗಿ ಕಾಜೇಜು ಸಹಾಯವಾಣಿಯನ್ನೂ ಹಂಚಿಕೊಂಡಿದೆ. ಸಹಾಯವಾಣಿ 0877-2264637, 9866997290 ನಂಬರ್​ಗೆ ಸಂಪರ್ಕಿಸಬಹುದಾಗಿದೆ.

ಇಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ

ರಾಜ್ಯದ ಎಂಟೂವರೆ ಲಕ್ಷಕ್ಕೂ ಹೆಚ್ಚು ಮಕ್ಕಳು ನಿರೀಕ್ಷಿಸುತ್ತಿರುವ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ 'ಪರೀಕ್ಷೆ-1'ರ ಫಲಿತಾಂಶವನ್ನು ಮೇ.9ರ ಗುರುವಾರ ಬೆಳಗ್ಗೆ 10.30ಕ್ಕೆ ಪ್ರಕಟಿಸುವುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ.

SSLC Result Today Big offer from Tirupati for 10th passed students

ಮಲ್ಲೇಶ್ವರದಲ್ಲಿರುವ ಮಂಡಳಿಯ ಕಚೇರಿಯಲ್ಲಿ ಶಿಕ್ಷಣ ಇಲಾಖೆ ಹಾಗೂ ಮಂಡಳಿಯ ಅಧಿಕಾರಿಗಳು ಸುದ್ದಿಗೋಷ್ಠಿಯಲ್ಲಿ ಫಲಿತಾಂಶವನ್ನು ಪ್ರಕಟಿಸಲಿದ್ದಾರೆ. ಬಳಿಕ ಮಂಡಳಿಯ ವೆಬ್‌ಸೈಟ್ https://karresults.nic.in ನಲ್ಲಿ ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕ ಹಾಕಿ ತಮ್ಮ ಫಲಿತಾಂಶ ವೀಕ್ಷಿಸಬಹುದು ಎಂದು ತಿಳಿಸಲಾಗಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆ 1ಕ್ಕೆ ಈ ಬಾರಿ 8.69 ಲಕ್ಷ ವಿದ್ಯಾರ್ಥಿಗಳು ಎದುರಿಸಿದ್ದರು.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧಿಕೃತವಾಗಿ ಫಲಿತಾಂಶದ ಬಗ್ಗೆ ಬುಧವಾರ ಸಂಕೆ ಪತ್ರಿಕಾ ಪ್ರಕಟಣೆ ಹೊರಡಿಸಿತ್ತು. ಮಾರ್ಚ್ ಹಾಗೂ ಏಪ್ರಿಲ್​ನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ನಡೆದಿದ್ದವು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ. ಈ ಬಾರಿ 441910 ವಿದ್ಯಾರ್ಥಿಗಳು, 428058 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+