ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಾರ್ಖಂಡ್‌ : ದೇವಾಲಯದ ಬಳಿ ಕಾಲ್ತುಳಿತ, 11 ಸಾವು

|
Google Oneindia Kannada News

ನವದೆಹಲಿ, ಆಗಸ್ಟ್ 10 : ಜಾರ್ಖಂಡ್‌ನ ದೇವಗಢದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟಿದ್ದು, 50ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ದುರ್ಗಾಮಾತೆ ದೇವಾಲಯದ ಬಳಿ ಸೋಮವಾರ ಮುಂಜಾನೆ ಈ ಘಟನೆ ಸಂಭವಿಸಿದೆ.

ದೇವಗಡದ ಬೇಲಾಬಾಗನ್ ದುರ್ಗಾಮಾತೆ ದೇವಾಲಯದ ಬಳಿ ಸೋಮವಾರ ಮುಂಜಾನೆ 5.45ರ ಸುಮಾರಿಗೆ ಈ ಘಟನೆ ನಡೆದಿದೆ. ದುರ್ಗಾಮಾತೆ ಪೂಜೆಗಾಗಿ ಸಾವಿರಾರು ಭಕ್ತರು ಆಗಮಿಸಿದ್ದರು. ಈ ಸಂದರ್ಭದಲ್ಲಿ ಕಾಲ್ತುಳಿತ ಉಂಟಾಗಿದ್ದು, 11 ಜನರು ಮೃತಪಟ್ಟಿದ್ದಾರೆ. [ಪಾಟ್ನಾ ಗಾಂಧಿ ಮೈದಾನದ ಕಾಲ್ತುಳಿತದ ಚಿತ್ರಗಳು]

Jharkhand

ಕಾಲ್ತುಳಿತದಲ್ಲಿ 50ಕ್ಕೂ ಹೆಚ್ಚು ಭಕ್ತರು ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರತಿವರ್ಷ ಆಗಸ್ಟ್ ತಿಂಗಳಿನಲ್ಲಿ ಲಕ್ಷಾಂತರ ಭಕ್ತರು ದೇವಾಲಯಕ್ಕೆ ಆಗಮಿಸುತ್ತಾರೆ. ಸೋಮವಾರ ಭಕ್ತರ ಸಂಖ್ಯೆ ಹೆಚ್ಚಾಗಿರುತ್ತದೆ. ಕಳೆದ ಸೋಮವಾರ ಒಂದು ಲಕ್ಷಕ್ಕೂ ಅಧಿಕ ಭಕ್ತರು ದೇವಾಲಯಕ್ಕೆ ಆಗಮಿಸಿದ್ದರು ಎಂದು ಜಿಲ್ಲಾಡಳಿತ ಹೇಳಿದೆ. [ಮಧ್ಯಪ್ರದೇಶ ಕಾಲ್ತುಳಿತದ ದುರಂತದ ಚಿತ್ರಗಳು]

ಭಕ್ತರ ಅನುಕೂಲಕ್ಕಾಗಿ ಜಿಲ್ಲಾಡಳಿತ ಸಕಲ ವ್ಯವಸ್ಥೆಗಳನ್ನು ಮಾಡಿತ್ತು. ಭಾನುವಾರ ದೇವಾಲಯದ ಆಡಳಿತ ಮಂಡಳಿ ಜೊತೆ ಸಭೆ ನಡೆಸಿ ವ್ಯವಸ್ಥೆಯ ಬಗ್ಗೆ ಮಾತುಕತೆ ನಡೆಸಲಾಗಿತ್ತು. ಆದರೆ, ಇಂದು ಮುಂಜಾನೆ ಸರದಿ ಸಾಲಿನಲ್ಲಿ ನಿಲ್ಲುವ ವಿಚಾರಕ್ಕೆ ಗೊಂದಲ ಉಂಟಾಗಿ ಕಾಲ್ತುಳಿತ ಸಂಭವಿಸಿದೆ ಎಂದು ತಿಳಿದುಬಂದಿದೆ.

English summary
At least 11 people have been killed and 50 others injured in Jharkhand's Deoghar town in a stampede close to a temple of Goddess Durga. Stampede occurred at 5.45 am when people were trying to jump queue in order to get closer to the temple.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X