ನವದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಮಹಿಳೆಯರು, ಮಕ್ಕಳು ಸೇರಿ 15 ಮಂದಿ ಸಾವು

ಮಹಾ ಕುಂಭ ಮೇಳಕ್ಕೆ ಹೋಗುವ ಎರಡು ವಿಶೇಷ ರೈಲುಗಳು ಆಗಮಿಸಲು ತಡವಾದ ಹಿನ್ನಲೆಯಲ್ಲಿ ಶನಿವಾರ ರಾತ್ರಿ ನವದೆಹಲಿ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ ತೀವ್ರವಾಗಿದ್ದರಿಂದ ಕಾಲ್ತುಳಿತ ಉಂಟಾಗಿದ್ದು 10 ಮಹಿಳೆಯರು ಮೂವರು ಮಕ್ಕಳು ಸಹಿಯ 15 ಮಂದಿ ಸಾವನ್ನಪ್ಪಿದ್ದಾರೆ.

ನೂಕುನುಗ್ಗಲಿನಿಂದಾಗಿ ನಾಲ್ವರು ಉಸಿರಾಡಲು ಸಾಧ್ಯವಾಗದೆ ಪ್ರಜ್ಞೆ ತಪ್ಪಿಬಿದ್ದಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೂ ಕನಿಷ್ಠ 15 ಮಂದಿ ಮೃತಪಟ್ಟಿದ್ದಾರೆ. ಘಟನೆ ಸಂಭವಿಸುತ್ತಿದ್ದಂತೆ ಅಗ್ನಿ ಶಾಮಕ ದಳ ಕೂಡಲೇ ಸ್ಥಳಕ್ಕಾಗಮಿಸಿದ್ದು ಪರಿಸ್ಥಿತಿಯನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿದೆ.

stampede injures 15 at new delhi railway station mahakumbh

ದೆಹಲಿಯ ಎಲ್‌ಎನ್‌ಜೆಪಿ ಆಸ್ಪತ್ರೆಯ ಮುಖ್ಯ ಅಪಘಾತ ವೈದ್ಯಕೀಯ ಅಧಿಕಾರಿ 15 ಮಂದಿ ಸಾವನ್ನಪ್ಪಿರುವುದಾಗಿ ದೃಢಪಡಿಸಿದ್ದಾರೆ. ಮೃತಪಟ್ಟವರಲ್ಲಿ 10 ಮಹಿಳೆಯರು ಮತ್ತು ಮೂವರು ಮಕ್ಕಳು ಮತ್ತು ಇಬ್ಬರು ಪುರುಷರು ಸೇರಿದ್ದಾರೆ ಎಂದು ಹೇಳಿದ್ದಾರೆ. ಘಟನೆ ಬಗ್ಗೆ ತನಿಖೆ ನಡೆಸುವಂತೆ ರೈಲ್ವೆ ಇಲಾಖೆ ಆದೇಶ ನೀಡಿದೆ.

ಪ್ರಯಾಗ್‌ರಾಜ್‌ಗೆ ತೆರಳುವ ರೈಲುಗಳನ್ನು ಹತ್ತಲು ಪ್ರಯಾಣಿಕರು ಕಾಯುತ್ತಿದ್ದ ಸಂದರ್ಭದಲ್ಲಿ ಪ್ಲಾಟ್‌ಫಾರ್ಮ್ ಸಂಖ್ಯೆ 14 ಮತ್ತು 15 ರಲ್ಲಿ ರಾತ್ರಿ 8 ಗಂಟೆ ಸುಮಾರಿಗೆ ಜನಸಂದಣಿ ತೀವ್ರವಾಗಿದ್ದು ನೂಕುನುಗ್ಗಲು ಉಂಟಾಗಿದೆ.

ರೈಲ್ವೆ ನಿಲ್ದಾಣದಲ್ಲಿ ಜನಸಂದಣಿ ಹೆಚ್ಚಾದಂತೆ ಪರಿಸ್ಥಿತಿಯನ್ನು ನಿಭಾಯಿಸಲು ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದ್ದು, ನಾಲ್ಕು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ನಿಲ್ದಾಣಕ್ಕೆ ತೆರಳಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಜನದಟ್ಟಣೆಯನ್ನು ನಿಯಂತ್ರಿಸಲು ಹೆಚ್ಚುವರಿ ರೈಲುಗಳ ವ್ಯವಸ್ಥೆ ಮಾಡಲಾಗಿದೆ ಎಂದು ಅಶ್ವಿನಿ ವೈಷ್ಣವ್ ಟ್ವೀಟ್ ಮಾಡಿದ್ದಾರೆ.

ಘಟನೆ ಸಂಭವಿಸಿದ ಬಳಿಕ ತುರ್ತು ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ರಕ್ಷಣಾ ತಂಡಗಳನ್ನು ಕೂಡಲೇ ಸ್ಥಳಕ್ಕೆ ಕಳಿಸಲಾಗಿದೆ. ಪರಿಹಾರ ಕಾರ್ಯಾಚರಣೆ ನಡೆಸಲು ನಾಲ್ಕು ಶಾಮಕ ದಳಗಳನ್ನು ಕೂಡ ಸ್ಥಳಕ್ಕೆ ಕಳಿಸಲಾಗಿದೆ ಎಂದು ಡಿಎಫ್‌ಎಸ್ ಮುಖ್ಯಸ್ಥ ಅತುಲ್ ಗರ್ಗ್ ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ.

ಘಟನೆ ಬಗ್ಗೆ ರೈಲ್ವೆ ಸಚಿವಾಲಯ ಪ್ರತಿಕ್ರಿಯೆ ನೀಡಿದ್ದು, ರೈಲ್ವೆ ಪೊಲೀಸರು ಮತ್ತು ದೆಹಲಿ ಪೊಲೀಸರು ನವದೆಹಲಿ ರೈಲ್ವೆ ನಿಲ್ದಾಣಕ್ಕೆ ತಲುಪಿದ್ದಾರೆ. ಪರಿಸ್ಥಿತಿ ನಿಯಂತ್ರಣದಲ್ಲಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿಸಿದೆ.

ಮಹಾಕುಂಭ ಮೇಳಕ್ಕೆ ಜನಸಾಗರ

ಮಹಾಕುಂಭಮೇಳಕ್ಕೆ ದೇಶದ ಮೂಲೆ ಮೂಲೆಯಿಂದ ಕೋಟ್ಯಂತರ ಭಕ್ತರು ಬರುತ್ತಿದ್ದು, ರೈಲು ನಿಲ್ದಾಣಗಳಲ್ಲಿ ಜನದಟ್ಟಣೆ ಹೆಚ್ಚಾಗಿದೆ. ಉತ್ತರ ಪ್ರದೇಶ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ ಶನಿವಾಯ ಮಧ್ಯಾಹ್ನ 2 ಗಂಟೆಯವರೆಗೆ 92.10 ಲಕ್ಷಕ್ಕೂ ಹೆಚ್ಚು ಭಕ್ತರು ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ್ದಾರೆ. 2 ಲಕ್ಷಕ್ಕೂ ಹೆಚ್ಚು ಕಲ್ಪವಾಸಿಗಳು ಸಂಗಮದ ನದಿಗಳ ದಡದಲ್ಲಿ ಉಳಿದಿದ್ದಾರೆ.

ಫೆಬ್ರವರಿ 14ರ ವೇಳೆಗೆ 50 ಕೋಟಿಗೂ ಹೆಚ್ಚು ಜನ ಸಂಗಮದಲ್ಲಿ ಸ್ನಾನ ಮಾಡಿದ್ದಾರೆ. ಭಾರತೀಯ ರೈಲ್ವೆ ಇಲಾಖೆ ಪ್ರಕಾರ ಶನಿವಾರ ಬೆಳಿಗ್ಗೆ 6 ಗಂಟೆಯ ಹೊತ್ತಿಗೆ 2.79 ಲಕ್ಷಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಗ್‌ರಾಜ್ ರೈಲು ನಿಲ್ದಾಣದಿಂದ ರೈಲುಗಳನ್ನು ಹತ್ತಿದ್ದಾರೆ. ಶುಕ್ರವಾರ (ಫೆಬ್ರವರಿ 14), ಪ್ರಯಾಗ್‌ರಾಜ್‌ನಿಂದ ಒಟ್ಟು 328 ರೈಲುಗಳಲ್ಲಿ 10.47 ಲಕ್ಷಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸಿದ್ದಾರೆ ಎಂದು ವರದಿ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+