ಲೋಕಸಭಾ ಚುನಾವಣೆ; ರಾಹುಲ್ ಗಾಂಧಿ-ಅಖಿಲೇಶ್ ಯಾದವ್ ರ್‍ಯಾಲಿಯಲ್ಲಿ ಕಾಲ್ತುಳಿತ ಸನ್ನಿವೇಶ
ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಫುಲ್‌ಪುರ ಕ್ಷೇತ್ರದಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮತ್ತು ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಜಂಟಿ ಸಾರ್ವಜನಿಕ ಸಭೆಯಲ್ಲಿ ಕಾಲ್ತುಳಿತದಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು.
ಭಾರಿ ಜನಸ್ತೋಮದಿಂದ ಕಾಲ್ತುಳಿತದ ಪರಿಸ್ಥಿತಿ ಉಂಟಾದ ಕಾರಣ, ಇಬ್ಬರೂ ನಾಯಕರು ಸಭೆಯನ್ನುದ್ದೇಶಿಸಿ ಮಾತನಾಡದೆ ಸ್ಥಳದಿಂದ ನಿರ್ಗಮಿಸಿದ ಘಟನೆ ನಡೆದಿದೆ.

ಫುಲ್ಪುರ್ ಸಂಸದೀಯ ಕ್ಷೇತ್ರದ ಪಡಿಲಾದಲ್ಲಿ ಸಾರ್ವಜನಿಕ ಸಭೆಯಲ್ಲಿ ಕಾಂಗ್ರೆಸ್ ಮತ್ತು ಎಸ್‌ಪಿ ಕಾರ್ಯಕರ್ತರು ಬ್ಯಾರಿಕೇಡ್‌ಗಳನ್ನು ಮುರಿದು ವೇದಿಕೆ ಏರಲು ಪ್ರಯತ್ನಿಸಿದ್ದರಿಂದ ಗೊಂದಲದ ಪರಿಸ್ಥಿತಿ ಉಂಟಾಗಿತ್ತು.
ಪೊಲೀಸರ ಹರಸಾಹಸ
ಅಖಿಲೇಶ್ ಯಾದವ್ ಮತ್ತು ರಾಹುಲ್ ಗಾಂಧಿ ಅವರು ಪಕ್ಷದ ಕಾರ್ಯಕರ್ತರು ಮತ್ತು ಸಾರ್ವಜನಿಕರನ್ನು ಸಮಾಧಾನಪಡಿಸಲು ಸಾಕಷ್ಟು ಪ್ರಯತ್ನ ಪಟ್ಟರೂ ಪ್ರಯೋಜನವಾಗಲಿಲ್ಲ.
ಬಳಿಕ ಇಬ್ಬರೂ ಚರ್ಚೆ ನಡೆಸಿ ಸ್ಥಳದಿಂದ ನಿರ್ಗಮಿಸಿದರು. ಉದ್ರೇಕಗೊಂಡ ಜನರನ್ನು ನಿಯಂತ್ರಿಸಲು ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ಹರಸಾಹಸ ಪಟ್ಟರು.
ರಾಯ್‌ಬರೇಲಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಹುಲ್ ಗಾಂಧಿ ಅವರು ಪ್ರಯಾಗ್‌ರಾಜ್‌ನ ಪಕ್ಷದ ಅಭ್ಯರ್ಥಿ ಉಜ್ವಲ್ ರಾಮನ್‌ಸಿಂಗ್‌ಗೆ ಮತ ನೀಡುವಂತೆ ಮತದಾರರಿಗೆ ಮನವಿ ಮಾಡಿದರು.
ಕಾಂಗ್ರೆಸ್-ಸಮಾಜವಾದಿ ಪಕ್ಷದ ಸಹಭಾಗಿತ್ವವನ್ನು ಬೆಂಬಲಿಸಲು ನಮ್ಮ ಸಾವಿರಾರು ಕಾರ್ಯಕರ್ತರು ಇಲ್ಲಿದ್ದಾರೆ. ಮತಗಟ್ಟೆಗಳಲ್ಲಿ ಬಿಜೆಪಿ-ಆರ್‌ಎಸ್‌ಎಸ್ ಕಾರ್ಯಕರ್ತರ ವಿರುದ್ಧ ನಿಂತು ಇಲ್ಲಿನ ಅಭ್ಯರ್ಥಿಯನ್ನು 5 ಲಕ್ಷ ಮತಗಳಿಂದ ಗೆಲ್ಲಿಸುವಂತೆ ನಾನು ನಿಮಗೆ ಮನವಿ ಮಾಡುತ್ತೇನೆ, ಇಲ್ಲಿ ನಮ್ಮ ಅಭ್ಯರ್ಥಿ ಉಜ್ವಲ್ ರಮಣ್‌ಸಿಂಗ್ ಇದ್ದಾರೆ, ಅವರನ್ನು ಭಾರಿ ಬಹುಮತದಿಂದ ಗೆಲ್ಲಿಸಿ ಎಂದು ರಾಹುಲ್ ಗಾಂಧಿ ಮನವಿ ಮಾಡಿದರು.












Click it and Unblock the Notifications