• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕೋವಿಡ್ ಸಂತ್ರಸ್ತ ಕುಟುಂಬಗಳಿಗೆ ರಾಜ್ಯದಿಂದ 50 ಸಾವಿರ ರೂ. ಪರಿಹಾರ:ಕೇಂದ್ರ

|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 22: ಕೋವಿಡ್‌ನಿಂದ ಮೃತಪಟ್ಟ ಕುಟುಂಬಗಳಿಗೆ ರಾಜ್ಯ ಸರ್ಕಾರವು 50 ಸಾವಿರ ಪರಿಹಾರ ನೀಡುತ್ತಿದೆ ಎಂದು ಸುಪ್ರೀಂಕೋರ್ಟ್‌ಗೆ ಕೇಂದ್ರ ಸರ್ಕಾರ ತಿಳಿಸಿದೆ.

ಸರ್ಕಾರವು ಹೇಳಿದಂತೆ ಪರಿಹಾರದ ಹೊಣೆ ರಾಜ್ಯ ಸರ್ಕಾರದ್ದಾಗಿರುತ್ತದೆ. ಈ ಹಣವನ್ನು ರಾಜ್ಯ ವಿಪತ್ತು ನಿರ್ವಹಣಾ ನಿಧಿಯಿಂದ ಒದಗಿಸಲಾಗುತ್ತದೆ. ಈ ಹಿಂದೆ ಕೋವಿಡ್‌ಗೆ ಬಲಿಯಾದವರಿಗೆ ಪರಿಹಾರ ನೀಡಲು ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ 10 ದಿನಗಳ ಕಾಲಾವಕಾಶವನ್ನು ನೀಡಿತ್ತು.

ಸಿಹಿಸುದ್ದಿ: ಭಾರತದಲ್ಲಿ 186 ದಿನಗಳ ಬಳಿಕ ದಾಖಲೆ ಬರೆದ ಕೊರೊನಾವೈರಸ್! ಸಿಹಿಸುದ್ದಿ: ಭಾರತದಲ್ಲಿ 186 ದಿನಗಳ ಬಳಿಕ ದಾಖಲೆ ಬರೆದ ಕೊರೊನಾವೈರಸ್!

ಇದಲ್ಲದೆ, ಮರಣಪ್ರಮಾಣಪತ್ರಗಳಿಗೆ ನಿಯಮಗಳನ್ನು ರೂಪಿಸುವಂತೆ ಸುಪ್ರೀಂಕೋರ್ಟ್ ಸರ್ಕಾರವನ್ನು ಕೇಳಿತ್ತು, ಸಾಂಕ್ರಾಮಿಕ ರೋಗದ ಆರಂಭದಿಂದಲೂ ಭಾರತದಲ್ಲಿ ಕೊರೊನಾಗೆ ಸಂಬಂಧಿಸಿದ 40 ಸಾವಿರಕ್ಕೂ ಹೆಚ್ಚು ಸಾವುಗಳು ಸಂಭವಿಸಿದೆ. ಸಾಂಕ್ರಾಮಿಕ ರೋಗದ ಎರಡನೇ ಅಲೆಯು ಮತ್ತಷ್ಟು ಭಯಂಕರವಾಗಿತ್ತು.

ಈ ಹಿಂದೆ, ಕೋವಿಡ್ ಮರಣ ಪ್ರಮಾಣಪತ್ರಗಳ ವಿತರಣೆಗೆ ಸಂಬಂಧಿಸಿದ ವಿಷಯಗಳಲ್ಲಿ ಮಾರ್ಗಸೂಚಿಗಳನ್ನು ಪ್ರಕಟಿಸುವಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಸುಪ್ರೀಂಕೋರ್ಟ್ ಕಳವಳ ವ್ಯಕ್ತಪಡಿಸಿದೆ.

ಕೊರೊನಾ 3ನೇ ಅಲೆ ಭೀತಿ ನಡುವೆಯೇ ಬುಧವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 26,964 ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 383 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಬುಧವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,35,31,498ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,45,768ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,01,989ಕ್ಕೆ ತಲುಪಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 34,167 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,27,83,741ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 15,92,395 ಮಂದಿಯನ್ನು ಕೊರೊನಾ ಪರೀಕ್ಷೆಗೊಳಪಡಿಸಲಾಗಿದ್ದು, 55,67,54,282 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

English summary
The families of those who die of Covid will receive Rs.50,000 ex gratia from the state governments, the Centre informed the Supreme Court today. Significantly, compensation will be paid against not only for deaths that have already occurred but for future ones, too, the court was told.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X