ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೋದಿ ಸಾಕ್ಷ್ಯಚಿತ್ರ ವೀಕ್ಷಿಸುತ್ತಿದ್ದ ಜೆಎನ್‌ಯು ವಿದ್ಯಾರ್ಥಿಗಳ ಮೇಲೆ ಕಲ್ಲು ತೂರಾಟ

ಜೆಎನ್‌ಯು ಕ್ಯಾಂಪಸ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕುರಿತಾದ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ನಿಲ್ಲಿಸಲು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ವಿದ್ಯಾರ್ಥಿಗಳು ಮಾಡಿದ ಕೆಲಸವೇನು ತಿಳಿಯಲು ಮುಂದೆ ಓದಿ.

|
Google Oneindia Kannada News

ನವದೆಹಲಿ ಜನವರಿ 25: ಮೋದಿ ಸಾಕ್ಷ್ಯಚಿತ್ರ ವೀಕ್ಷಿಸುತ್ತಿದ್ದ ಜೆಎನ್‌ಯು ವಿದ್ಯಾರ್ಥಿಗಳ ಮೇಲೆ ಕಲ್ಲು ತೂರಾಟದ ಆರೋಪಗಳು ಕೇಳಿ ಬಂದಿವೆ. ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಾಚಿತ್ರವನ್ನು ಪ್ರದರ್ಶಿಸಲು ಕೆಲವು ವಿದ್ಯಾರ್ಥಿಗಳ ಯೋಜನೆ ವಿಫಲವಾಗಿದೆ. ಸಾಕ್ಷ್ಯಾಚಿತ್ರ ವೀಕ್ಷಿಸದಂತೆ ತಡೆಯಲು ವಿದ್ಯುತ್ ಮತ್ತು ಇಂಟರ್ನೆಟ್ ಸಂಪರ್ಕ ಕಡಿತಗೊಳಿಸಲಾಗಿತ್ತು ಜೊತೆಗೆ ಫೋನ್‌ಗಳಲ್ಲಿ ಸಾಕ್ಷ್ಯಾಚಿತ್ರ ನೋಡುತ್ತಿದ್ದವರ ಮೇಲೆ ಎಬಿವಿಪಿಯವರು ಕಲ್ಲು ತೂರಿದ್ದಾರೆ ಎನ್ನಲಾಗಿದೆ.

ಎಡಪಂಥೀಯ ಬೆಂಬಲಿಗರು ಇಬ್ಬರು ವಿದ್ಯಾರ್ಥಿಗಳನ್ನು ಹಿಡಿದಿದ್ದು ಅವರು ಕಲ್ಲುಗಳನ್ನು ಎಸೆಯುತ್ತಿದ್ದರು ಎಂದು ದೂರಿದ್ದಾರೆ. ಇವರಿಬ್ಬರು ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕ ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿದ್ಯಾರ್ಥಿಗಳ ವಿಭಾಗವಾದ ಎಬಿವಿಪಿಗೆ ಸೇರಿದವರು ಎಂದು ಅವರು ಹೇಳಿದ್ದಾರೆ. ಎಬಿವಿಪಿಯ ವಿದ್ಯಾರ್ಥಿಗಳು ನಮ್ಮ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಎನ್.ಸಾಯಿ ಬಾಲಾಜಿ ಹೇಳಿದ್ದಾರೆ. ಸಾಯಿ ಬಾಲಾಜಿ ಮಾದ್ಯಮದ ಮುಂದೆ ಮತ್ತಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ಜೆಎನ್‌ಯು ವಿದ್ಯಾರ್ಥಿಗಳ ಮೇಲೆ ಕಲ್ಲು ತೂರಾಟ

ಜೆಎನ್‌ಯು ವಿದ್ಯಾರ್ಥಿಗಳ ಮೇಲೆ ಕಲ್ಲು ತೂರಾಟ

"ವಿದ್ಯಾರ್ಥಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ನಾವು ಮುಖ್ಯ ಗೇಟ್ ಕಡೆಗೆ ಬಂದಿದ್ದೇವೆ. ತುರ್ತು ವಿದ್ಯುತ್ ಮರುಸ್ಥಾಪನೆಯನ್ನು ಬಯಸಿದ್ದೆವು. ವಿದ್ಯುತ್ ಮರುಸ್ಥಾಪಿಸುವವರೆಗೆ ನಾವು ಗೇಟ್‌ನಿಂದ ಕದಲುವುದಿಲ್ಲ. ನಮ್ಮ ಕರೆಗಳಿಗೆ ಪೊಲೀಸರು ಸ್ಪಂದಿಸುತ್ತಿಲ್ಲ" ಎಂದು ಸಾಯಿ ಬಾಲಾಜಿ ಹೇಳಿದರು.


ಎಡ-ಬೆಂಬಲಿತ ವಿದ್ಯಾರ್ಥಿ ಫೆಡರೇಷನ್ ಆಫ್ ಇಂಡಿಯಾದ ಅಧ್ಯಕ್ಷ ಆಯೇಶಿ ಘೋಷ್, ಕತ್ತಲೆಗೆ ಆಡಳಿತವೇ ಹೊಣೆ ಎಂದು ಆರೋಪಿಸಿದರು. "ನಾವು ಕ್ಯೂಆರ್ ಕೋಡ್‌ಗಳನ್ನು ಬಳಸಿಕೊಂಡು ಮೊಬೈಲ್ ಫೋನ್‌ಗಳ ಸಹಾಯದಿಂದ ಸಾಕ್ಷ್ಯಚಿತ್ರವನ್ನು ವೀಕ್ಷಿಸುತ್ತೇವೆ" ಎಂದು ತಿಳಿಸಿದರು.

ವಿದ್ಯುತ್ ಮತ್ತು ಇಂಟರ್ನೆಟ್ ಸ್ಥಗಿತ

ವಿದ್ಯುತ್ ಮತ್ತು ಇಂಟರ್ನೆಟ್ ಸ್ಥಗಿತ

ಜೆಎನ್‌ಯು ಆಡಳಿತವು ಸ್ಕ್ರೀನಿಂಗ್‌ಗೆ ಅನುಮತಿ ನೀಡಲು ನಿರಾಕರಿಸಿತ್ತು. ಇದನ್ನು ಆನ್‌ಲೈನ್ ಹಂಚಿಕೆಯಿಂದ ಭಾರತ ನಿರ್ಬಂಧಿಸಿದೆ. ಸಾಕ್ಷ್ಯಚಿತ್ರ ಪ್ರದರ್ಶಿಸಿದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಆಡಳಿತ ಮಂಡಳಿ ತಿಳಿಸಿದೆ.

ಸ್ಕ್ರೀನಿಂಗ್ ವಿಶ್ವವಿದ್ಯಾಲಯದ ಯಾವುದೇ ನಿಯಮವನ್ನು ಉಲ್ಲಂಘಿಸುವುದಿಲ್ಲ ಅಥವಾ ಕೋಮು ಸೌಹಾರ್ದತೆಗೆ ಧಕ್ಕೆ ತರುವುದಿಲ್ಲ ಎಂದು ವಿದ್ಯಾರ್ಥಿಗಳು ವಾದಿಸಿದರು. ಸ್ಕ್ರೀನಿಂಗ್ ರಾತ್ರಿ 9 ಗಂಟೆಗೆ ನಿಗದಿಯಾಗಿತ್ತು, ಆದರೆ ಅದಕ್ಕೂ ಮೊದಲು, ವಿದ್ಯಾರ್ಥಿ ಸಂಘದ ಕಚೇರಿಯಲ್ಲಿ ವಿದ್ಯುತ್ ಮತ್ತು ಇಂಟರ್ನೆಟ್ ಸ್ಥಗಿತಗೊಂಡಿತು.

ವಿದ್ಯಾರ್ಥಿಗಳಿಂದ ಪ್ರತಿಭಟನಾ ಮೆರವಣಿಗೆ

ವಿದ್ಯಾರ್ಥಿಗಳಿಂದ ಪ್ರತಿಭಟನಾ ಮೆರವಣಿಗೆ

ಕತ್ತಲೆಯ ನಂತರ, ವಿದ್ಯಾರ್ಥಿಗಳು ಕ್ಯಾಂಪಸ್‌ನೊಳಗಿನ ಕೆಫೆಟೇರಿಯಾಕ್ಕೆ ತೆರಳಿದರು. ಅಲ್ಲಿ ಅವರು ತಮ್ಮ ಸೆಲ್‌ಫೋನ್‌ಗಳು ಮತ್ತು ಲ್ಯಾಪ್‌ಟಾಪ್‌ಗಳಲ್ಲಿ ಸಾಕ್ಷ್ಯಚಿತ್ರವನ್ನು ವೀಕ್ಷಿಸಿದರು. ಅವರು ಸಾಕ್ಷ್ಯಚಿತ್ರವನ್ನು ವೀಕ್ಷಿಸುತ್ತಿದ್ದಾಗ, ಪೊದೆಗಳ ಹಿಂದಿನಿಂದ ಅವರ ಮೇಲೆ ಕೆಲವು ಕಲ್ಲುಗಳನ್ನು ಎಸೆಯಲಾಯಿತು ಎಂದು ಮೂಲಗಳು ತಿಳಿಸಿವೆ. ನಂತರ, ಅವರು ಪ್ರತಿಭಟನಾ ಮೆರವಣಿಗೆಯನ್ನು ಪ್ರಾರಂಭಿಸಿದರು, ಅದು ಇನ್ನೂ ಮುಂದುವರೆದಿದೆ.


ಇಂದು ಮುಂಜಾನೆ, ಹೈದರಾಬಾದ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಮೂಹವು ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಿತು. ಈ ಬಗ್ಗೆ ವರದಿ ಸಲ್ಲಿಸುವಂತೆ ವಿಶ್ವವಿದ್ಯಾಲಯದ ಅಧಿಕಾರಿಗಳು ತಮ್ಮ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮೋದಿ ಸಾಕ್ಷ್ಯಚಿತ್ರದಲ್ಲಿ ಏನಿದೆ?

ಮೋದಿ ಸಾಕ್ಷ್ಯಚಿತ್ರದಲ್ಲಿ ಏನಿದೆ?

2002 ರ ಗುಜರಾತ್ ದಂಗೆಯ ಕೆಲವು ಅಂಶಗಳು, ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ತನಿಖೆ ಮಾಡಿರುವುದಾಗಿ ಹೇಳಿಕೊಳ್ಳುವ ಪ್ರಧಾನಿ ಮೋದಿ ಅವರ ವಿವಾದಾತ್ಮಕ ಸಾಕ್ಷ್ಯಾಚಿತ್ರ ಸರಣಿಯನ್ನು ತೆಗೆದುಹಾಕುವಂತೆ ಸರ್ಕಾರ ಕಳೆದ ವಾರ ಟ್ವಿಟರ್ ಮತ್ತು ಯೂಟ್ಯೂಬ್‌ಗೆ ಕೇಳಿದೆ ಎಂದು ಮೂಲಗಳು ತಿಳಿಸಿವೆ. ಕೇಂದ್ರ ಇದನ್ನು "ಪ್ರಚಾರದ ತುಣುಕು. ಪಕ್ಷಪಾತ ಮತ್ತು ವಸ್ತುನಿಷ್ಠತೆಯ ಕೊರತೆ ಸ್ಪಷ್ಟವಾಗಿ ಗೋಚರಿಸುತ್ತದೆ" ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.

English summary
There have been allegations of stone pelting on JNU students who were watching a Modi documentary.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X