ರಾಜಸ್ಥಾನ: ವಂದೇ ಭಾರತ್ ಎಕ್ಸ್​ಪ್ರೆಸ್​ ರೈಲಿನ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ!

ರಾಜಸ್ಥಾನದ ಭಿಲ್ವಾರಾ ಜಿಲ್ಲೆಯಲ್ಲಿ ಉದಯಪುರ ಸಿಟಿ-ಜೈಪುರ್ ವಂದೇ ಭಾರತ್ ಎಕ್ಸ್‌ಪ್ರೆಸ್‌ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು,ರೈಲಿನ ಕಿಟಕಿ ಗಾಜುಗಳು ಒಡೆದಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನೂ ಯಾವುದೇ ಪ್ರಯಾಣಿಕರು ಅಥವಾ ರೈಲು ಸಿಬ್ಬಂದಿ ಗಾಯಗೊಂಡಿಲ್ಲ ಎಂದು ಅವರು ಹೇಳಿದರು. ರಾಯಲ ನಿಲ್ದಾಣದ ಮೂಲಕ ರೈಲು ಹಾದು ಹೋಗುತ್ತಿದ್ದಾಗ ಅಪರಿಚಿತ ವ್ಯಕ್ತಿಯೊಬ್ಬರು ರೈಲು ಮೇಲೆ ಕಲ್ಲು ಎಸೆದಿದ್ದು, ಕೊನೆಯ (ಸಿ7) ಕೋಚ್‌ನ ಕಿಟಕಿಗೆ ಹಾನಿಯಾಗಿದೆ ಎಂದು ಚಿತ್ತೋರಗಢ ಜಿಆರ್‌ಪಿ ನಿಲ್ದಾಣದ ಛೋಟುಲಾಲ್ ತಿಳಿಸಿದ್ದಾರೆ.

Stones pelted at Vande Bharat Express in Rajasthan, window broken

ವಂದೇ ಭಾರತ್ ಎಕ್ಸ್‌ಪ್ರೆಸ್‌ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಲ ಠಾಣಾಧಿಕಾರಿಗಳ ವರದಿ ಆಧರಿಸಿ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರನ್ನೂ ಬಂಧಿಸಲಾಗಿಲ್ಲ ಮತ್ತು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇತ್ತೀಚೆಗೆ ಕಣ್ಣೂರಿನಲ್ಲಿ ವಂದೇ ಭಾರತ್ ರೈಲಿನ ಮೇಲೆ ಕಲ್ಲು ಎಸೆಯಲಾಗಿತ್ತು, ತಿರುವನಂತಪುರಕ್ಕೆ ತೆರಳುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ತಲಶ್ಶೇರಿ ಮತ್ತು ಮಾಹೆ ನಡುವೆ ಕಲ್ಲು ತೂರಾಟ ನಡೆದಿದ್ದು, ಸಿ8 ಕೋಚ್‌ನ ಕಿಟಕಿ ಗಾಜುಗಳು ಜಖಂಗೊಂಡಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ವಂದೇ ಭಾರತ್ ಎಕ್ಸ್‌ಪ್ರೆಸ್ ಮೇಲೆ ಬುಧವಾರ ಕೇರಳದಲ್ಲಿ ದಾಳಿ ನಡೆದಿದ್ದು ಇದು ಎರಡನೇ ಬಾರಿಯಾಗಿದ್ದು, ಇತ್ತೀಚಿನ ದಿನಗಳಲ್ಲಿ ರೈಲುಗಳ ಮೇಲೆ ಕಲ್ಲು ತೂರಾಟ ನಡೆಸಿದ ನಾಲ್ಕನೇ ಪ್ರಕರಣ ಎಂದು ಹೇಳಲಾಗಿದೆ. ಸಿ8 ಕೋಚ್‌ನ ಗಾಜಿನ ಕಿಟಕಿಗೆ ಹಾನಿಯಾಗಿದ್ದು, ಎಸಿ ಕೋಚ್‌ನಲ್ಲಿದ್ದ ಎರಡೂ ಗಾಜಿನ ಪದರಗಳತ್ತ ಕಲ್ಲು ತೂರಿಬಂದಿತ್ತು ಎನ್ನಲಾಗಿದೆ. ಆದರೆ, ತಲಶ್ಶೇರಿ ನಿಲ್ದಾಣ ದಾಟಿದ ಕೂಡಲೇ ಈ ಘಟನೆ ನಡೆದಿದ್ದು, ಆರ್‌ಪಿಎಫ್ ಅಧಿಕಾರಿಗಳು ತಾತ್ಕಾಲಿಕ ದುರಸ್ತಿ ಮಾಡಿದ ನಂತರ ರೈಲು ಸಂಚಾರ ಮುಂದುವರೆದಿತ್ತು ಎಂದು ತಿಳಿದು ಬಂದಿದೆ.

ಕಿತ್ತೂರು ರಾಣಿ ಚನ್ನಮ್ಮ, ಟಿಪ್ಪು ಸುಲ್ತಾನ್ ಸ್ವಾಭಿಮಾನಿ ಹೋರಾಟದ ಸ್ಫೂರ್ಥಿಯಾಗಿದ್ದಾರೆ. ಕಿತ್ತೂರು ಚನ್ನಮ್ಮ ತನ್ನ ಸಣ್ಣ ಸೈನ್ಯದಿಂದ ಬ್ರಿಟಿಷರ ಬೃಹತ್ ಸೈನ್ಯಕ್ಕೆ ಸೆಡ್ಡು ಹೊಡೆದ ಧೀಮಂತ ರಾಣಿ. ಈಕೆಯ ಧೈರ್ಯ ಮತ್ತು ಆದರ್ಶ ಯುವ ಸಮೂಹವನ್ನು, ಇವತ್ತಿನ ಪೀಳಿಗೆಯನ್ನು ತಲುಪಬೇಕು ಎನ್ನುವ ಕಾರಣಕ್ಕೇ ನಾನು ಮೊದಲ ಬಾರಿ ಮುಖ್ಯಮಂತ್ರಿಯಾದಾಗ ಕಿತ್ತೂರು ಉತ್ಸವ ಮತ್ತು ಜಯಂತ್ಸೋವವನ್ನು ಆರಂಭಿಸಿದೆ ಎಂದು ವಿವರಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+