Vande Bharat Express: ಪಶ್ಚಿಮ ಬಂಗಾಳದಲ್ಲಿ ಮತ್ತೆ ವಂದೇ ಭಾರತ್ ಎಕ್ಸ್‌ಪ್ರೆಸ್ ಮೇಲೆ ಕಲ್ಲು ತೂರಾಟ
ಕಲ್ಲು ತೂರಾಟದಿಂದಾಗಿ ಹೈಸ್ಪೀಡ್ ರೈಲಿನ ಕೋಚ್‌ನ ಕಿಟಕಿ ಗಾಜುಗಳು ಹಾನಿಗೊಳಗಾಗಿವೆ ಎಂದು ಪೂರ್ವ ರೈಲ್ವೆ ಹೇಳಿಕೆಯಲ್ಲಿ ತಿಳಿಸಿದೆ.
ಕೊಲ್ಕತ್ತಾ, ಮಾರ್ಚ್ 12: ದೇಶದಲ್ಲಿ ಹೆಚ್ಚು ಪ್ರಚಲಿತದಲ್ಲಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳ ಮೇಲೆ ಕಲ್ಲು ತೂರಾಟದ ಘಟನೆಗಳು ವರದಿಯಾಗುತ್ತಲೇ ಇವೆ. ಇದಕ್ಕೆ ಹೊಸ ಸೇರ್ಪಡೆಯಾಗಿ ಮತ್ತೊಮ್ಮೆ ಪಶ್ಚಿಮ ಬಂಗಾಳದ ಸುದ್ದಿ ಬಂದಿದೆ. ಎರಡನೇ ಬಾರಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟದ ಘಟನೆ ವರದಿಯಾಗಿದೆ.
ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಫರಕ್ಕಾ ಬಳಿ ಶನಿವಾರ ತಡರಾತ್ರಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಕಲ್ಲು ತೂರಾಟದಿಂದಾಗಿ ಹೈಸ್ಪೀಡ್ ರೈಲಿನ ಕೋಚ್‌ನ ಕಿಟಕಿ ಗಾಜುಗಳು ಹಾನಿಗೊಳಗಾಗಿವೆ ಎಂದು ಪೂರ್ವ ರೈಲ್ವೆ ಹೇಳಿಕೆಯಲ್ಲಿ ತಿಳಿಸಿದೆ. "ಇದು ಅತ್ಯಂತ ದುರದೃಷ್ಟಕರ ಘಟನೆ. ಈ ಬಗ್ಗೆ ತನಿಖೆ ಆದೇಶಿಸಲಾಗಿದೆ" ಎಂದು ಪೂರ್ವ ರೈಲ್ವೇಯ ಕೌಸಿಕ್ ಮಿತ್ರ ಮಾಹಿತಿ ನೀಡಿದ್ದಾರೆ.

ಜನವರಿ 2023 ರಲ್ಲಿ, ರೈಲ್ವೇ ಸಂರಕ್ಷಣಾ ಪಡೆ (ಆರ್‌ಪಿಎಫ್) ಡಾರ್ಜಿಲಿಂಗ್ ಜಿಲ್ಲೆಯ ಫನ್ಸಿಡೆವಾ ಪ್ರದೇಶದ ಬಳಿ ಎರಡು ಕೋಚ್‌ಗಳ ಮೇಲೆ ಕಲ್ಲು ತೂರಾಟ ನಡೆಸಿದ ನಂತರ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಎರಡು ಕಿಟಕಿ ಗಾಜುಗಳು ಹಾನಿಗೊಳಗಾಗಿವೆ ಎಂದು ತಿಳಿಸಿತು. ಹೌರಾದಿಂದ ಮಾಲ್ಡಾ ಬಳಿಯ ನ್ಯೂ ಜಲ್ಪೈಗುರಿಗೆ ಸಂಪರ್ಕ ಕಲ್ಪಿಸುವ ರೈಲಿಗೆ ಕಲ್ಲು ತೂರಿದ್ದರಿಂದ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಕಿಟಕಿ ಗಾಜುಗಳು ಪುಡಿ ಪುಡಿಯಾಗಿ ರೈಲಿಗೆ ಹಾನುಯಾಗಿತ್ತು, ಇದೇ ತಿಂಗಳ ಹಿಂದೆ ನಡೆದ ಘಟನೆ ಸೇರಿ ಇದು ಎರಡನೇ ದಾಳಿಯಾಗಿದೆ.
ಡಾರ್ಜಿಲಿಂಗ್ ಜಿಲ್ಲೆಯ ಫನ್ಸಿಡೆವಾ ಪ್ರದೇಶದ ಬಳಿ ಈ ಘಟನೆ ನಡೆದಿದೆ ಎಂದು ಆರ್‌ಪಿಎಫ್ ಕಮಾಂಡರ್ ಮಾಹಿತಿ ನೀಡಿದ್ದಾರೆ. "ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಕೋಚ್ C3 ಮತ್ತು C6 ಕಲ್ಲು ತೂರಾಟದಿಂದಾಗಿ ಹಾನಿಗೀಡಾಗಿರುವುದು ಕಂಡುಬಂದಿದೆ. ರೈಲು ನ್ಯೂ ಜಲ್ಪೈಗುರಿ ಕಡೆಗೆ ಚಲಿಸುತ್ತಿದ್ದಾಗ ಡಾರ್ಜಿಲಿಂಗ್ ಜಿಲ್ಲೆಯ ಫನ್ಸಿಡೆವಾ ಪ್ರದೇಶದ ಬಳಿ ಕಿಟಕಿಗಳಿಗೆ ಹಾನಿಯಾಗಿದೆ" ಎಂದು ಈ ಹಿಂದೆ ಮಾಹಿತಿ ನೀಡಿದ್ದರು.

ಕಳೆದ ತಿಂಗಳು ಬೆಂಗಳೂರಿನ ಕೆಆರ್ ಪುರಂ ಬಳಿ ದೇಶದ ಸೆಮಿ ಹೈಸ್ಪೀಡ್ ರೈಲಾದ ವಂದೇ ಭಾರತ್ ಎಕ್ಸ್‌ಪ್ರೆಸ್ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಘಟನೆಯಲ್ಲಿ ರೈಲಿನ ಎರಡು ಗಾಜುಗಳಿಗೆ ಹಾನಿಯಾಗಿತ್ತು. ರೈಲು ಗಾಡಿ ಸಂಖ್ಯೆ 20608 ಮೈಸೂರು- ಚೆನ್ನೈ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಕೆಲವು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರು. ಬೆಂಗಳೂರಿನ ಕೃಷ್ಣರಾಜಪುರಂ - ಬೆಂಗಳೂರು ಕಂಟೋನ್ಮೆಂಟ್ ರೈಲು ನಿಲ್ದಾಣಗಳ ನಡುವೆ ಘಟನೆ ನಡೆದಿತ್ತು. ಇದರ ಪರಿಣಾಮ ಕೋಚ್‌ನ 2 ಕಿಟಕಿಗಳಿಗೆ ಹಾನಿಯಾಗಿತ್ತು.












Click it and Unblock the Notifications