ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಸಚಿವರ ಕಾರಿನ ಮೇಲೆ ಕಲ್ಲು ತೂರಾಟ
ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿಸಿತ್ ಪ್ರಮಾಣಿಕ್ ಅವರು ಪಶ್ಚಿಮ ಬಂಗಾಳದ ಕೂಚ್ ಬೆಹಾರ್‌ಗೆ ತೆರಳಿದ್ದಾಗ ಅವರ ಬೆಂಗಾವಲು ವಾಹನದ ಮೇಲೆ ಈ ದಾಳಿ ನಡೆದಿದೆ.
ಕೋಲ್ಕತ್ತಾ, ಫೆಬ್ರವರಿ 25: ಪಶ್ಚಿಮ ಬಂಗಾಳದ ಕೂಚ್‌ಬೆಹಾರ್ ಜಿಲ್ಲೆಯ ದಿನ್ಹಾಟಾದಲ್ಲಿ ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ನಿಸಿತ್ ಪ್ರಮಾಣಿಕ್ ಅವರ ಬೆಂಗಾವಲು ಪಡೆಯ ಮೇಲೆ ಕಲ್ಲಿನ ತೂರಾಟ ನಡೆಸಲಾಗಿದೆ. ಘಟನೆಯಲ್ಲಿ ಕಾರಿನ ಗಾಜುಗಳು ಒಡೆದಿದೆ.
ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿಸಿತ್ ಪ್ರಮಾಣಿಕ್ ಅವರು ಪಶ್ಚಿಮ ಬಂಗಾಳದ ಕೂಚ್ ಬೆಹಾರ್‌ಗೆ ತೆರಳಿದ್ದಾಗ ಅವರ ಬೆಂಗಾವಲು ವಾಹನದ ಮೇಲೆ ಈ ದಾಳಿ ನಡೆದಿದೆ. ತೃಣಮೂಲ ಕಾಂಗ್ರೆಸ್ ಬೆಂಬಲಿಗರು ದಾಳಿಯ ನೇತೃತ್ವ ವಹಿಸಿದ್ದರು ಎಂದು ಪ್ರಮಾಣಿಕ್ ಆರೋಪಿಸಿದ್ದಾರೆ.

ದಾಳಿ ನಡೆದಾಗ ಪೂರ್ವ ನಿರ್ಧಾರಿತ ಕಾರ್ಯಕ್ರಮಕ್ಕೆ ಅನುಗುಣವಾಗಿ ಸಚಿವರು ಬಿಜೆಪಿ ಕಾರ್ಯಕರ್ತರನ್ನು ಭೇಟಿ ಮಾಡಲು ಮತ್ತು ಪ್ರದೇಶದ ಜನರನ್ನು ಭೇಟಿ ಮಾಡಲು ಹೋಗುತ್ತಿದ್ದರು. ಈ ಬಗ್ಗೆ ಬಿಜೆಪಿ ಟಿಎಂಸಿ ವಿರುದ್ಧ ಆರೋಪ ಮಾಡಿದ್ದು, ಕಲ್ಲುಗಳನ್ನು ಟಿಎಂಸಿ ಅವರೇ ಎಸೆದಿದ್ದಾರೆ ಎಂದಿದೆ. ಆದರೆ ಇದುವರೆಗೂ ಯಾರು ಎಸೆದಿದ್ದಾರೆ ಎಂದು ತಿಳಿದು ಬಂದಿಲ್ಲ.
ಪ್ರಾಥಮಿಕ ಮಾಹಿತಿ ಪ್ರಕಾರ ಟಿಎಂಸಿ ಬೆಂಬಲಿಗರು ಸಚಿವರಿಗೆ ಕಪ್ಪು ಬಾವುಟ ತೋರಿಸಿದ್ದಾರೆ. ಇದರಿಂದ ಆಡಳಿತ ಪಕ್ಷ ಹಾಗೂ ಬಿಜೆಪಿ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆಯಿತು. ಬೆಂಗಾವಲು ವಾಹನದ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಸಚಿವರನ್ನು ಸುರಕ್ಷಿತವಾಗಿ ಕರೆದುಕೊಂಡು ಹೋಗಲಾಗಿದೆ ಎಂದು ತಿಳಿದು ಬಂದಿದೆ.

ಜನಸಂದಣಿಯನ್ನು ನಿಯಂತ್ರಿಸಲು ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಹಾರಿಸಬೇಕಾಯಿತು. ಸಚಿವರೊಬ್ಬರು ಸುರಕ್ಷಿತೆ ಇಲ್ಲದಿದ್ದರೆ ಜನಸಾಮಾನ್ಯರ ಪಾಡು ಊಹಿಸಬಹುದು. ಈ ಘಟನೆಯು ಬಂಗಾಳದ ಪ್ರಜಾಪ್ರಭುತ್ವದ ಸ್ಥಿತಿಯನ್ನು ತೋರಿಸುತ್ತದೆ ಎಂದು ಸಚಿವರು ಹೇಳಿದರು.
ಸ್ಥಳೀಯ ವರದಿಗಳ ಪ್ರಕಾರ, ಬುಡಕಟ್ಟು ಜನಾಂಗದವರ ಹತ್ಯೆಯ ಬಗ್ಗೆ ಸಚಿವ ಪ್ರಮಾಣಿಕ್ ವಿರುದ್ಧ ಕೋಪವಿದೆ ಎಂದು ಹೇಳಲಾಗುತ್ತದೆ. ತೃಣಮೂಲ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರು ಇತ್ತೀಚೆಗೆ ಕೂಚ್ ಬೆಹಾರ್‌ನಲ್ಲಿ ನಡೆದ ರ‍್ಯಾಲಿಯಲ್ಲಿ ಹತ್ಯೆಯ ನಂತರ ಬುಡಕಟ್ಟು ಜನಾಂಗದವರ ಕಳವಳವನ್ನು ಬಗೆಹರಿಸಲು ಸಾಕಷ್ಟು ಕೆಲಸ ಮಾಡಿಲ್ಲ ಎಂದು ಆರೋಪಿಸಿ ಪ್ರಮಾಣಿಕ್ ಅವರನ್ನು ಟೀಕಿಸಿದ್ದರು.
ಸಚಿವ ಪ್ರಮಾಣಿಕ್ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ತೃಣಮೂಲ ಕಾಂಗ್ರೆಸ್ ಇತ್ತೀಚೆಗೆ ಘೋಷಿಸಿತ್ತು. ತೃಣಮೂಲ ನಾಯಕ ಉದಯನ್ ಗುಹಾ ಅವರು ಈ ಪ್ರದೇಶದಲ್ಲಿ ಎಲ್ಲಿ ಹೋದರೂ ಕಪ್ಪು ಬಾವುಟಗಳನ್ನು ಮಾತ್ರ ಕಾಣುತ್ತಾರೆ ಎಂದು ಹೇಳಿದ್ದಾರೆ.












Click it and Unblock the Notifications