ಹಿಜಾಬ್ ವಿವಾದ: ಮುಸ್ಲಿಂ ಮಹಿಳೆಯರಿಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಬೆಂಬಲ

ನವದೆಹಲಿ, ಫೆಬ್ರವರಿ 9: ಹಿಜಾಬ್ ಮತ್ತು ಕೇಸರಿ ಶಾಲು ವಿವಾದದ ಹಿನ್ನೆಲೆ "ದೇಶದಲ್ಲಿ ಹೆಣ್ಣುಮಕ್ಕಳಿಗೆ ಕಿರುಕುಳ ನೀಡುವುದನ್ನು ಮೊದಲು ನಿಲ್ಲಿಸಬೇಕು," ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಆಗ್ರಹಿಸಿದ್ದಾರೆ.

ಭಾರತದಲ್ಲಿ ಸಂವಿಧಾನವು ಹೆಣ್ಣುಮಕ್ಕಳಿಗೂ ಸಮಾನ ಹಕ್ಕನ್ನು ನೀಡಿದೆ. ಮಹಿಳೆಯರು ಯಾವ ಬಟ್ಟೆಯನ್ನು ಹಾಕಿಕೊಳ್ಳಬೇಕು ಎಂಬುದನ್ನು ನಿರ್ಧರಿಸುವುದು ಅವರ ವೈಯಕ್ತಿಕ ಹಕ್ಕು ಎನ್ನುವುದರ ಮೂಲಕ ಹಿಜಾಬ್ ಧರಿಸುವುದಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

"ಹೆಣ್ಣುಮಕ್ಕಳು ಬಿಕಿನಿಯಾದರೂ ಹಾಕಲಿ, ಮುಸುಕಾದರೂ ಧರಿಸಲಿ. ಜೀನ್ಸ್ ಬಟ್ಟೆಯೇ ಆಗಿರಲಿ ಅಥವಾ ಹಿಜಾಬ್ ಆದರೂ ಆಗಿರಲಿ. ತಾನು ಏನು ಧರಿಸಬೇಕು ಎಂಬುದನ್ನು ನಿರ್ಧರಿಸುವುದು ಮಹಿಳೆಯ ಹಕ್ಕು. ಭಾರತೀಯ ಸಂವಿಧಾನವೇ ಮಹಿಳೆಯರಿಗೆ ಈ ಹಕ್ಕನ್ನು ನೀಡಿದೆ. ಮಹಿಳೆಯರಿಗೆ ಕಿರುಕುಳ ನೀಡುವುದನ್ನು ಮೊದಲು ನಿಲ್ಲಿಸಿ," ಎಂದು ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿದ್ದಾರೆ.

Recommended Video

      ಸಿಧು ರನ್ನು ಹೊಗಳುವ ಭರದಲ್ಲಿ ರಾಹುಲ್ ಗಾಂಧಿ ನೀಡಿದ ಹೇಳಿಕೆ ಫುಲ್ ಟ್ರೋಲ್ | Oneindia Kannada
      Stop harassing women; Congress Leader Priyanka Gandhi Tweet about Hijab Controversy

      ಹಿಜಾಬ್ ವಿವಾದದ ಬಗ್ಗೆ ಮಲಾಲ ಟ್ವೀಟ್:

      "ಶಿಕ್ಷಣ ಮತ್ತು ಹಿಜಾಬ್ ನಡುವೆ ಯಾವುದು ಬೇಕು ಎಂಬ ಬಗ್ಗೆ ಆಯ್ಕೆ ಮಾಡಿಕೊಳ್ಳುವಂತೆ ಕಾಲೇಜುಗಳು ನಮ್ಮನ್ನು ಒತ್ತಾಯಿಸುತ್ತಿವೆ. ಹೆಣ್ಣುಮಕ್ಕಳು ಹಿಜಾಬ್‌ನಲ್ಲಿ ಶಾಲೆಗೆ ಬರಬಾರದು ಎಂದು ನಿರಾಕರಿಸುತ್ತಿರುವ ಬೆಳವಣಿಗೆಯು ತೀರಾ ಭಯಾನಕವಾಗಿದೆ. ಮಹಿಳೆಯರು ಧರಿಸುವ ಬಟ್ಟೆಯು ಹೆಚ್ಚಾಗಿರಬೇಕು ಅಥವಾ ಕಡಿಮೆ ಆಗಿರುವುದಕ್ಕೆ ಸಂಬಂಧಿಸಿದಂತೆ ಆಕ್ಷೇಪಗಳು ಮುಂದುವರಿಯುತ್ತಿವೆ. ಭಾರತೀಯ ನಾಯಕರು ಮುಸ್ಲಿಂ ಮಹಿಳೆಯರನ್ನು ಕಡೆಗಣಿಸುವುದನ್ನು ನಿಲ್ಲಿಸಬೇಕು," ಎಂದು ಮಲಾಲ ಟ್ವೀಟ್ ಮಾಡಿದ್ದಾರೆ.

      ಕರ್ನಾಟಕದಲ್ಲಿ ತಾರಕ್ಕೇರಿದ ಹಿಜಾಬ್ ವಿವಾದ:

      ಕರ್ನಾಟಕದಲ್ಲಿ ಹೊತ್ತಿಕೊಂಡಿರುವ ಹಿಜಾಬ್ ವರ್ಸಸ್ ಕೇಸರಿ ಶಾಲು ವಿವಾದದ ಕಿಡಿ ರಾಜ್ಯ-ರಾಷ್ಟ್ರದಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ತೀವ್ರ ಚರ್ಚೆಯನ್ನು ಹುಟ್ಟು ಹಾಕುತ್ತಿದೆ. ಹಿಜಾಬ್ ವರ್ಸಸ್ ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಪರಿಸ್ಥಿತಿ ತಿಳಿಗೊಳಿಸುವ ಉದ್ದೇಶದಿಂದ ರಾಜ್ಯದಲ್ಲಿ ಮೂರು ದಿನಗಳವರೆಗೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉಡುಪಿ ಸರ್ಕಾರಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ತರಗತಿಯಲ್ಲಿ ಹಿಜಾಬ್ ಧರಿಸುವುದನ್ನು ನಿರ್ಬಂಧಿಸಿದ ಘಟನೆ ನಂತರ ರಾಜ್ಯದಲ್ಲಿ ವಿವಾದ ಹುಟ್ಟಿಕೊಂಡಿತು. ಕಳೆದ ತಿಂಗಳು ಹುಟ್ಟಿಕೊಂಡ ವಿವಾದ ಮಂಗಳವಾರದ ಹೊತ್ತಿಗೆ ರಾಜ್ಯಾದ್ಯಂತ ಪ್ರತಿಭಟನೆ ಮತ್ತು ಆಕ್ರೋಶದ ಕಿಡಿಯನ್ನು ಹೊತ್ತಿಸಿತು. ಕೆಲವು ಬಲಪಂಥೀಯ ಸಂಘಟನೆಗಳು ಶಾಲಾ ತರಗತಿಯಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+