ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನೀಟ್ ಮುಂದೂಡುವಂತೆ ಕೋರಿ ಸುಪ್ರೀಂಕೋರ್ಟ್‌ಗೆ ವೈದ್ಯರ ಅರ್ಜಿ

|
Google Oneindia Kannada News

ನವದೆಹಲಿ, ಏಪ್ರಿಲ್ 15: ದೇಶಾದ್ಯಂತ ಕೋವಿಡ್ ಪ್ರಕರಣಗಳಲ್ಲಿ ಭಾರಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ನೀಟ್-ಪಿಜಿ ವೈದ್ಯಕೀಯ ಪ್ರವೇಶ ಪರೀಕ್ಷೆಗಳನ್ನು ಮುಂದೂಡುವಂತೆ ವಿದ್ಯಾರ್ಥಿ ವೈದ್ಯರ ಗುಂಪೊಂದು ಸುಪ್ರೀಂಕೋರ್ಟ್‌ಗೆ ಗುರುವಾರ ಅರ್ಜಿ ಸಲ್ಲಿಸಿದೆ.

ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಯು (ನೀಟ್) ಏಪ್ರಿಲ್ 18ರಂದು ನಡೆಯಲಿದ್ದು, ಸುಮಾರು 1.7 ಲಕ್ಷ ಎಂಬಿಬಿಎಸ್ ವಿದ್ಯಾರ್ಥಿಗಳು ಮತ್ತು ವೈದ್ಯರು ಇದಕ್ಕೆ ನೋಂದಣಿ ಮಾಡಿಕೊಂಡಿದ್ದಾರೆ. ಆದರೆ ಕೊರೊನಾ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಆತಂಕಕಾರಿ ಸನ್ನಿವೇಶದಲ್ಲಿ ಪರೀಕ್ಷೆ ನಡೆಸುವುದರ ಬಗ್ಗೆ ಕಳವಳ ವ್ಯಕ್ತವಾಗಿದೆ.

ಕೊರೊನಾ 2ನೇ ಅಲೆ ಮಧ್ಯೆ ನೀಟ್ ಪರೀಕ್ಷೆ ನಡೆಸುವ ಅಗತ್ಯವಿದೆಯೇ: ಎಂಕೆ ಸ್ಟಾಲಿನ್ಕೊರೊನಾ 2ನೇ ಅಲೆ ಮಧ್ಯೆ ನೀಟ್ ಪರೀಕ್ಷೆ ನಡೆಸುವ ಅಗತ್ಯವಿದೆಯೇ: ಎಂಕೆ ಸ್ಟಾಲಿನ್

ದೈನಂದಿನ ಅವಧಿಗಳಲ್ಲಿ ಕೋವಿಡ್-19 ರೋಗಿಗಳನ್ನು ಚಿಕಿತ್ಸೆ ನೀಡುತ್ತಿರುವ ವೈದ್ಯರು ದೈಹಿಕವಾಗಿ ಪರೀಕ್ಷೆಗೆ ಹಾಜರಾಗುವಂತೆ ಒತ್ತಡ ಹೇರುವುದು, ಸಾವಿರಾರು ಜನರ ಜೀವಗಳನ್ನು ಅಪಾಯಕ್ಕೆ ಸಿಲುಕಿಸುವಂತೆ ಮಾಡುವುದಕ್ಕೆ ಸಮ ಎಂದು ಅರ್ಜಿದಾರರು ಹೇಳಿದ್ದಾರೆ.

Student Doctors Plea In Supreme Court To Postpone Of NEET-PG Exams

ಅಲ್ಲದೆ ಅರ್ಜಿದಾರರು, ಮೇ 4ರಿಂದ ನಡೆಯಬೇಕಿದ್ದ ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆಗಳ ರದ್ದತಿ ಮತ್ತು 12ನೇ ತರಗತಿ ಪರೀಕ್ಷೆಗಳನ್ನು ಮುಂದೂಡಿರುವ ಕೇಂದ್ರ ಸರ್ಕಾರದ ನಿರ್ಧಾರಗಳನ್ನು ಉಲ್ಲೇಖಿಸಿದ್ದಾರೆ. ನೀಟ್ ಪರೀಕ್ಷೆಗಳನ್ನು ಆಯೋಜಿಸುವುದರ ಕುರಿತು ಕಳೆದ ಕೆಲವು ದಿನಗಳಿಂದ ವಿದ್ಯಾರ್ಥಿಗಳು ಮತ್ತು ವಿರೋಧಪಕ್ಷಗಳು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ.

Fact Check: ನೀಟ್-ಸ್ನಾತಕೋತ್ತರ ಪರೀಕ್ಷೆ ಮುಂದೂಡಿಕೆ?Fact Check: ನೀಟ್-ಸ್ನಾತಕೋತ್ತರ ಪರೀಕ್ಷೆ ಮುಂದೂಡಿಕೆ?

ಕಳೆದ ವರ್ಷ ಕೂಡ ನೀಟ್ ಪರೀಕ್ಷೆಗಳ ಕುರಿತು ಇದೇ ರೀತಿಯ ಆತಂಕ ಉಂಟಾಗಿತ್ತು. ನೀಟ್ ಮತ್ತು ಜೆಇಇ ಎರಡೂ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು. ಕಠಿಣ ನಿರ್ಬಂಧಗಳು ಮತ್ತು ಸಾಮಾಜಿಕ ಅಂತರಗಳೊಂದಿಗೆ ಪರೀಕ್ಷೆಗಳನ್ನು ನಡೆಸಬಹುದು ಎಂದು ಕೋರ್ಟ್ ಹೇಳಿತ್ತು.

English summary
A group of student doctors moved to Supreme Court requesting for postponement of the NEET-PG exams amid Covid-19 surge.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X