• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಜೆಇಇ ಪರೀಕ್ಷೆ: ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ ಸರ್ಕಾರ

|

ನವದೆಹಲಿ, ಅಕ್ಟೋಬರ್ 13: ಕೋವಿಡ್ 19ರ ಕಾರಣದಿಂದ ಪ್ರಸಕ್ತ ಸಾಲಿನ ಜೆಇಇ ಅಡ್ವಾನ್ಸಡ್ ಪ್ರವೇಶ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ಭಾರತೀಯ ತಂತ್ರಜ್ಞಾನ ಸಂಸ್ಥೆಯ (ಐಐಟಿ) ಪ್ರವೇಶ ಆಕಾಂಕ್ಷಿ ಅಭ್ಯರ್ಥಿಗಳಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ.

ಈ ಬಾರಿ ಪರೀಕ್ಷೆ ಬರೆಯಲು ಸಾಧ್ಯವಾಗದ ವಿದ್ಯಾರ್ಥಿಗಳು 2021ರಲ್ಲಿ ನಡೆಯುವ ಜೆಇಇ ಪರೀಕ್ಷೆಗೆ ನೇರವಾಗಿ ಹಾಜರಾಗಬಹುದು ಎಂದು ಜಂಟಿ ಪ್ರವೇಶಾತಿ ಮಂಡಳಿ (ಜೆಎಬಿ) ಮಂಗಳವಾರ ತಿಳಿಸಿದೆ. ದೇಶದಾದ್ಯಂತ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮೇನ್ ಅನ್ನು ನಡೆಸಲಾಗುತ್ತದೆ. ದೇಶದ 23 ಐಐಟಿಗಳಿಗೆ ಪ್ರವೇಶ ನೀಡಲು ಜೆಇಇ ಅಡ್ವಾನ್ಸಡ್‌ ಪರೀಕ್ಷೆಯನ್ನು ನಡೆಸಲಾಗುತ್ತದೆ. ಜೆಇಇ ಅಡ್ವಾನ್ಸಡ್‌ಗೆ ಹಾಜರಾಗಲು ಜೆಇಇ ಮೇನ್‌ ಕಡ್ಡಾಯವಾಗಿದೆ.

ಜೆಇಇ ಸುಧಾರಿತ ಪರೀಕ್ಷೆ ಫಲಿತಾಂಶ ಪ್ರಕಟ: ಹುಡುಕುವುದು ಹೇಗೆ?

ಪ್ರಸ್ತುತ ಒಬ್ಬ ಅಭ್ಯರ್ಥಿಗೆ ಐಐಟಿ ಪ್ರವೇಶ ಪರೀಕ್ಷೆಯಲ್ಲಿ ಎರಡು ಬಾರಿ ಮಾತ್ರ ಪ್ರಯತ್ನ ನಡೆಸಲು ಅವಕಾಶ ನೀಡಲಾಗುತ್ತದೆ. ಆದರೆ ಈ ವರ್ಷ ಪರೀಕ್ಷೆ ಬರೆಯಲು ಸಾಧ್ಯವಾಗದ ಕೊನೆಯ ವರ್ಷದಲ್ಲಿ ಇರುವ ಅಥವಾ ಎರಡನೆಯ ಪ್ರಯತ್ನದ ಅಭ್ಯರ್ಥಿಗಳಿಗೆ ವಿನಾಯಿತಿ ನೀಡಲಾಗುತ್ತಿದೆ.

ಐಐಟಿ ಪ್ರವೇಶ ಪರೀಕ್ಷೆ ಬರೆಯಲು ಸಾಧ್ಯವಾಗದ ವಿದ್ಯಾರ್ಥಿಗಳು ಮುಂದಿನ ವರ್ಷ ಪರೀಕ್ಷೆಗೆ ಹಾಜರಾಗಲು ಹೆಚ್ಚುವರಿ ಅವಕಾಶ ಪಡೆದುಕೊಳ್ಳಲಿದ್ದಾರೆ. ಈ ಬಗ್ಗೆ ಮಂಗಳವಾರ ನಡೆದ ಜಂಟಿ ಪ್ರವೇಶಾತಿ ಮಂಡಳಿಯ ತುರ್ತು ಸಭೆಯಲ್ಲಿ ತೀರ್ಮಾನಿಸಲಾಯಿತು.

English summary
Joint Admission Board said students who missed JEE Advanced this year will get a chance to reappear directly for the exam next year.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X