Ahmedabad Plane Crash: ಪ್ರಧಾನಿ ಮೋದಿ, ಅಮಿತ್ ಶಾ ರಾಜೀನಾಮೆಗೆ ಬಿಜೆಪಿ ನಾಯಕನೇ ಆಗ್ರಹ: ಯಾರದು?
ನವದೆಹಲಿ, ಜೂನ್ 13: ಗುಜರಾತ್ ರಾಜಧಾನಿ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿದ್ದು, ಇಡೀ ವಿಮಾನ ನಿಲ್ದಾಣದಾದ್ಯಂತ ದಟ್ಟ ಹೊಗೆ ಹಾಗೂ ಬೆಂಖಿ ಆವರಿಸಿದೆ. ಅಹಮದಾಬಾದ್ ಏರ್ಪೋರ್ಟ್ ಬಳಿ ಟೇಕ್ ಆಫ್ ಆಗುತ್ತಿದ್ದಏರ್ ಇಂಡಿಯಾ ವಿಮಾನ ಏಕಾಏಕಿ ವಿಮಾನ ಪತನಗೊಂಡ ಪರಿಣಾಮ ದಟ್ಟವಾದ ಹೊಗೆ ಕಾಣಿಸಿಕೊಂಡಿದ್ದು, 242 ಜನ ಪ್ರಯಾಣಿಕರಲ್ಲಿ 241 ಮಂದಿ ಪ್ರಯಾಣಿಕರು ಮೃತಪಟ್ಟಿದ್ದು, ಓರ್ವ ವ್ಯಕ್ತಿ ಮಾತ್ರ ಬದುಕುಳಿದಿದ್ದಾರೆ.
ಅಹಮದಾಬಾದ್ ಏರ್ಪೋರ್ಟ್ ಬಳಿ ಮೇಧಿನಿ ನಗರ್ನಲ್ಲಿ ಈ ಘಟನೆ ಸಂಭವಿಸಿದೆ. ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನವು 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಸೇರಿದಂತೆ 242 ಜನರೊಂದಿಗೆ ಲಂಡನ್‌ಗೆ ತೆರಳುತ್ತಿತ್ತು. ವಿಮಾನವು ನಗರದ ವಿಮಾನ ನಿಲ್ದಾಣದಿಂದ ಸ್ವಲ್ಪ ದೂರದಲ್ಲಿರುವ ಫೋರೆನ್ಸಿಕ್ ಕ್ರಾಸ್ ರಸ್ತೆಯ ಬಳಿ ಪತನಗೊಂಡಿದ್ದು, ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳ ಧಾವಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಆದರೆ, ಓರ್ವ ವ್ಯಕ್ತಿಯನ್ನ ಹೊರತು ಪಡಿಸಿ 241 ಮಂದಿ ಮೃತಪಟ್ಟಿದ್ದಾರೆ.

ಗುಜರಾತ್ ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಗುರುವಾರ ಏರ್ ಇಂಡಿಯಾ ವಿಮಾನ ಪತನವಾಗಿದ್ದು ಭಾರತದ ಅತ್ಯಂತ ಭೀಕರ ವಿಮಾನ ದುರಂತಗಳಲ್ಲಿ ಇದು ಒಂದಾಗಿದ್ದು,ಈ ದುರಂತದ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ಆಗ್ರಹಿಸಿದ್ದಾರೆ.
When a train derailed in 1950s, Lal Bahadur Shashtri resigned. On the same morality I demand PM Modi, HM Amit Shah and Civil Aviation Naidu resign so that a free& fair inquiry is held. All that Modi and associates have been doing so far is galavanting which must stop must stop.
— Subramanian Swamy (@Swamy39) June 12, 2025
1950 ರಲ್ಲಿ ಅರಿಯಲೂರ್ ರೈಲು ಅಪಘಾತದ ನಂತರ ರೈಲ್ವೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಉದಾಹರಣೆ ನೀಡಿದ ಸುಬ್ರಮಣಿಯನ್ ಸ್ವಾಮಿ, ಈ ಭೀಕರ ರೈಲು ಅಪಘಾತದಲ್ಲಿ ಸುಮಾರು 150 ಜನರು ಸಾವನ್ನಪ್ಪಿದ್ದರು ಮತ್ತು ಅದರ ನೈತಿಕ ಹೊಣೆ ಹೊತ್ತು ಶಾಸ್ತ್ರಿ ರಾಜೀನಾಮೆ ನೀಡಿದ್ದರು ಎಂದು ಸುಬ್ರಮಣಿಯನ್ ಸ್ವಾಮಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
1950ರಲ್ಲಿ ರೈಲು ಅಪಘಾತ ಸಂಭವಿಸಿದಾಗ, ಲಾಲ್ ಬಹದ್ದೂರ್ ಶಾಸ್ತ್ರಿ ರಾಜೀನಾಮೆ ನೀಡಿದ್ದರು. ಅದೇ ನೈತಿಕತೆಯ ಆಧಾರದಲ್ಲಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ನಾಗರಿಕ ವಿಮಾನ ಸಚಿವ ರಾಮ್ ಮೋಹನ್ ನಾಯ್ಡು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡುವ ಮೂಲಕ, ಮುಕ್ತ ಹಾಗೂ ನ್ಯಾಯಸಮ್ಮತ ತನಿಖೆಗೆ ಅವಕಾಶ ಮಾಡಿಕೊಡಬೇಕು ಎಂದು ನಾನು ಆಗ್ರಹಿಸುತ್ತೇನೆ ಎಂದು ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications