ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತಮಿಳುನಾಡು ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ!?

|
Google Oneindia Kannada News

ನವದೆಹಲಿ, ಡಿಸೆಂಬರ್ 8: ಭಾರತೀಯ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ಸಿಂಗ್ ರಾವತ್ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನದ ಬಗ್ಗೆ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಅನುಮಾನ ವ್ಯಕ್ತಪಡಿಸಿದ್ದಾರೆ. ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯೇ ಎಂಬ ಬಗ್ಗೆ ಅವರು ಶಂಕಿಸಿದ್ದಾರೆ. ಈ ಕುರಿತು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

"ಭಾರತೀಯ ಸೇನೆಯಲ್ಲಿ ಇರುವ ಕೆಲವೇ ಕೆಲವು ಹಿರಿಯ ಅಧಿಕಾರಿಗಳು ಕೇಂದ್ರ ಸರ್ಕಾರಕ್ಕೆ ಆಗಾಗ ಎಚ್ಚರಿಕೆ ಸಂದೇಶವನ್ನು ನೀಡುತ್ತಿದ್ದರು. ಚೀನಾದಿಂದ ಗಡಿ ರೇಖೆ ಉಲ್ಲಂಘನೆ ಆಗುತ್ತಿದೆ, ಚೀನಾದಿಂದ ಬೆದರಿಕೆಗಳು ಹೆಚ್ಚುತ್ತಿವೆ, ಚೀನಾದಿಂದ ನಿಯಮಗಳು ಪಾಲನೆ ಆಗುತ್ತಿಲ್ಲ ಎಂಬುದನ್ನು ಸರ್ಕಾರದ ಗಮನಕ್ಕೆ ತರುತ್ತಿದ್ದರು," ಎಂದು ಸಂಸದ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.

Bipin Rawat: ರಕ್ಷಣಾ ಪಡೆ ಮುಖ್ಯಸ್ಥ ಬಿಪಿನ್ ರಾವತ್ ವ್ಯಕ್ತಿಚಿತ್ರBipin Rawat: ರಕ್ಷಣಾ ಪಡೆ ಮುಖ್ಯಸ್ಥ ಬಿಪಿನ್ ರಾವತ್ ವ್ಯಕ್ತಿಚಿತ್ರ

ತಮಿಳುನಾಡಿನ ನೀಲ್‌ಗಿರಿ ಜಿಲ್ಲೆಯ ಕುನೂರ್ ಬಳಿ ಬುಧವಾರ ನಡೆದ ಸೇನಾ ಹೆಲಿಕಾಪ್ಟರ್ ಪತನವಾಗಿದೆ. ಅದು ಹೊತ್ತಿ ಉರಿದಿರುವ ಬಗ್ಗೆ ಸುದ್ದಿಯಾಗಿದೆ ಆದರೆ ಅದರ ಹಿಂದಿನ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ಸುಬ್ರಮಣಿಯನ್ ಸ್ವಾಮಿ ಶಂಕೆ ವ್ಯಕ್ತಪಡಿಸಿದ್ದಾರೆ.

Subramanian Swamy Raises Doubts Over CDS Bipin Rawat Army Chopper Crash

ಲೇಸರ್ ದಾಳಿ ನಡೆಸಿತಾ ಚೀನಾ?:
ತಮಿಳುನಾಡು ಹೆಲಿಕಾಪ್ಟರ್ ಪತನದ ಬಗ್ಗೆ ನನಗೆ ಇನ್ನೊಂದು ವಿಷಯ ಅರ್ಥವಾಗುತ್ತಿಲ್ಲ. ಅದರಲ್ಲಿ ಒಂದು ಸೈಬರ್ ವಾರಫೇರ್ ಆಗಿದ್ದರೆ ಇನ್ನೊಂದು ಲೇಸರ್ ದಾಳಿ ಆಗಿದೆ. ಆ ಮೂಲಕ ಚೀನಾ ದಾಳಿ ನಡೆಸಿದೆಯೇ, ಅಥವಾ ಚೀನಾ ಬೆದರಿಕೆಯೊಡ್ಡುತ್ತಿದ್ದ ರೀತಿಯಲ್ಲಿ ಲೇಸರ್ ಮೂಲಕ ಈ ಘಟನೆಗೆ ಕಾರಣವಾಗಿಯೂ ಇರಬಹುದು. ಆದ್ದರಿಂದ ಈ ವಿಷಯವನ್ನು ನಾವು ತುಂಬಾ ಗಂಭೀರವಾಗಿ ತೆಗೆದುಕೊಳ್ಳಬೇಕು. ಆಂತರಿಕ ಹಾಗೂ ಬಾಹ್ಯ ರಕ್ಷಣೆ ಕುರಿತು ಹೆಚ್ಚು ಲಕ್ಷ್ಯ ವಹಿಸಬೇಕಿದೆ ಎಂದು ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.

ಏನಿದು ಸೇನಾ ಹೆಲಿಕಾಪ್ಟರ್ ಪತನದ ಹಿನ್ನೆಲೆ?:

ತಮಿಳುನಾಡಿನ ನೀಲ್‌ಗಿರಿ ಜಿಲ್ಲೆಯ ಕುನೂರ್ ಬಳಿ ಬುಧವಾರ ನಡೆದ ಸೇನಾ ಹೆಲಿಕಾಪ್ಟರ್ ಪತನದಲ್ಲಿ ಭಾರತದ ಮೊದಲ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಸೇರಿ ಒಟ್ಟು 13 ಜನರು ಮೃತಪಟ್ಟಿದ್ದಾರೆ. ಹೆಲಿಕಾಪ್ಟರ್ ಪತನಗೊಂಡ ಸ್ಥಳದಿಂದ ರಕ್ಷಿಸಲ್ಪಟ್ಟಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರಿಗೆ ಶೇ.80 ಸುಟ್ಟ ಗಾಯಗಳಾಗಿದ್ದು, ಜೀವನ್ಮರಣದ ಹೋರಾಟ ನಡೆಸುತ್ತಿದ್ದಾರೆ.

ಉನ್ನತ ಮಟ್ಟದ ತನಿಖೆಗೆ ಸ್ವಾಮಿ ಆಗ್ರಹ:
ಭಾರತದ ಮೊದಲ ರಕ್ಷಣಾ ಸಿಬ್ಬಂದಿಯ (ಸಿಡಿಎಸ್) ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮತ್ತು ಇತರ 11 ಮಂದಿಯನ್ನು ಬಲಿತೆಗೆದುಕೊಂಡ ತಮಿಳುನಾಡಿನ ಕೂನೂರ್ ಬಳಿ ಹೆಲಿಕಾಪ್ಟರ್ ಅಪಘಾತದ ಕುರಿತು ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯಾಧೀಶರಿಂದ ತನಿಖೆ ನಡೆಸುವಂತೆ ರಾಜ್ಯಸಭಾ ಸಂಸದ ಸುಬ್ರಮಣಿಯನ್ ಸ್ವಾಮಿ ಬುಧವಾರ ಒತ್ತಾಯಿಸಿದ್ದಾರೆ.

ಹೆಲಿಕಾಪ್ಟರ್ ಪತನದ ಕುರಿತು ಅಂತಿಮ ವರದಿ ಬಂದಿಲ್ಲ, ಹಾಗಾಗಿ ಏನನ್ನೂ ಹೇಳಲು ನನಗೆ ತುಂಬಾ ಕಷ್ಟವಾಗುತ್ತದೆ. ಆದರೆ ತಮಿಳುನಾಡಿನಂತಹ ಸುರಕ್ಷಿತ ವಲಯದಲ್ಲಿ ಮಿಲಿಟರಿ ವಿಮಾನ ಸ್ಫೋಟಗೊಂಡಿದೆ ಎಂದು ತೋರುತ್ತದೆ," ಎಂದಿರುವ ಸಂಸದ ಸುಬ್ರಮಣಿಯನ್ ಸ್ವಾಮಿ ಈ ಘಟನೆಯು "ಆಘಾತಕಾರಿ" ಮತ್ತು ರಾಷ್ಟ್ರೀಯ ಭದ್ರತೆಗೆ ದೊಡ್ಡ ಎಚ್ಚರಿಕೆ ಎಂದು ಸಂಸದ ಸುಬ್ರಮಣಿಯನ್ ಸ್ವಾಮಿ ಬಣ್ಣಿಸಿದ್ದಾರೆ.

"ಇದು ಅತ್ಯಂತ ಗಂಭೀರ ಹಾಗೂ ತನಿಖೆಯ ಅಗತ್ಯವಿರುವ ವಿಷಯವಾಗಿದೆ. ಸಾರ್ವಜನಿಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು, ಆದ್ದರಿಂದ ಯಾರಾದರೂ, ಸುಪ್ರೀಂ ಕೋರ್ಟ್ ಹಿರಿಯ ನ್ಯಾಯಾಧೀಶರು ಈ ಬಗ್ಗೆ ತನಿಖೆ ನಡೆಸಬೇಕು" ಎಂದು ಸ್ವಾಮಿ ಹೇಳಿದ್ದಾರೆ.

Recommended Video

ವಾಯುಪಡೆಯ Mi-17V5 ಹೆಲಿಕಾಪ್ಟರ್ ಸ್ಪೆಷಾಲಿಟಿ ಏನು? | Oneindia Kannada

English summary
BJP MP Subramanian Swamy Raises Doubts over CDS Bipin Rawat Army Helicopter Crash. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X