ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಬ್ಸಿಡಿಯುಳ್ಳ ಹಾಗೂ ಸಬ್ಸಿಡಿ ರಹಿತ ಸಿಲಿಂಡರ್ ಬೆಲೆ ಇಳಿಕೆ

|
Google Oneindia Kannada News

Recommended Video

ಸಬ್ಸಿಡಿಯುಳ್ಳ ಹಾಗು ಸಬ್ಸಿಡಿ ರಹಿತ ಎಲ್ ಪಿ ಜಿ ಸಿಲಿಂಡರ್ ಬೆಲೆ ಇಳಿಕೆ

ನವದೆಹಲಿ, ಜನವರಿ 31:ಲೋಕಸಭೆ ಚುನಾವಣೆ 2019ಕ್ಕೆ ಸಿದ್ಧತೆ ನಡೆಸಿರುವ ಕೇಂದ್ರ ಸರ್ಕಾರ, ತನ್ನ ಜನಪರ ಯೋಜನೆಯನ್ನು ವಿಸ್ತರಿಸಲು ಮುಂದಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ಗೃಹಬಳಕೆ ಇಂಧನಗಳ ಸಬ್ಸಿಡಿಯನ್ನು ವಿಸ್ತರಣೆ ಮಾಡುವ ಸಾಧ್ಯತೆ ಕಂಡು ಬಂದಿದೆ. ಇದರ ಬೆನ್ನಲ್ಲೇ ಗುರುವಾರ ಮಧ್ಯರಾತ್ರಿಯಿಂದ ಅನ್ವಯವಾಗುವಂತೆ ಸಬ್ಸಿಡಿಯುಳ್ಳ ಹಾಗೂ ಸಬ್ಸಿಡಿ ರಹಿತ ಸಿಲಿಂಡರ್ ಬೆಲೆಯನ್ನು ತಗ್ಗಿಸಲಾಗಿದೆ.

14.2 ಕೆಜಿ ಸಬ್ಸಿಡಿಯುಳ್ಳ ಅಡುಗೆ ಅನಿಲ(ಎಲ್ ಪಿಜಿ) ಬೆಲೆ ಪ್ರತಿ ಸಿಲಿಂಡರ್ ಮೇಲೆ 1.46ರು ತಗ್ಗಿದೆ. ದೆಹಲಿಯಲ್ಲಿ ಸಿಲಿಂಡರ್ ದರ 494.99ರು ಬದಲಿಗೆ 493.53ರು ಆಗಲಿದೆ ಎಂದು ಇಂಡಿಯನ್ ಆಯಿಲ್ ಕಾರ್ಪ್ (ಐಒಸಿ) ಹೇಳಿದೆ.

ಕೊಳವೆ ಮೂಲಕ ಅಡುಗೆ ಅನಿಲ ಪೂರೈಕೆ, ರಾಜ್ಯದ ಯಾವ ಜಿಲ್ಲೆಗಳಿವೆ? ಕೊಳವೆ ಮೂಲಕ ಅಡುಗೆ ಅನಿಲ ಪೂರೈಕೆ, ರಾಜ್ಯದ ಯಾವ ಜಿಲ್ಲೆಗಳಿವೆ?

ಜೂನ್‌ ತಿಂಗಳಿನಿಂದ ಡಿಸೆಂಬರ್‌ವರೆಗೂ ಸತತ ಆರು ಬಾರಿ ದರ ಏರಿಕೆಯಾಗಿತ್ತು. ಇದರಿಂದ ಗ್ರಾಹಕರು ಕಂಗಾಲಾಗಿದ್ದರು. ಈಗ ಬೆಲೆ ಇಳಿಕೆಯಿಂದ ತುಸು ನೆಮ್ಮದಿ ದೊರೆತಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಎಲ್ ಪಿಜಿ ದರ ಕುಸಿತದಿಂದ ಅಮೆರಿಕನ್ ಡಾಲರ್ ಎದುರು ರೂಪಾಯಿ ವಿನಿಮಯ ದರ ಬಲಗೊಂಡ ಕಾರಣ ಎಲ್ ಪಿಜಿ ದರ ಇಳಿಕೆಯಾಗಿದೆ ಎಂದು ಐಓಸಿ ತಿಳಿಸಿದೆ.

Subsidised LPG price cut by Rs 1.46 and Non Subsidised rate reduced by Rs 30

ಡಿಸೆಂಬರ್ 1ರಂದು ಸಬ್ಸಿಡಿ ರಹಿತ ಎಲ್ ಪಿಜಿ ಸಿಲಿಂಡರ್ ಬೆಲೆ 133 ರೂ.ನಷ್ಟು ಇಳಿಕೆಯಾಗಿತ್ತು. ಸಬ್ಸಿಡಿಯುಳ್ಳ ಎಲ್ ಪಿಜಿ ಬೆಲೆ 6.52ರಷ್ಟು ಇಳಿಕೆಯಾಗಿತ್ತು. ಜನವರಿ 01ರಂದು 5.91ರು ಇಳಿಕೆ ಕಂಡಿತ್ತು.

ಸಬ್ಸಿಡಿ ರಹಿತ ಸಿಲಿಂಡರ್ ಬೆಲೆ ಕೂಡಾ ತಗ್ಗಿದ್ದು, ಪ್ರತಿ ಸಿಲಿಂಡರ್ ಮೇಲೆ 30ರು ಕಡಿಮೆಯಾಗಿದೆ. ದೆಹಲಿಯಲ್ಲಿ 14.2 ಕೆಜಿ ಗೃಹ ಉಪಯೋಗಿ ಸಿಲಿಂಡರ್ ಬೆಲೆ 659ರು ಆಗಲಿದೆ. ಜನವರಿಯಲ್ಲಿ 120.50ರು ಹಾಗೂ ಡಿಸೆಂಬರ್ 01 ಹಾಗೂ ಡಿಸೆಂಬರ್ 01ರಂದು 133ರು ಇಳಿಕೆಯಾಗಿತ್ತು.

ಕೊಳವೆ ಮೂಲಕ ಅಡುಗೆ ಅನಿಲ ಪೂರೈಕೆ, ರಾಜ್ಯದ ಯಾವ ಜಿಲ್ಲೆಗಳಿವೆ? ಕೊಳವೆ ಮೂಲಕ ಅಡುಗೆ ಅನಿಲ ಪೂರೈಕೆ, ರಾಜ್ಯದ ಯಾವ ಜಿಲ್ಲೆಗಳಿವೆ?

ಎಲ್ಲ ಎಲ್ ಪಿಜಿ ಗ್ರಾಹಕರೂ ಮಾರುಕಟ್ಟೆ ಬೆಲೆಯಲ್ಲಿ ಅನಿಲ ಖರೀದಿ ಮಾಡಬೇಕಿದೆ. ವರ್ಷಕ್ಕೆ 14.2 ಕೆಜಿ ತೂಕದ 12 ಸಿಲಿಂಡರ್‌ಗಳಿಗೆ ಸರ್ಕಾರ ಸಬ್ಸಿಡಿ ಒದಗಿಸುತ್ತಿದ್ದು, ಅದು ನೇರವಾಗಿ ಗ್ರಾಹಕರ ಬ್ಯಾಂಕ್ ಖಾತೆಗೆ ಜಮೆಯಾಗುತ್ತಿದೆ.

ಗಮನಿಸಿ: ಸರ್ಕಾರಿ ಸ್ವಾಮ್ಯದ ಇಂಧನ ಕಂಪನಿಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್, ಹಿಂದೂಸ್ತಾನ್ ಪೆಟ್ರೋಲಿಯಂ, ಭಾರತ್ ಪೆಟ್ರೋಲಿಯಂ ಪ್ರತಿ ತಿಂಗಳ ಮೊದಲ ದಿನದಂದು ಇಂಧನ ದರ, ಸಬ್ಸಿಡಿ ರಹಿತ ಎಲ್ ಪಿಜಿ, ಜೆಟ್ ಇಂಧನ, ಸೀಮೆಎಣ್ಣೆ ಬೆಲೆ ಬಗ್ಗೆ ನಿರ್ಧಾರ ಕೈಗೊಳ್ಳುತ್ತವೆ. ಬೆಲೆ ಏರಿಕೆ ಹಾಗೂ ಇಳಿಕೆ ಎಲ್ಲವೂ ಜಾಗತಿಕ ಮಾರುಕಟ್ಟೆ ದರದ ಮೇಲೆ ಅವಲಂಬಿತವಾಗಿರುತ್ತದೆ.

English summary
Domestic cooking gas (LPG) price was cut by Rs 1.46 per cylinder on Thursday and Non Subsidised rate reduced by Rs 30 per cylinder. This is the third straight monthly reduction in LPG rate.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X