ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹೊಸ ವರ್ಷಕ್ಕೆ ಕೇಂದ್ರ ಸರ್ಕಾರದ ಕೊಡುಗೆ: ಎಲ್ ಪಿಜಿ ದರ ಇಳಿಕೆ

|
Google Oneindia Kannada News

ನವದೆಹಲಿ, ಡಿಸೆಂಬರ್ 31: ಹೊಸ ವರ್ಷದ ಸಂಭ್ರಮಾಚರಣೆಯಲ್ಲಿರುವ ದೇಶಕ್ಕೆ ಕೇಂದ್ರ ಸರ್ಕಾರ ಸಂತಸದ ಸುದ್ದಿ ನೀಡಿದೆ.

ಅಡುಗೆ ಅನಿಲ (ಎಲ್ ಪಿಜಿ) ದರದಲ್ಲಿ 5.91 ರೂ ಇಳಿಕೆ ಮಾಡಲಾಗಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಹೇಳಿಕೆ ತಿಳಿಸಿದೆ.

ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್ ಬೆಲೆ ಇಳಿಕೆಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್ ಬೆಲೆ ಇಳಿಕೆ

ಸಬ್ಸಿಡಿ ಸಹಿತ ಎಲ್ ಪಿಜಿ ದರದಲ್ಲಿ 5.91 ರೂ ಇಳಿಕೆಯಾಗಿದೆ. ಸಬ್ಸಿಡಿ ರಹಿತ ಅಡುಗೆ ಅನಿಲದ ದರ 120.50 ರೂ. ನಷ್ಟು ಇಳಿಕೆ ಮಾಡಲಾಗಿದೆ.

subsidised lpg price cut by Rs 5.91, non subsidised rate by Rs 120.50

14.2 ಕೆಜಿ ತೂಕದ ಸಬ್ಸಿಡಿ ಸಹಿತ ಎಲ್ ಪಿಜಿ ಸಿಲಿಂಡರ್ ರಾಷ್ಟ್ರ ರಾಜಧಾನಿಯಲ್ಲಿ ಈಗ 500.90 ರೂ. ಇದ್ದು, ಇಂದು ಮಧ್ಯರಾತ್ರಿಯಿಂದ 494.99 ರೂ. ಆಗಲಿದೆ.

ಮಾರುಕಟ್ಟೆಯಲ್ಲಿ ತೈಲ ಬೆಲೆ ಇಳಿಕೆಯಾದ ಕಾರಣ ಡಿ.1ರಿಂದ ತೆರಿಗೆ ಹಣದಲ್ಲಾದ ಬದಲಾವಣೆಯಿಂದ ಉಂಟಾದ ಪರಿಣಾಮದಿಂದಾಗಿ ಈ ತಿಂಗಳಲ್ಲಿ ಇದು ಎರಡನೆಯ ದರ ಇಳಿಕೆಯಾಗಿದೆ. ಡಿ. 1ರಂದು ಎಲ್ ಪಿಜಿ ದರ ಸಿಲಿಂಡರ್‌ಗೆ 6.52 ರೂ, ಇಳಿಕೆಯಾಗಿತ್ತು.

ದಾಖಲೆ ಪ್ರಮಾಣದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಕುಸಿತದಾಖಲೆ ಪ್ರಮಾಣದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಕುಸಿತ

ಜೂನ್‌ ತಿಂಗಳಿನಿಂದ ಡಿಸೆಂಬರ್‌ವರೆಗೂ ಸತತ ಆರು ಬಾರಿ ದರ ಏರಿಕೆಯಾಗಿತ್ತು. ಇದರಿಂದ ಗ್ರಾಹಕರು ಕಂಗಾಲಾಗಿದ್ದರು. ಈಗ ಬೆಲೆ ಇಳಿಕೆಯಿಂದ ತುಸು ನೆಮ್ಮದಿ ದೊರೆತಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಎಲ್ ಪಿಜಿ ದರ ಕುಸಿತದಿಂದ ಅಮೆರಿಕನ್ ಡಾಲರ್ ಎದುರು ರೂಪಾಯಿ ವಿನಿಮಯ ದರ ಬಲಗೊಂಡ ಕಾರಣ ಎಲ್ ಪಿಜಿ ದರ ಇಳಿಕೆಯಾಗಿದೆ ಎಂದು ಐಓಸಿ ತಿಳಿಸಿದೆ.

ಡಿಸೆಂಬರ್ 1ರಂದು ಸಬ್ಸಿಡಿ ರಹಿತ ಎಲ್ ಪಿಜಿ ಸಿಲಿಂಡರ್ ಬೆಲೆ 133 ರೂ.ನಷ್ಟು ಇಳಿಕೆಯಾಗಿತ್ತು. ದೆಹಲಿಯಲ್ಲಿ ಇದರ ಬೆಲೆ ಪ್ರತಿ ಸಿಲಿಂಡರ್‌ಗೆ 689 ರೂ. ಇರಲಿದೆ.

ಹೊಸ ವರ್ಷಕ್ಕೆ ಫುಲ್ ಕ್ಯಾಶ್ ಬ್ಯಾಕ್ ಆಫರ್ ನೀಡಿದ ಜಿಯೋ ಹೊಸ ವರ್ಷಕ್ಕೆ ಫುಲ್ ಕ್ಯಾಶ್ ಬ್ಯಾಕ್ ಆಫರ್ ನೀಡಿದ ಜಿಯೋ

ಎಲ್ಲ ಎಲ್ ಪಿಜಿ ಗ್ರಾಹಕರೂ ಮಾರುಕಟ್ಟೆ ಬೆಲೆಯಲ್ಲಿ ಅನಿಲ ಖರೀದಿ ಮಾಡಬೇಕಿದೆ. ವರ್ಷಕ್ಕೆ 14.2 ಕೆಜಿ ತೂಕದ 12 ಸಿಲಿಂಡರ್‌ಗಳಿಗೆ ಸರ್ಕಾರ ಸಬ್ಸಿಡಿ ಒದಗಿಸುತ್ತಿದ್ದು, ಅದು ನೇರವಾಗಿ ಗ್ರಾಹಕರ ಬ್ಯಾಂಕ್ ಖಾತೆಗೆ ಜಮೆಯಾಗುತ್ತಿದೆ.

ಜನವರಿಯಿಂದ ಗ್ರಾಹಕರು ಪ್ರತಿ ಸಿಲಿಂಡರ್‌ಗೆ 194.01 ರೂಪಾಯಿ ಸಬ್ಸಿಡಿಯನ್ನು ಖಾತೆಗೆ ಪಡೆದುಕೊಳ್ಳಲಿದ್ದಾರೆ.

English summary
Central Government has cut the price of LPG cylinder by Rs 5.91 on Monday. Non subsidized Cylinders rate will cut down by 120.50 from January.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X