Sudha Murthy: ಹಿಂದಿ ಕಲಿಯುವುದು ತಪ್ಪಲ್ಲ, ತ್ರಿಭಾಷಾ ಸೂತ್ರ ಓಕೆ ಎಂದ ಸಂಸದೆ ಸುಧಾ ಮೂರ್ತಿ!
Sudha Murthy: ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದಲ್ಲಿ ತ್ರಿಭಾಷಾ ಸೂತ್ರದ ಬಗ್ಗೆ ಭಾರೀ ಚರ್ಚೆಗಳು ನಡೆದಿವೆ. ಹಿಂದಿ ಹೇರಿಕೆಯನ್ನು ನಿಲ್ಲಿಸುವಂತೆ ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳು ಆಗ್ರಹಿಸಿವೆ. ತಮಿಳುನಾಡು ಸರ್ಕಾರವು ಕೇಂದ್ರ ಸರ್ಕಾರದೊಂದಿಗೆ ಈ ವಿಚಾರದಲ್ಲಿ ಉಗ್ರ ಹೋರಾಟವನ್ನೇ ಮಾಡಿದೆ. ದಕ್ಷಿಣ ಭಾರತದಲ್ಲಿ ತಮಿಳುನಾಡಿನಲ್ಲಿ ಮಾತ್ರ ತ್ರಿಭಾಷಾ ಸೂತ್ರ ಇಲ್ಲ. ತ್ರಿಭಾಷಾ ಸೂತ್ರ ಎಂದರೆ ಶಾಲಾ ಮಕ್ಕಳು ವಿದ್ಯಾಭ್ಯಾಸದಲ್ಲಿ ಕನ್ನಡ, ಇಂಗ್ಲಿಷ್ ಹಾಗೂ ಹಿಂದಿಯನ್ನು ಕಲಿಯಬೇಕು. ಆದರೆ ಉತ್ತರ ಭಾರತದಲ್ಲಿ ಬಹುತೇಕ ರಾಜ್ಯಗಳಲ್ಲಿ ದ್ವಿಭಾಷಾ ನೀತಿ ಅನುಸರಿಸಲಾಗುತ್ತಿದೆ ಅಂದರೆ ಇಲ್ಲಿನ ವಿದ್ಯಾರ್ಥಿಗಳು ಹಿಂದಿ ಮತ್ತು ಇಂಗ್ಲಿಷ್ ಭಾಷೆಯನ್ನು ಮಾತ್ರ ಕಲಿಯುತ್ತಿದ್ದಾರೆ. ಇದೀಗ ಸಂಸದೆ ಸುಧಾ ಮೂರ್ತಿ ಅವರು ತ್ರಿಭಾಷಾ ಸೂತ್ರ ಇರಲಿ ಎಂದು ಹೇಳಿದ್ದಾರೆ.
ದೇಶದಲ್ಲಿ ಮತ್ತೆ ತ್ರಿಭಾಷಾ ಸೂತ್ರದ ಬಗ್ಗೆ ಚರ್ಚೆಗಳು ಜೋರಾಗಿ ನಡೆಯುತ್ತಿವೆ. ದಕ್ಷಿಣ ಭಾರತ ಹಾಗೂ ಉತ್ತರ ಭಾರತ ತ್ರಿಭಾಷ ಸೂತ್ರವನ್ನು ಅಳವಡಿಸಿಕೊಳ್ಳಬೇಕು. ದಕ್ಷಿಣದ ಭಾಷೆಯನ್ನು ಉತ್ತರ ಭಾರತೀಯರು ಹಾಗೂ ಹಿಂದಿಯನ್ನು / ಉತ್ತರ ಭಾರತದ ಭಾಷೆಯನ್ನು ದಕ್ಷಿಣ ಭಾರತೀಯರು ಮೂರನೇ ಭಾಷೆಯಾಗಿ ಆಯ್ಕೆ ಮಾಡಿಕೊಳ್ಳಬೇಕು ಎನ್ನುವುದ ಹಳೆಯ ಒಪ್ಪಂದ / ಶಿಕ್ಷಣ ನೀತಿಯಾಗಿದೆ. ಆದರೆ, ದಕ್ಷಿಣ ಭಾರತದಲ್ಲಿ ಕರ್ನಾಟಕವೂ ಸೇರಿದಂತೆ ನಾಲ್ಕು ರಾಜ್ಯಗಳು ತ್ರಿಭಾಷಾ ಸೂತ್ರವನ್ನು ಅಳವಡಿಸಿಕೊಂಡಿವೆ. ಆದರೆ ಉತ್ತರ ಭಾರತದ ಯಾವೊಂದು ರಾಜ್ಯದಲ್ಲೂ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಭಾಷೆಗಳನ್ನು ಅಳವಡಿಸಿಕೊಂಡಿಲ್ಲ.

ದೇಶದಲ್ಲಿ ತ್ರಿಭಾಷಾ ಸೂತ್ರ ಬೇಡ ಎನ್ನುವ ಬಗ್ಗೆ ಪರ-ವಿರೋಧ ಚರ್ಚೆಗಳು ಜೋರಾಗಿ ನಡೆದಿವೆ. ಈ ರೀತಿ ಇರುವಾಗಲೇ ರಾಜ್ಯಸಭಾ ಸಂಸದೆ ಸುಧಾ ಮೂರ್ತಿ ಅವರು ತ್ರಿಭಾಷಾ ಸೂತ್ರಕ್ಕೆ ತಮ್ಮ ಬೆಂಬಲವನ್ನು ಸೂಚಿಸಿದ್ದಾರೆ. ಯಾರು ಬೇಕಾದರೂ ಬಹು ಭಾಷೆಗಳನ್ನು ಕಲಿಯಬಹುದು. ನನಗೆ 7ರಿಂದ 8 ಭಾಷೆಗಳು ಬರುತ್ತವೆ. ಹೀಗಾಗಿ ನಾನು ಕಲಿಯುವುದನ್ನು ಆನಂದಿಸುತ್ತೇನೆ. ಬಹುಭಾಷೆಗಳಿಂದ ವಿದ್ಯಾರ್ಥಿಗಳು ಸಹ ಸಾಕಷ್ಟು ಕಲಿಯುವುದಕ್ಕೆ ಅವಕಾಶಗಳು ಇವೆ ಎಂದಿದ್ದಾರೆ.

ನೂತನ ಶಿಕ್ಷಣ ನೀತಿಯ ಬಗ್ಗೆ ಭಾರತದಲ್ಲಿ ಮತ್ತೊಮ್ಮೆ ಚರ್ಚೆಯಾಗುತ್ತಿದೆ. ಸಂಸತ್ತಿನಲ್ಲೂ ಈ ವಿಚಾರದ ಬಗ್ಗೆ ಚರ್ಚೆಗಳು ನಡೆದಿದೆ. ನೂತನ ಶಿಕ್ಷಣ ನೀತಿ ಹಾಗೂ ತ್ರಿಭಾಷಾ ಸೂತ್ರವನ್ನು ಕರ್ನಾಟಕ ಹಾಗೂ ತಮಿಳುನಾಡು ಸೇರಿದಂತೆ ದಕ್ಷಿಣ ಭಾರತ ರಾಜ್ಯಗಳು ವಿರೋಧಿಸುತ್ತಿವೆ. ಹೊಸ ಶಿಕ್ಷಣ ನೀತಿಯನ್ನು ಸಮರ್ಥಿಸಿಕೊಂಡಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು, ತಮಿಳುನಾಡಿನ ಆಡಳಿತರೂಢ ಡಿಎಂಕೆ ಪಕ್ಷವು ರಾಜಕೀಯ ಲಾಭಕ್ಕಾಗಿ ಭಾಷೆ ವಿಷಯವನ್ನು ಬಳಸಿಕೊಳ್ಳುತ್ತಿದೆ ಎಂದು ದೂರಿದ್ದಾರೆ.

ಮುಂದುವರಿದು ಸುಧಾಮೂರ್ತಿ ಅವರೊಂದಿಗಿನ ಮಾತನಾಡಿದ್ದ ವಿಷಯವನ್ನು ಅವರು ಸದನದಲ್ಲಿ ಉಲ್ಲೇಖಿಸಿದ್ದಾರೆ. ಇಲ್ಲಿ ಯಾರು ಸಹ ಯಾರ ಮೇಲೆಯೂ ಏನನ್ನೂ ಹೇರುತ್ತಿಲ್ಲ ಎಂದಿದ್ದಾರೆ. ಇನ್ನು ಸುಧಾಮೂರ್ತಿ ಅವರಿಗೆ ಎಷ್ಟು ಭಾಷೆಗಳು ಬರುತ್ತವೆ ಎಂದು ನಾನು ಕೇಳಿದೆ. ಅದಕ್ಕೆ ಅವರು ನಾನು ಹುಟ್ಟಿದಾಗಿನಿಂದ ಕನ್ನಡತಿ, ವೃತ್ತಿಯಿಂದ ಇಂಗ್ಲಿಷ್ ಕಲಿತೆ. ಅಭ್ಯಾಸದಿಂದಾಗಿ ಹಿಂದಿ, ಒಡಿಯಾ, ತೆಲುಗು, ಮರಾಠಿ ಹಾಗೂ ಸಂಸ್ಕೃತ ಭಾಷೆಗಳನ್ನು ಕಲಿತಿದ್ದೇನೆ ಅಂತ ಹೇಳಿದ್ದಾರೆ ಎಂದು ಧರ್ಮೇಂದ್ರ ಪ್ರಧಾನ್ ಅವರು ಹೇಳಿದ್ದಾರೆ.
ಅಲ್ಲದೇ ಇದರಲ್ಲಿ ತಪ್ಪೇನಿದೆ. ಸುಧಾಮೂರ್ತಿ ಅವರ ಮೇಲೆ ಈ ಭಾಷೆಗಳನ್ನು ಕಲಿಯಿರಿ ಎಂದು ಯಾರು ಒತ್ತಡ ಹೇರಿದ್ದಾರೆ. ಇಲ್ಲಿ ಯಾರೂ ಯಾರ ಮೇಲೆ ಸಹ ಯಾವುದೇ ಹೇರಿಕೆಯನ್ನು ಮಾಡುತ್ತಿಲ್ಲ. ಪ್ರಜಾಪ್ರಭುತ್ವ ಸಮಾಜದಲ್ಲಿ ನೀವು ಬಹುಭಾಷಿಕರಾಗಿರಬೇಕು ಎಂದಿದ್ದಾರೆ.
-
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ












Click it and Unblock the Notifications