Sudha Murthy: ರಾಜ್ಯಸಭೆಗೆ ಸುಧಾಮೂರ್ತಿ ನಾಮ ನಿರ್ದೇಶನ
ಬೆಂಗಳೂರು, ಮಾರ್ಚ್ 08: ಭಾರತ ಸರ್ಕಾರ ಮಹತ್ವದ ಬೆಳವಣಿಗೆಯೊಂದರಲ್ಲಿ ಸುಧಾಮೂರ್ತಿ ಅವರನ್ನು ರಾಜ್ಯಸಭಾ ಸದಸ್ಯರಾಗಿ ನಾಮ ನಿರ್ದೇಶನ ಮಾಡಿದೆ.
ಮಾರ್ಚ್ 8ರ ಶುಕ್ರವಾರ ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ಇನ್ಫೋಸಿಸ್ ಫೌಂಡೇಷನ್‌ನ ಮುಖ್ಯಸ್ಥೆ ಸುಧಾಮೂರ್ತಿ ಅವರು ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಅವರ ಪತ್ನಿ.

ರಾಜ್ಯಸಭಾ ಸದಸ್ಯರಾಗಿ ಸುಧಾಮೂರ್ತಿ (73) ಅವರನ್ನು ನಾಮ ನಿರ್ದೇಶನ ಮಾಡುವ ಕೇಂದ್ರ ಸರ್ಕಾರದ ಪ್ರಸ್ತಾಪಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದಾರೆ.
ನರೇಂದ್ರ ಮೋದಿ ಟ್ವೀಟ್: ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ನರೇಂದ್ರ ಮೋದಿ, "ಭಾರತದ ರಾಷ್ಟ್ರಪತಿಗಳು ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ನನಗೆ ಖುಷಿ ತಂದಿದೆ" ಎಂದು ಹೇಳಿದ್ದಾರೆ.
'ಸಮಾಜಸೇವೆ, ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಅವರ ಕೊಡುಗೆ ಅಪಾರ ಮತ್ತು ಸ್ಪೂರ್ತಿದಾಯಕವಾಗಿದೆ. ರಾಜ್ಯಸಭೆಯಲ್ಲಿ ಅವರ ಉಪಸ್ಥಿತಿಯು ನಾರಿ ಶಕ್ತಿಗೆ ಪ್ರಬಲವಾದ ಸಾಕ್ಷಿಯಾಗಲಿದೆ. ಅವರ ಸಂಸದೀಯ ಅಧಿಕಾರಾವಧಿಗೆ ಹಾರೈಸುತ್ತೇನೆ" ಎಂದು ಮೋದಿ ಪೋಸ್ಟ್ ಮಾಡಿದ್ದಾರೆ.
ಲೇಖಕರು, ವಿವಿಧ ಸಮಾಜ ಸೇವಾ ಕಾರ್ಯದಲ್ಲಿ ತೊಡಗಿರುವ ಸುಧಾಮೂರ್ತಿ ಅವರು ರಾಜಕೀಯಕ್ಕೆ ಬರಬೇಕು ಎಂಬುದು ಬಹಳ ದಿನಗಳ ಬೇಡಿಕೆಯಾಗಿತ್ತು. ಮಹಿಳಾ ದಿನಾಚರಣೆ ದಿನವೇ ಅವರನ್ನು ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಲಾಗಿದೆ.
ಸುಧಾಮೂರ್ತಿ ಪುತ್ರಿ ಅಕ್ಷತಾ ಮೂರ್ತಿ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಪತ್ನಿ. ರಿಷಿ ಸುನಕ್ ಮತ್ತು ಅಕ್ಷತಾ ಮೂರ್ತಿ ಈಗಾಗಲೇ ವಿದೇಶದಲ್ಲಿ ರಾಜಕೀಯದಲ್ಲಿದ್ದಾರೆ. ಈಗ ಸುಧಾಮೂರ್ತಿ ಅವರನ್ನು ಭಾರತದಲ್ಲಿ ರಾಜ್ಯಸಭಾ ಸದಸ್ಯರಾಗಿ ನಾಮ ನಿರ್ದೇಶನ ಮಾಡಿ ಆದೇಶ ಹೊರಡಿಸಲಾಗಿದೆ.
ನಿರೀಕ್ಷೆ ಮಾಡಿರಲಿಲ್ಲ: ರಾಜ್ಯಸಭಾ ಸದಸ್ಯರಾಗಿ ನಾಮ ನಿರ್ದೇಶನಗೊಂಡ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸುಧಾಮೂರ್ತಿ ಅವರು, "ನಾನು ಇದನ್ನು ನಿರೀಕ್ಷೆ ಮಾಡಿರಲಿಲ್ಲ. ಈ ವಿಚಾರ ಈಗ ತಿಳಿಯಿತು. ರಾಜಕೀಯಕ್ಕೆ ಬರಬೇಕು ಎಂದು ಕೊಂಡಿರಲಿಲ್ಲ. ಸಮಾಜಕ್ಕಾಗಿ ಸದಾ ಕೆಲಸ ಮಾಡುತ್ತೇನೆ" ಎಂದು ಹೇಳಿದರು.
ಸುಧಾಮೂರ್ತಿ ಅತಿದೊಡ್ಡ ಸ್ಟಾಫ್ಟ್‌ವೇರ್ ಕಂಪನಿಯ ಸಹ ಸಂಸ್ಥಾಪಕರಲ್ಲಿ ಒಬ್ಬರು. ಸರಳತೆ, ಸಜ್ಜನಿಕೆಯಿಂದ ಎಲ್ಲರಿಗೂ ಮಾದರಿಯಾದವರು ಅವರು. ಶಿಕ್ಷಣ ತಜ್ಞರಾಗಿ, ಲೇಖಕಿಯಾಗಿ ಮತ್ತು ಸಮಾಜ ಸೇವಾಕಾರ್ಯದಲ್ಲಿ ಬ್ಯುಸಿಯಾಗಿರುವ ಅವರನ್ನು ರಾಜ್ಯಸಭಾ ಸದಸ್ಯರಾಗಿ ನಾಮ ನಿರ್ದೇಶನ ಮಾಡಲಾಗಿದೆ.
ಆಗಸ್ಟ್ 19, 1950ರಂದು ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಸುಧಾಮೂರ್ತಿ ಜನಿಸಿದರು. ಡಾ. ಆರ್. ಹೆಚ್. ಕುಲಕರ್ಣಿ ಮತ್ತು ವಿಮಲಾ ಕುಲಕರ್ಣಿ ದಂಪತಿಯ ಪುತ್ರಿ. ಹುಬ್ಬಳ್ಳಿಯ ಕೆಎಲ್ಇ ಸಂಸ್ಥೆಯ BVB ಇಂಜಿನಿಯರಿಂಗ್ ಕಾಲೇಜಿನಲ್ಲಿ ಪದವಿ ಪಡೆದರು. ನಂತರ ಐಐಟಿಯಲ್ಲಿ ಕಂಪ್ಯೂಟರ್ ಸೈನ್ಸ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದರು.
ಟಾಟಾ ಇಂಜಿನಿಯರಿಂಗ್ ಮತ್ತು ಲೋಕೊಮೊಟಿವ್ ಕಂಪನಿಯಲ್ಲಿ ಸುಧಾಮೂರ್ತಿ ಕೆಲಸ ಆರಂಭಿಸಿದರು. ಅತಿದೊಡ್ಡ ವಾಹನ ತಯಾರಿಕಾ ಘಟಕಕ್ಕೆ ನೇಮಕಗೊಂಡ ಮೊದಲ ಮಹಿಳಾ ಇಂಜಿನಿಯರ್ ಎಂಬ ಹೆಗ್ಗಳಿಕೆ ಅವರದ್ದು. ಮುಂಬೈ ಮತ್ತು ಜಮ್‌ಶೆಡ್‌ಪುರದಲ್ಲಿಯೂ ಕಾರ್ಯ ನಿರ್ವಹಣೆ ಮಾಡಿದರು.
ಸುಧಾಮೂರ್ತಿ ಅವರು 1970 ಫೆಬ್ರವರಿ 10ರಂದು ನಾರಾಯಣ ಮೂರ್ತಿ ಅವರನ್ನು ವಿವಾಹವಾದರು. ಇನ್ಪೋಸಿಸ್ ಕಂಪನಿ ಸ್ಥಾಪಿಸಿದರು. ಕಂಪನಿ ಆದಾಯದಲ್ಲಿ ಒಂದಷ್ಟು ಹಣವನ್ನು ಸಮಾಜ ಸೇವೆಗೆ ಮೀಡಲಿಟ್ಟರು. 1996ರಲ್ಲಿ ಇನ್ಫೋಸಿಸ್ ಫೌಂಡೇಷನ್ ಸ್ಥಾಪನೆ ಮಾಡಲಾಯಿತು.
ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮನೆ ನಿರ್ಮಾಣ, ಶಾಲೆಗಳಲ್ಲಿ ಗ್ರಂಥಾಲಯ ನಿರ್ಮಾಣ, ಶೌಚಾಲಯ ನಿರ್ಮಾಣ ಸೇರಿದಂತೆ ವಿವಿಧ ಚಟುವಟಿಕೆಗಳಲ್ಲಿ ಫೌಂಡೇಷನ್ ತೊಡಗಿಸಿಕೊಂಡಿದೆ. ಸುಧಾಮೂರ್ತಿ ಅವರಿಗೆ 2006ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಕನ್ನಡ, ಇಂಗ್ಲೀಷ್‌ನಲ್ಲಿ ಹಲವಾರು ಪುಸ್ತಕಗಳನ್ನು ಅವರು ಬರೆದಿದ್ದಾರೆ.
-
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
ಇರಾನ್ನ ವಾಯುನೆಲೆ, ಶಸ್ತ್ರಾಸ್ತ್ರ ಡಿಪೋ ಮೇಲೆ ಯುಎಸ್ ಜಂಟಿ ದಾಳಿ, ರಷ್ಯಾ ಬೆಂಬಲ? ಇಲ್ಲಿವೆ ಪ್ರಮುಖಾಂಶಗಳು -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ












Click it and Unblock the Notifications