Breaking: ವಿಕ್ರಾಂತ್ ರೋಣ ಬೆಡಗಿ ಜಾಕ್ವೆಲಿನ್‌ಗೆ ಇಡಿ ಸಂಕಷ್ಟ

ನವದೆಹಲಿ, ಆಗಸ್ಟ್ 17: ಸುಕೇಶ್ ಚಂದ್ರಶೇಖರ್ ವಿರುದ್ಧದ 200 ಕೋಟಿ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಪೂರಕ ಆರೋಪ ಪಟ್ಟಿಯಲ್ಲಿ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ಆರೋಪಿ ಎಂದು ಹೆಸರಿಸಿದೆ.

200 ಕೋಟಿ ಸುಲಿಗೆ ಪ್ರಕರಣದಲ್ಲಿ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ಆರೋಪಿ ಎಂದು ಜಾರಿ ನಿರ್ದೇಶನಾಲಯದ ಚಾರ್ಜ್‌ಶೀಟ್‌ನಲ್ಲಿ ಹೆಸರಿಸಲಾಗಿದೆ.

ಭಾರಿ ಮೊತ್ತದ ವಂಚನೆ ಎಸಗಿದ ಪ್ರಕರಣದ ಪ್ರಮುಖ ಆರೋಪಿ ಸುಕೇಶ್ ಚಂದ್ರಶೇಖರ್ ಜೊತೆಗಿನ ಅವ್ಯವಹಾರ ಪ್ರಕರಣದಲ್ಲಿ ಸಿಲುಕಿಕೊಂಡಿರುವ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ಒಂದಾದ ಮೇಲೊಂದರಂತೆ ಸಂಕಷ್ಟಗಳು ಎದುರಾಗುತ್ತಲೇ ಇವೆ.

Sukesh Chandrashekhar con scandal : Actress Jacqueline Fernandez named accused by ED

ಈ ಹಿಂದೆ ಜಾಕ್ವೆಲಿನ್ ಫರ್ನಾಂಡಿಸ್ ಹೆಸರಿನಲ್ಲಿ ಇಡಲಾಗಿದ್ದ 7 ಕೋಟಿ ರೂಪಾಯಿ ಫಿಕ್ಸೆಡ್ ಡೆಪಾಸಿಟ್ ಹಣವನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿತ್ತು.

ಸುಕೇಶ್ ಚಂದ್ರಶೇಖರ್ ಅವ್ಯವಹಾರ ಪ್ರಕರಣದ ತನಿಖೆಯನ್ನು ಇಡಿ ನಡೆಸುತ್ತಿದೆ.

ಪ್ರಕರಣವೇನು...?

ರಾನ್‌ಬಾಕ್ಸಿ ಸಂಸ್ಥೆಯ ಶಿವಿಂದರ್ ಸಿಂಗ್ ಅವರು ಬೇರೊಂದು ಹಣ ಅವ್ಯವಹಾರ ಪ್ರಕರಣದಲ್ಲಿ 2019 ರಲ್ಲಿ ಜೈಲು ಸೇರಿದ್ದರು. ಅವರನ್ನು ಬಿಡಿಸಿಕೊಡುವ ಭರವಸೆ ನೀಡಿದ ಸುಕೇಶ್ ಚಂದ್ರಶೇಖರ್, ಶಿವಿಂದರ್ ಅವರ ಪತ್ನಿ ಅದಿತಿ ಸಿಂಗ್ ಅವರಿಂದ 200 ಕೋಟಿ ರೂ ಪಡೆದಿದ್ದರು ಎಂದು ಆರೋಪಿಸಲಾಗಿದೆ. ಈ ಸಂಬಂಧ ಅದಿತಿ ಸಿಂಗ್ ನೀಡಿದ ದೂರಿನ ಮೇರೆಗೆ ಸುಕೇಶ್ ಚಂದ್ರಶೇಖರ್ ವಿರುದ್ಧ ಪ್ರಕರಣ ವಂಚನೆ ಪ್ರಕರಣ ದಾಖಲಾಗಿದೆ.

Sukesh Chandrashekhar con scandal : Actress Jacqueline Fernandez named accused by ED

ರಾನ್‌ಬಾಕ್ಸಿ ಎಂಬ ಔಷಧ ಕಂಪನಿಯ ಮಾಜಿ ಮಾಲಿಕ ಶಿವಿಂದರ್ ಸಿಂಗ್ ಕುಟುಂಬದಿಂದ ಸುಲಿಗೆ ಮಾಡಿದ 200 ಕೋಟಿ ರೂ ಹಣದಲ್ಲಿ ಸುಕೇಶ್ ಚಂದ್ರಶೇಖರ್ ಜಾಕ್ವೆಲಿನ್ ಫರ್ನಾಂಡಿಸ್‌ಗೆ 5.71 ಕೋಟಿ ರೂ ಮೌಲ್ಯದ ಉಡುಗೊರೆಗಳನ್ನು ಕೊಟ್ಟಿದ್ದಾನೆ ಎಂಬುದು ಇಡಿ ಆರೋಪ. ಹೀಗಾಗಿ, ಪ್ರಕರಣದ ತನಿಖೆ ಭಾಗವಾಗಿ ನಟಿಯನ್ನು ಹಲವು ಬಾರಿ ವಿಚಾರಣೆಗೆ ಒಳಪಡಿಸಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+