ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೆನಡಾ ಪ್ರಧಾನಿ ಹೇಳಿಕೆಗೆ ಭಾರತದ ಪ್ರತಿಭಟನೆ: ಹೈಕಮಿಷನರ್‌ಗೆ ಸಮನ್ಸ್

|
Google Oneindia Kannada News

ನವದೆಹಲಿ, ಡಿಸೆಂಬರ್ 4: ಕೃಷಿ ಕಾಯ್ದೆಗಳ ವಿರುದ್ಧ ಭಾರತದಲ್ಲಿ ನಡೆಯುತ್ತಿರುವ ಪ್ರತಿಭಟನೆ ಕುರಿತು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಹೇಳಿಕೆ ನೀಡಿರುವುದರಿಂದ ಅಸಮಾಧಾಗೊಂಡಿರುವ ಭಾರತ, ಕೆನಡಾದ ಹೈ ಕಮಿಷನರ್‌ಗೆ ಸಮನ್ ನೀಡಿ ತನ್ನ ಪ್ರತಿಭಟನೆ ದಾಖಲಿಸಿದೆ.

ಪ್ರಧಾನಿ ಜಸ್ಟಿನ್ ಟ್ರುಡೋ ಮತ್ತು ಇತರೆ ಸಂಸದರು ಪ್ರತಿಭಟನೆ ಕುರಿತು ಹೇಳಿಕೆ ನೀಡಿರುವುದು ದ್ವಿಪಕ್ಷೀಯ ಸಂಬಂಧಗಳಿಗೆ ಗಂಭೀರ ಹಾನಿಯುಂಟುಮಾಡಲಿದೆ ಎಂದು ಭಾರತ ಎಚ್ಚರಿಕೆ ನೀಡಿದೆ.

ರೈತರ ಪ್ರತಿಭಟನೆ ಬಗ್ಗೆ ಕೆನಡಾ ಪ್ರಧಾನಿ ಹೇಳಿಕೆ: ಭಾರತದ ತಿರುಗೇಟುರೈತರ ಪ್ರತಿಭಟನೆ ಬಗ್ಗೆ ಕೆನಡಾ ಪ್ರಧಾನಿ ಹೇಳಿಕೆ: ಭಾರತದ ತಿರುಗೇಟು

ಸೋಮವಾರ ಗುರುನಾನಕ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ, 'ಕೆನಡಾ ಯಾವಾಗಲೂ ಶಾಂತಿಯುತ ಪ್ರತಿಭಟನೆಯ ಹಕ್ಕನ್ನು ಎತ್ತಿಹಿಡಿಯುತ್ತದೆ' ಎಂದಿದ್ದರು.

India Summons Canada High Commissioner Over Justin Trudeau Remarks On Farmer Protests

'ರೈತರ ಪ್ರತಿಭಟನೆಯ ಬಗ್ಗೆ ಭಾರತದಿಂದ ಸುದ್ದಿ ಬರುತ್ತಿದೆ. ಪರಿಸ್ಥಿತಿಯು ಕಳವಳಕಾರಿಯಾಗಿದೆ ಮತ್ತು ಕುಟುಂಬಗಳು ಮತ್ತು ಸ್ನೇಹಿತರ ಬಗ್ಗೆ ನಮಗೆ ಬಹಳ ಚಿಂತೆಯಾಗುತ್ತಿದೆ. ನಾವು ಮಾತುಕತೆಯ ಮಹತ್ವದ ಬಗ್ಗೆ ನಂಬಿಕೆ ಇರಿಸಿದ್ದೇವೆ. ನಮ್ಮ ಕಳವಳಗಳನ್ನು ತಿಳಿಸಲು ನಾವು ಭಾರತದ ಅಧಿಕಾರಿಗಳನ್ನು ನೇರವಾಗಿ ಸಂಪರ್ಕಿಸುತ್ತಿದ್ದೇವೆ. ಇದು ನಾವೆಲ್ಲರೂ ಜತೆಗೂಡಬೇಕಾದ ಸಮಯ' ಎಂದು ಟ್ರುಡೋ ಹೇಳಿಕೆ ನೀಡಿದ್ದರು.

 ಭಾರತದ ಸಮಸ್ಯೆ ಬಳಸಿಕೊಂಡು ರಾಜಕೀಯ ಬೇಡ: ಕೆನಡಾ ಪ್ರಧಾನಿ ವಿರುದ್ಧ ಶಿವಸೇನೆ ಸಂಸದೆ ಕಿಡಿ ಭಾರತದ ಸಮಸ್ಯೆ ಬಳಸಿಕೊಂಡು ರಾಜಕೀಯ ಬೇಡ: ಕೆನಡಾ ಪ್ರಧಾನಿ ವಿರುದ್ಧ ಶಿವಸೇನೆ ಸಂಸದೆ ಕಿಡಿ

'ಭಾರತದ ರೈತರಿಗೆ ಸಂಬಂಧಿಸಿದಂತೆ ಕೆನಡಾದ ಮುಖಂಡರಿಂದ ಕೆಲವು ತಪ್ಪು ಮಾಹಿತಿಯ ಹೇಳಿಕೆಗಳನ್ನು ನೋಡಿದ್ದೇವೆ. ಅಂತಹ ಹೇಳಿಕೆಗಳು ಅನವಶ್ಯಕವಾಗಿದ್ದವು. ಮುಖ್ಯವಾಗಿ ಒಂದು ಪ್ರಜಾಪ್ರಭುತ್ವ ದೇಶದ ಆಂತರಿಕ ವ್ಯವಹಾರಗಳಿಗೆ ಸಂಬಂಧಿಸಿದ ವಿಚಾರದ ಬಗ್ಗೆ ಹೇಳಿಕೆ ಬೇಕಿರಲಿಲ್ಲ' ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ, ಟ್ರುಡೋ ಹೇಳಿಕೆಗೆ ತೀಕ್ಷ್ಣ ತಿರುಗೇಟು ನೀಡಿದ್ದರು.

English summary
India on Friday summoned Canadian High Commissioner as a protest over PM Justin Trudeau remark on farmers protest.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X