ಸುನಂದಾ ಪುಷ್ಕರ್ ಸಾವಿನ ಪ್ರಕರಣದಲ್ಲಿ ಶಶಿ ತರೂರ್ ಗೆ ಸಮನ್ಸ್
ನವದೆಹಲಿ, ಜೂನ್ 5: ಸುನಂದಾ ಪುಷ್ಕರ್ ಅನುಮಾನಾಸ್ಪದ ಕೊಲೆ ಪ್ರಕರಣದಲ್ಲಿ ಅವರ ಪತಿ ಹಾಗೂ ಮಾಜಿ ಕೇಂದ್ರ ಸಚಿವ ಶಶಿ ತರೂರ್ ಅವರಿಗೆ ನ್ಯಾಯಾಲಯ ಸಮನ್ಸ್ ನೀಡಿದೆ.
ಇದೇ ಜುಲೈ 7ರಂದು ನ್ಯಾಯಾಲಯದ ಮುಂದೆ ಹಾಜರಾಗುವಂತೆ ಶಶಿ ತರೂರ್ ಅವರಿಗೆ ದೆಹಲಿಯ ಪಟಿಯಾಲಾ ಹೌಸ್ ನ್ಯಾಯಾಲಯ ನೋಟಿಸ್ ನೀಡಿದೆ.
ಈ ಹಿಂದೆ ಸುನಂದಾ ಪುಷ್ಕರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಕೇಂದ್ರ ತನಿಖಾ ತಂಡ ಪಟಿಯಾಲಾ ಹೌಸ್ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿತ್ತು. ಈ ಚಾರ್ಜ್ ಶೀಟ್ ಸಲ್ಲಿಕೆಯ ನಂತರ ಇದೀಗ ತರೂರ್ ಅವರಿಗೆ ಸಮನ್ಸ್ ನೀಡಲಾಗಿದೆ.

2014ರ ಜನವರಿ 17ರಂದು ಸುನಂದಾ ಪುಷ್ಕರ್ ದೆಹಲಿಯ ಪ್ರಖ್ಯಾತ ಲೀಲಾ ಪ್ಯಾಲೇಸ್ ಹೋಟೆಲ್ ನಲ್ಲಿ ಸಾವಗೀಡಾಗಿದ್ದರು. ಅವರ ಸಾವು ಕೊಲೆಯೇ ಅಥವಾ ಆತ್ಮಹತ್ಯೆಯೇ ಎಂಬ ಬಗ್ಗೆ ಅಂದಿನಿಂದ ತನಿಖೆ ನಡೆಯುತ್ತಿದೆ.












Click it and Unblock the Notifications