ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸುನಂದಾ ಪುಷ್ಕರ್ ಪ್ರಕರಣ:ನಿರೀಕ್ಷಣಾ ಜಾಮೀನಿಗೆ ತರೂರ್ ಅರ್ಜಿ

By Sachhidananda Acharya
|
Google Oneindia Kannada News

ನವದೆಹಲಿ, ಜೂನ್ 3: ಸುನಂದಾ ಪುಷ್ಕರ್ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪುಷ್ಕರ್ ಪತಿ, ಮಾಜಿ ಕೇಂದ್ರ ಸಚಿವ ಮತ್ತು ಸಂಸದ ಶಶಿ ತರೂರ್ ಅರ್ಜಿ ಸಲ್ಲಿಸಿದ್ದಾರೆ.

ದೆಹಲಿಯ ಪಟಿಯಾಲಾ ಹೌಸ್ ಕೋರ್ಟ್ ನಲ್ಲಿ ಅವರು ನಿರೀಕ್ಷಣಾ ಜಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಸುನಂದಾ ಪುಷ್ಕರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 14 ರಂದು ಪಟಿಯಾಲಾ ಹೌಸ್ ನ್ಯಾಯಾಲಯಕ್ಕೆ ದೆಹಲಿ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದರು. ಇದರಲ್ಲಿ ಶಶಿ ತರೂರ್ ಅವರನ್ನು ಆರೋಪಿ ಎಂದು ಪೊಲೀಸರು ಉಲ್ಲೇಖಿಸಿದ್ದರು.

ಸುನಂದಾ ಪುಷ್ಕರ್ ಸಾವಿನ ಪ್ರಕರಣದಲ್ಲಿ ಶಶಿ ತರೂರ್ ಗೆ ಸಮನ್ಸ್ಸುನಂದಾ ಪುಷ್ಕರ್ ಸಾವಿನ ಪ್ರಕರಣದಲ್ಲಿ ಶಶಿ ತರೂರ್ ಗೆ ಸಮನ್ಸ್

ಅಷ್ಟೇ ಅಲ್ಲದೆ ಅವರ ವಿರುದ್ಧ ಭಾರತೀಯ ದಂಡ ಸಂಹಿತೆಯ 306 (ಆತ್ಮಹತ್ಯೆಗೆ ಕುಮ್ಮಕ್ಕು), 498 A (ಪತಿ ಅಥವಾ ಪತಿಯ ಸಂಬಂಧಿಕರಿಂದ ಮಹಿಳೆಯ ಮೇಲೆ ನಡೆಯುವ ಕ್ರೌರ್ಯ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

Sunanda Pushkar death case: Tharoor moves anticipatory bail plea in Patiala House Court

2014 ರ ಜನವರಿ 14 ರಂದು ದೆಹಲಿಯ ಪಂಚತಾರಾ ಹೋಟೆಲ್ ವೊಂದರಲ್ಲಿ ಸುನಂದಾ ಪುಷ್ಕರ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ಅವರು ಆತ್ಮಹತ್ಯೆ ಮಾಡಿಕೊಂದಿದ್ದಾರೆಂದು ಹೇಳಲಾಗಿತ್ತಾದರೂ, ಇದು ಅಸಹಜ ಸಾವು ಎಂದು ನಂತರ ದೂರು ದಾಖಲಾಗಿತ್ತು.

ಪ್ರಕರಣದಲ್ಲಿ ಶಶಿ ತರೂರ್ ಬಂಧನ ಭೀತಿ ಎದುರಿಸುತ್ತಿದ್ದಾರೆ. ಹೀಗಾಗಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.

English summary
Sunanda Pushkar death case: Senior Congress leader and MP Shashi Tharoor has moved an anticipatory bail plea in Delhi’s Patiala House Court.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X