ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜನವರಿಯಲ್ಲಿ ಐಐಟಿ ಖರಗ್ಪುರಕ್ಕೆ ಸುಂದರ್ ಪಿಚೈ ಭೇಟಿ

By Prasad
|
Google Oneindia Kannada News

ಬೆಂಗಳೂರು, ಡಿಸೆಂಬರ್ 28 : ಗೂಗಲ್ ಸಿಇಓ ಸುಂದರ್ ಪಿಚೈ ಅವರು ಜನವರಿಯಲ್ಲಿ ಭಾರತಕ್ಕೆ ಖಾಸಗಿ ಭೇಟಿ ನೀಡುತ್ತಿದ್ದು, ಈ ಸಂದರ್ಭದಲ್ಲಿ ಐಐಟಿ ಖರಗ್‌ಪುರಕ್ಕೂ ಭೇಟಿ ನೀಡಿ ಅಲ್ಲಿನ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

"ಗೂಗಲ್ ಸಿಇಓ ಸುಂದರ್ ಪಿಚೈ ಅವರು ಐಐಟಿ ಖರಗ್‌ಪುರದ ಹಳೆಯ ವಿದ್ಯಾರ್ಥಿಯಾಗಿದ್ದು, 2017ರ ಮೊದಲ ವಾರದಲ್ಲಿ ಕ್ಯಾಂಪಸ್ಸಿಗೆ ಭೇಟಿ ನೀಡಿ, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುವ ಇಂಗಿತ ವ್ಯಕ್ತಪಡಿಸಿದ್ದಾರೆ" ಎಂದು ಇನ್‌ಸ್ಟಿಟ್ಯೂಟ್‌ನ ನಿರ್ದೇಶಕ ಪಿಪಿ ಚಕ್ರವರ್ತಿ ಅವರು ಹೇಳಿದ್ದಾರೆ.

Sundar Pichai to visit IIT Kharagpur in January

ಸುಂದರ್ ಪಿಚೈ ಅವರು ಭಾರತಕ್ಕೆ ಖಾಸಗಿ ಭೇಟಿ ನೀಡುತ್ತಿದ್ದರೂ ಹಲವಾರು ಇತರ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ. ಐಐಟಿ ಖರಗ್‌ಪುರದ ವಿದ್ಯಾರ್ಥಿಗಳನ್ನು ಭೇಟಿಯಾಗುವುದಲ್ಲದೆ, ಜನವರಿ 4ರಂದು ತಾವೇ ಒಂದು ಕಾರ್ಯಕ್ರಮವನ್ನು ಆಯೋಜಿಸಿದ್ದು, ಸಣ್ಣ ಉದ್ಯಮಿಗಳಿಗಾಗಿ ಮತ್ತು ಸ್ಟಾರ್ಟ್ ಅಪ್ ಗಳಿಗಾಗಿ ವಿಶೇಷ ಘೋಷಣೆಯನ್ನು ಪ್ರಕಟಿಸುವ ಸಾಧ್ಯತೆ ಇದೆ.

ಈ ನಡುವೆ, 2017ರಲ್ಲಿ ಗೂಗಲ್ ಶೇ.100ರಷ್ಟು ನವೀಕರಿಸಬಹುದಾದ ವಿದ್ಯುತ್ ಶಕ್ತಿಯನ್ನು ಹೊಂದಲಿದೆ ಎಂದು ಸುಂದರ್ ಪಿಚೈ ಟ್ವೀಟ್ ಮಾಡಿದ್ದಾರೆ. ಇದರಿಂದ ಪರಿಸರದ ಮೇಲೆ ಆಗುವ ದುಷ್ಪರಿಣಾಮ ತಗ್ಗಲಿದೆ ಎಂದು ಹೇಳಿದ್ದಾರೆ.

English summary
Google CEO Sundar Pichai will visit IIT Kharagpur in January 2017 during his private visit to India. Sundar Pichai is distinguished alumnus of IIT Kharagpur. He is likely to make an announcement for small business and startups. ಜನವರಿಯಲ್ಲಿ ಐಐಟಿ ಖರಗ್ಪುರಕ್ಕೆ ಸುಂದರ್ ಪಿಚೈ ಭೇಟಿ
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X