ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಖ್ಯ ಚುನಾವಣಾ ಆಯುಕ್ತರಾಗಿ ಸುನೀಲ್ ಅರೋರಾ ನೇಮಕ

|
Google Oneindia Kannada News

ನವದೆಹಲಿ, ನವೆಂಬರ್ 26: ಸುನೀಲ್ ಅರೋರಾ ಅವರನ್ನು ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಸೋಮವಾರದಂದು ಆದೇಶ ಹೊರಡಿಸಿದ್ದಾರೆ. ಅರೋರಾ ಅವರು ಡಿಸೆಂಬರ್ 2ನೇ ತಾರೀಕು ಅಧಿಕಾರ ಸ್ವೀಕಾರ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ಮಾಹಿತಿ ನೀಡಿವೆ.

ಕರ್ನಾಟಕದ ಉಪ ಚುನಾವಣೆ: ಆಯೋಗ ನೀಡಿದ ಸಮರ್ಥನೆ ಏನು ಗೊತ್ತೇ?ಕರ್ನಾಟಕದ ಉಪ ಚುನಾವಣೆ: ಆಯೋಗ ನೀಡಿದ ಸಮರ್ಥನೆ ಏನು ಗೊತ್ತೇ?

ಈವರೆಗೆ ಮುಖ್ಯ ಚುನಾವಣಾ ಆಯುಕ್ತರಾಗಿ ಒ.ಪಿ.ರಾವತ್ ಕಾರ್ಯ ನಿರ್ವಹಿಸಿದ್ದರು. ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಹಾಗೂ ಜಮ್ಮು ಕಾಶ್ಮೀರದಲ್ಲಿ ನಡೆಯಬೇಕಿರುವ ಚುನಾವಣೆ, ಮುಂಬರುವ ಲೋಕಸಭಾ ಚುನಾವಣೆಗೆ ಸುನೀಲ್ ಅರೋರಾ ಅವರೇ ಮುಖ್ಯ ಚುನಾವಣಾ ಆಯುಕ್ತರಾಗಿ ಕಾರ್ಯ ನಿರ್ವಹಿಸುವ ಸಾಧ್ಯತೆ ಇದೆ.

ಅರೋರಾ ಅವರು ಬಿಎ ಪದವೀಧರರು, ಪಂಜಾಬ್ ವಿಶ್ವವಿದ್ಯಾಲಯದಿಂದ ಇಂಗ್ಲಿಷ್ ಎಂ.ಎ., ಮಾಡಿದ್ದಾರೆ. ಐಎಎಸ್ ಅಧಿಕಾರಿ ಆಗುವ ಮುನ್ನ ಅವರು ಜಲಂಧರ್ ನ ಡಿಎವಿ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿದ್ದರು. ನಿವೃತ್ತ ಐಎಎಸ್ ಅಧಿಕಾರಿ ಆಗಿರುವ ಅವರು 1980ರ ಬ್ಯಾಚ್ ಗೆ ಸೇರಿದವರು.

English summary
Sunil Arora has been appointed the new Chief Election Commissioner by President Ram Nath Kovind, sources said on Monday. He will take over from OP Rawat on December 2.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X