ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸರ್ಕಾರದ ಎಲ್ಲಾ ಹುದ್ದೆಗಳಲ್ಲಿ ಅಂಗವಿಕಲರಿಗೆ ಮೀಸಲಾತಿ!

By Mahesh
|
Google Oneindia Kannada News

ಬೆಂಗಳೂರು, ಜುಲೈ 04: ಅಂಗವಿಕಲರಿಗೆ ಬಡ್ತಿ ನೀಡುವುದನ್ನು ಸೀಮಿತಗೊಳಿಸಿ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶವನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಈ ಮೂಲಕ ಕೇಂದ್ರ ಸರ್ಕಾರದ ಎಲ್ಲಾ ಹುದ್ದೆಗಳು ಮತ್ತು ಸೇವೆಗಳಲ್ಲಿ ಅಂಗವಿಕಲರಿಗೆ ಶೇಕಡಾ 3ರಷ್ಟು ಮೀಸಲಾತಿಯನ್ನು ಕಡ್ಡಾಯಗೊಳಿಸಿ ಸೋಮವಾರ ಆದೇಶಿಸಿದೆ.

ಬಡ್ತಿ ನೀಡುವಾಗ ಅಂಗವಿಕಲರಿಗೆ ನೀಡಬೇಕಾದ ಮೀಸಲಾತಿಯನ್ನು ಸಿ ಮತ್ತು ಡಿ ಗ್ರೂಪ್ ಹುದ್ದೆಗಳಿಗೆ ಮಾತ್ರ ಮಿತಿಗೊಳಿಸಿ, ಗ್ರೂಪ್ ಎ ಮತ್ತು ಬಿ ಹುದ್ದೆಗಳಿಗೆ ಬಡ್ತಿ ನೀಡುವಾಗ ಅಂಗವಿಕಲರಿಗೆ ಮೀಸಲಾತಿ ನೀಡಬೇಕಿಲ್ಲ ಎಂದು ಸರ್ಕಾರವು ಈ ಹಿಂದೆ ಆದೇಶ ಹೊರಡಿಸಿತ್ತು. ಈಗ ಸುಪ್ರೀಂಕೋರ್ಟ್ ಆದೇಶದಿಂದ ಎಲ್ಲಾ ವರ್ಗದ ಹುದ್ದೆಗಳಲ್ಲಿ ಬಡ್ತಿ ನೀಡುವಾಗ ಮೀಸಲಾತಿ ಕಡ್ಡಾಯವಾಗಿ ಪರಿಗಣಿಸಬೇಕಾಗುತ್ತದೆ.

Supreme Court: 3 per cent quota for disabled must in all posts

1997 ಹಾಗೂ 2005ರಲ್ಲಿ ಹೊರಡಿಸಲಾದ ಆದೇಶಗಳಲ್ಲಿ ಸಿಬ್ಬಂದಿ ಮತ್ತು ತರಬೇತಿ ಇಲಾಖೆ(Department of Personnel and Training (DoPT)) ಯಿಂದ ನೇರ ನೇಮಕಾತಿ ಮತ್ತು ಬಡ್ತಿ ಮೂಲಕ ಹುದ್ದೆಗಳನ್ನು ಭರ್ತಿ ಮಾಡುವಾಗ ತಾರತಮ್ಯವಾಗಿರುವುದು ಕಂಡು ಬಂದಿತ್ತು. ಗ್ರೂಪ್ ಎ ಮತ್ತು ಗ್ರೂಪ್ ಬಿ ವರ್ಗದ ಹುದ್ದೆಗಳಿಗೆ ಬಡ್ತಿ ನೀಡುವಾಗ ಯಾವುದೇ ಮೀಸಲಾತಿಯನ್ನು ಅನುಸರಿಸಬೇಕಿಲ್ಲ ಎಂದು ಈ ಆದೇಶಗಳಲ್ಲಿ ನಿರ್ದೇಶಿಸಲಾಗಿತ್ತು.

ಅಂದರೆ, ಬಿ ಮತ್ತು ಸಿ ವರ್ಗದ ಹುದ್ದೆಗಳಿಗೆ ಬಡ್ತಿ ನೀಡುವಾಗ ಮಾತ್ರ ಮೀಸಲಾತಿ ನೀತಿ ಅನುಸರಿಸಿದರೆ ಸಾಕು ಎಂದು ಆದೇಶ ಸೂಚಿಸಿತ್ತು.
ನ್ಯಾಯಮೂರ್ತಿಗಳಾದ ಜೆ. ಚಲಮೇಶ್ವರ ಮತ್ತು ಅಭಯ್ ಎಂ. ಸಪ್ರೆ ಅವರನ್ನೊಳಗೊಂಡ ನ್ಯಾಯಪೀಠವು ಜೂನ್ 30ರಂದು ನೀಡಿದ ತೀರ್ಪನ್ನು ಶನಿವಾರ ಬಿಡುಗಡೆ ಮಾಡಲಾಗಿದೆ.

ಬಡ್ತಿಗೆ ಸಂಬಂಧಿಸಿದಂತೆ ಸರ್ಕಾರ ಹೊರಡಿಸಿರುವ ಆದೇಶ ಅಕ್ರಮ ಮತ್ತು ಅಸಮಂಜಸವಾಗಿದೆ. 1995ರ ಅಂಗವಿಕಲರ (ಸಮಾನ ಅವಕಾಶಗಳು, ರಕ್ಷಣೆ ಮತ್ತು ಹಕ್ಕುಗಳು) ಕಾಯ್ದೆಯ ಜೊತೆಗೆ ಹೊಂದಾಣಿಕೆಯಾಗುವುದಿಲ್ಲ. ಅಂಗವಿಕಲರಿಗೆ ಗ್ರೂಪ್ ಎ ಮತ್ತು ಗ್ರೂಪ್ ಬಿ ಹುದ್ದೆಗಳಿಗೆ ಬಡ್ತಿ ನೀಡುವಾಗಲೂ ಶೇಕಡಾ 3 ಮೀಸಲಾತಿಯನ್ನು ವಿಸ್ತರಿಸಬೇಕು ಎಂದು ಸರ್ಕಾರಕ್ಕೆ ನಿರ್ದೇಶನ ನೀಡಿದೆ.

English summary
The Supreme Court has ruled that three per cent reservation shall be provided for disabled in all posts and services under the Government of India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X