Get Updates
Get notified of breaking news, exclusive insights, and must-see stories!

Breaking: ಅಗ್ನಿಪಥ್ ಯೋಜನೆ ಪ್ರಶ್ನಿಸಿದ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ಅಸ್ತು!

ನವದೆಹಲಿ, ಜುಲೈ 04: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಅಗ್ನಿಪಥ್ ನೇಮಕಾತಿ ಯೋಜನೆಯನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂಕೋರ್ಟ್ ಸೋಮವಾರ ಗ್ರೀನ್ ಸಿಗ್ನಲ್ ಕೊಟ್ಟಿದೆ.

ದೇಶಾದ್ಯಂತ ಅಗ್ನಿಪಥ್ ಯೋಜನೆಯನ್ನು ವಿರೋಧಿಸಿ ಉಗ್ರ ಪ್ರತಿಭಟನೆಗಳು ನಡೆದಿವೆ. ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ ಘಟನೆಯೂ ನಡೆದಿದೆ. ಇದರ ಮಧ್ಯೆ ಯಾವುದೇ ಕಾರಣಕ್ಕೆ ಯೋಜನೆಯನ್ನು ವಾಪಸ್ ಪಡೆದುಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಈಗಾಗಲೇ ಕೇಂದ್ರ ಸರ್ಕಾರ ಮತ್ತು ಸೇನಾ ಮುಖ್ಯಸ್ಥರು ಸ್ಪಷ್ಟವಾಗಿ ಹೇಳಿದ್ದಾರೆ.

ಕೇಂದ್ರ ಸರ್ಕಾರ ಮತ್ತು ಸೇನೆಯ ಸ್ಪಷ್ಟ ಸಂದೇಶದ ನಡುವೆಯೇ ಅಗ್ನಿಪಥ್ ಯೋಜನೆಯನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಅಂಗಳಕ್ಕೆ ಹಲವರು ಮೊರೆ ಹೋಗಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂಕೋರ್ಟ್ ಮುಂದಿನ ವಾರ ಅಗ್ನಿಪಥ್ ನೇಮಕಾತಿ ಯೋಜನೆಯನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡೆಸುವುದಾಗಿ ಹೇಳಿದೆ.

Supreme Court Agrees to List Next Week a Petition Challenging the Agnipath Scheme for Recruitment

ಅಗ್ನಿಪಥ್ ನೇಮಕಾತಿ ಯೋಜನೆ: ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯು ದೇಶದ ಮೂರು ಸೇನೆಗಳಿಗೆ ಯೋಧರನ್ನು ನೇಮಿಸಿಕೊಳ್ಳುವ ಪ್ರಕ್ರಿಯೆಗೆ ಸಂಬಂಧಿಸಿದ್ದಾಗಿದೆ. 17.5 ರಿಂದ 23 ವಯೋಮಾನ ಯುವಕರನ್ನು ಒಪ್ಪಂದದ ಮೇರೆಗೆ ನಾಲ್ಕು ವರ್ಷದ ಅವಧಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ಈ ಅವಧಿಯಲ್ಲಿ 6 ತಿಂಗಳು ತರಬೇತಿಯೂ ಸೇರಿರುತ್ತದೆ. ನಾಲ್ಕು ವರ್ಷದ ಸೇವಾವಧಿಯಲ್ಲಿ ಮಾಸಿಕ 30 ರಿಂದ 40 ಸಾವಿರ ರೂಪಾಯಿ ವೇತನದ ಜೊತೆಗೆ ವೈದ್ಯಕೀಯ ವಿಮೆ ಮತ್ತು ಆರೋಗ್ಯ ವಿಮೆ ಸೌಲಭ್ಯವನ್ನು ನೀಡಲಾಗುತ್ತದೆ.

ನಾಲ್ಕು ವರ್ಷಗಳ ನಂತರ ಅಗ್ನಿಪಥ್ ಯೋಜನೆಯಡಿ ನೇಮಕಗೊಂಡ ಶೇ.75ರಷ್ಟು ಯೋಧರನ್ನು ಸೇನೆಯಿಂದ ವಿಮುಕ್ತಿಗೊಳಿಸಲಾಗುವುದು. ತದನಂತರದಲ್ಲಿ ಈ ಯೋಧರಿಗೆ ಯಾವುದೇ ರೀತಿ ಪಿಂಚಣಿ ಸೌಲಭ್ಯವನ್ನು ನೀಡಲಾಗುವುದಿಲ್ಲ. ಮುಂದಿನ ಒಂದೂವರೆ ವರ್ಷದ ಅವಧಿಯಲ್ಲಿ ಅಗ್ನಿಪಥ್ ಯೋಜನೆ ಅಡಿಯಲ್ಲಿ ಸುಮಾರು 10 ಲಕ್ಷ ಯುವಕರಿಗೆ ಉದ್ಯೋಗವನ್ನು ಕಲ್ಪಿಸುವ ಗುರಿಯೊಂದಿಗೆ ಈ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದರು.

Recommended Video

      ಧೋನಿ ಮಾಡಿದ ನಂಬಿಕೆ ದ್ರೋಹವನ್ನ ಬಿಚ್ಚಿಟ್ಟ ಆಟಗಾರರು | *Cricket | OneIndia Kannada

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+