ರಫೆಲ್ ವಿವಾದ : ತೆರೆದ ಕೋರ್ಟ್‌ನಲ್ಲಿ ವಿಚಾರಣೆಗೆ ಅನುಮತಿ

ನವದೆಹಲಿ, ಫೆಬ್ರವರಿ 26 : ರಫೆಲ್ ವಿವಾದದ ಕುರಿತು ತೆರೆದ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಒಪ್ಪಿಗೆ ನೀಡಿದೆ. ವಿವಾದದ ಕುರಿತು 2018ರ ಡಿಸೆಂಬರ್ 14ರಂದು ನೀಡಿದ್ದ ತೀರ್ಪನ್ನು ಮರುಪರಿಶೀಲನೆ ನಡೆಸುಲು ಕೋರ್ಟ್ ಒಪ್ಪಿಗೆ ನೀಡಿದೆ.

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗಾಯ್ ಅವರ ನೇತೃತ್ವದ ಪೀಠ ಎರಡು ಅರ್ಜಿಗಳ ಮರು ಪರಿಶೀಲನೆ ನಡೆಸಲು ಮಂಗಳವಾರ ಒಪ್ಪಿಗೆ ನೀಡಿತು. ತೆರೆದ ನ್ಯಾಯಾಲಯದಲ್ಲಿ ಅರ್ಜಿಯ ವಿಚಾರಣೆ ನಡೆಸಲು ಒಪ್ಪಿಗೆ ನೀಡಿತು.

ಮಾಜಿ ಕೇಂದ್ರ ಸಚಿವರಾದ ಯಶ್ವಂತ್ ಸಿನ್ಹಾ ಮತ್ತು ಅರುಣ್ ಶೌರಿ ಅವರು 2018ರ ಡಿಸೆಂಬರ್ 14ರಂದು ನೀಡಿದ್ದ ತೀರ್ಪನ್ನು ಪುನರ್ ಪರಿಶೀಲಿಸಬೇಕು ಎಂದು ಅರ್ಜಿ ಸಲ್ಲಿಸಿದ್ದರು. ವಕೀಲ ಪ್ರಶಾಂತ್ ಭೂಷಣ್ ಮತ್ತು ಎಎಪಿಯ ಸಂಸದ ಸಂಜಯ್ ಸಿಂಗ್ ಇದೇ ವಿಚಾರದಲ್ಲಿ ಮತ್ತೆರಡು ಅರ್ಜಿಗಳನ್ನು ಸಲ್ಲಿಸಿದ್ದಾರೆ.

Supreme Court allowed open court hearings on Rafale deal case

ಕಳೆದ ವರ್ಷ ತೀರ್ಪು ನೀಡಿದ್ದ ಸುಪ್ರೀಂಕೋರ್ಟ್ 'ಭಾರತ ಸರ್ಕಾರ ಫ್ರಾನ್ಸ್‌ನಿಂದ 36 ರಫೆಲ್ ಜೆಟ್ ಖರೀದಿಸಿದ ನಿರ್ಧಾರವನ್ನು ಶಂಕಿಸಲಾಗದು' ಎಂದು ತೀರ್ಪು ನೀಡಿತ್ತು. ಈ ತೀರ್ಪನ್ನು ಪುನರ್ ಪರಿಶೀಲಿಸಬೇಕು ಎಂದು ಅರ್ಜಿ ಸಲ್ಲಿಸಲಾಗಿದೆ.

ರಫೆಲ್ ವಿಮಾನ ಖರೀದಿ ವಿಚಾರದಲ್ಲಿ ಕೆಲವು ಸರ್ಕಾರಿ ನೌಕರರು ಉದ್ದೇಶಪೂರ್ವಕವಾಗಿ ನ್ಯಾಯಾಲಯಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ. ಅವರ ವಿರುದ್ಧ ವಿಚಾರಣೆ ಆರಂಭಿಸಬೇಕು ಎಂದು ಕೋರಿ ಮತ್ತೊಂದು ಅರ್ಜಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+