ನ್ಯಾಯಾಲಯದ ಕಲಾಪ ನೇರ ಪ್ರಸಾರಕ್ಕೆ ಸುಪ್ರೀಂ ಒಪ್ಪಿಗೆ

ನವದೆಹಲಿ, ಸೆಪ್ಟೆಂಬರ್ 26 : ನ್ಯಾಯಾಲಯದ ಕಲಾಪವನ್ನು ನೇರ ಪ್ರಸಾರ ಮಾಡಬಹುದು ಎಂದು ಸುಪ್ರೀಂಕೋರ್ಟ್ ಆದೇಶ ನೀಡಿದೆ. ಇನ್ನು ಮುಂದೆ ಮಹತ್ವದ ಪ್ರಕರಣಗಳ ವಿಚಾರಣೆ ನಡೆಯುವಾಗ ಕೋರ್ಟ್ ಕಲಾಪವನ್ನು ಜನರು ವೀಕ್ಷಿಸಬಹುದಾಗಿದೆ.

ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಂವಿಧಾನಿಕ ಪೀಠ ಈ ಕುರಿತು ಬುಧವಾರ ತೀರ್ಪು ನೀಡಿದೆ. ನ್ಯಾಯಾಲಯದ ಕಲಾಪದ ನೇರ ಪ್ರಸಾರ ಸುಪ್ರೀಂಕೋರ್ಟ್‌ನಿಂದಲೇ ಆರಂಭವಾಗಲಿ ಎಂದು ತೀರ್ಪಿನಲ್ಲಿ ಹೇಳಿದೆ.

ನ್ಯಾಯಾಲಯದ ಕಲಾಪದ ನೇರ ಪ್ರಸಾರಕ್ಕೆ ಕೆಲವು ನಿಯಮಗಳನ್ನು ಪಾಲನೆ ಮಾಡಬೇಕಾಗುತ್ತದೆ. ನ್ಯಾಯಾಲಯದ ಕಲಾಪ ನೇರ ಪ್ರಸಾರ ಮಾಡಿದರೆ ಜನರಿಗೆ ನ್ಯಾಯಾಂಗದ ಮೇಲೆ ವಿಶ್ವಾಸ ಮೂಡಲಿದೆ ಎಂದು ಕೋರ್ಟ್ ಹೇಳಿದೆ.

Supreme Court allows live streaming of court proceedings

ಹಿರಿಯ ವಕೀಲೆ ಇಂದಿರಾ ಜೈಸಿಂಗ್ ಸೇರಿದಂತೆ ಹಲವು ವಕೀಲರು ಕಲಾಪಗಳ ನೇರ ಪ್ರಸಾರಕ್ಕೆ ಅವಕಾಶ ಬೇಕು ಎಂದು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ಸಂದರ್ಭದಲ್ಲಿಯೇ ನೇರ ಪ್ರಸಾರಕ್ಕೆ ನಮ್ಮ ಸಹಮತವೂ ಇದೆ ಎಂದು ಸುಪ್ರೀಂಕೋರ್ಟ್ ಹೇಳಿತ್ತು.

ಕೇಂದ್ರದಲ್ಲಿ ಯುಪಿಎ ಸರ್ಕಾರವಿದ್ದಾಗ ಕಾನೂನು ಸಚಿವರಾಗಿದ್ದ ಕಪಿಲ್ ಸಿಬಲ್ ಅವರು ಸಹ ನ್ಯಾಯಾಲಯದ ಕಲಾಪ ನೇರ ಪ್ರಸಾರ ಮಾಡಬೇಕು ಎಂಬುದರ ಪರವಾಗಿ ಧ್ವನಿ ಎತ್ತಿದ್ದರು. ಸರ್ಕಾರದ ಪ್ರಕ್ರಿಯೆ ಪಾರದರ್ಶಕವಾಗಿರುವಂತೆ, ನ್ಯಾಯಾಲಯ ಕಲಾಪವೂ ಕೂಡ ಪಾರದರ್ಶಕವಾಗಿರಬೇಕು ಎಂದು ಹೇಳಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+