ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಹಿಳೆಯರು ಎನ್‌ಡಿಎ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಿದ ಸುಪ್ರೀಂ

By ಒನ್‌ಇಂಡಿಯಾ ಡೆಸ್ಕ್‌
|
Google Oneindia Kannada News

ನವದೆಹಲಿ, ಆಗಸ್ಟ್ 19: ರಾಷ್ಟ್ರೀಯ ರಕ್ಷಣಾ ಅಕಾಡೆಮಿ (NDA) ಸೆಪ್ಟೆಂಬರ್ 5ರಂದು ನಡೆಸುತ್ತಿರುವ ಪ್ರವೇಶ ಪರೀಕ್ಷೆಯಲ್ಲಿ ಮಹಿಳೆಯರು ಪಾಲ್ಗೊಳ್ಳಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.

ಬುಧವಾರ ಈ ಸಂಬಂಧ ಸುಪ್ರಿಂ ಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ. ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಹಾಗೂ ಹೃಷಿಕೇಶ್ ರಾಯ್ ಅವರನ್ನೊಳಗೊಂಡ ನ್ಯಾಯಪೀಠ ಈ ಆದೇಶ ಹೊರಡಿಸಿದ್ದು, ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಹಾಗೂ ನೌಕಾಪಡೆ ಅಕಾಡೆಮಿ ಪರೀಕ್ಷೆ, ಎನ್‌ಡಿಎಯಲ್ಲಿ ತರಬೇತಿಗಾಗಿ ಅರ್ಹ ಮಹಿಳೆಯರಿಗೆ ಅವಕಾಶ ಕಲ್ಪಿಸಿದೆ.

Supreme Court Allows Women To Appear For NDA Exam

ಮಹಿಳೆಯರಿಗೆ ರಕ್ಷಣಾ ಹಾಗೂ ನೌಕಾಪಡೆ ಅಕಾಡೆಮಿ ಪರೀಕ್ಷೆಗೆ ಹಾಜರಾಗಲು ಅನುಮತಿಯಿದೆ. ಎನ್‌ಡಿಎ ಪರೀಕ್ಷೆ ತರಬೇತಿಯನ್ನು ಅವರು ಪಡೆಯಬಹುದಾಗಿದೆ. ಸಂಬಂಧಿತ ಪ್ರಾಧಿಕಾರಗಳಿಗೆ ಅಧಿಸೂಚನೆ ಹೊರಡಿಸಬೇಕು, ಹಾಗೆಯೇ ಅಗತ್ಯ ಪ್ರಚಾರ ನೀಡಬೇಕು ನ್ಯಾಯಪೀಠ ಕೇಂದ್ರ ಲೋಕಸೇವಾ ಆಯೋಗಕ್ಕೆ ನಿರ್ದೇಶನ ನೀಡಿದೆ.

ರಾಷ್ಟ್ರೀಯ ಭದ್ರತಾ ಪಡೆಯಲ್ಲಿ ಲಿಂಗಸಮಾನತೆ ಸಾಧಿಸಲು ಇದು ಮಹತ್ವದ ಹೆಜ್ಜೆ ಎನ್ನಲಾಗಿದೆ. ಈ ಪರೀಕ್ಷೆಯ ಫಲಿತಾಂಶ ಅರ್ಜಿಯ ಅಂತಿಮ ತೀರ್ಪಿಗೆ ಒಳಪಟ್ಟಿರುತ್ತದೆ. ಮಹಿಳಾ ಅಭ್ಯರ್ಥಿಗಳು ನ್ಯಾಯಾಲಯದ ಮುಂದಿನ ಆದೇಶಗಳಿಗೆ ಒಳಪಟ್ಟು ಪರೀಕ್ಷೆ ಬರೆಯಬಹುದು ಎಂದು ಸ್ಪಷ್ಟನೆ ನೀಡಿದೆ.

ಕೇಂದ್ರ ಲೋಕಸೇವಾ ಆಯೋಗದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಕೇಂದ್ರ ಲೋಕಸೇವಾ ಆಯೋಗದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಎನ್‌ಡಿಎ ಹಾಗೂ ನೌಕಾದಳ ಅಕಾಡೆಮಿ ಪರೀಕ್ಷೆಗಳಿಗೆ ಹಾಜರಾಗಲು ಮಹಿಳಾ ಅಭ್ಯರ್ಥಿಗಳಿಗೆ ಅನುಮತಿ ನೀಡದ ಕೇಂದ್ರದ ನೀತಿಯನ್ನು ಪ್ರಶ್ನಿಸಿ ಈ ಮುನ್ನ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಲಾಗಿತ್ತು.

ಈ ಅರ್ಜಿ ಉಲ್ಲೇಖಿಸಿ ಮಾತನಾಡಿದ ನ್ಯಾಯಪೀಠ, "ಭೂಸೇನೆ ಹಾಗೂ ನೌಕಾಪಡೆಯಲ್ಲ ಮಹಿಳೆಯರನ್ನು ಕಾಯಂ ಸೇವೆಗೆ ನಿಯೋಜಿಸಲು ಅವಕಾಶ ನೀಡಬೇಕು ಎಂದು ನ್ಯಾಯಾಲಯ ತೀರ್ಪು ನೀಡಿದೆ. ಹೀಗಿದ್ದರೂ ಸರ್ಕಾರ ಈ ನೀತಿ ಅನುಸರಿಸಲು ಕಾರಣವೇನು" ಎಂದು ಪ್ರಶ್ನಿಸಿದೆ.

2027ರಲ್ಲಿ ಭಾರತದ ಪ್ರಥಮ ಮಹಿಳಾ ಸಿಜೆಐ ಆಗಲಿದ್ದಾರೆ ಬಿ.ವಿ. ನಾಗರತ್ನ2027ರಲ್ಲಿ ಭಾರತದ ಪ್ರಥಮ ಮಹಿಳಾ ಸಿಜೆಐ ಆಗಲಿದ್ದಾರೆ ಬಿ.ವಿ. ನಾಗರತ್ನ

ಪರೀಕ್ಷೆಯಲ್ಲಿ ಹೆಣ್ಣು-ಗಂಡೆಂಬ ತಾರತಮ್ಯ ನೀತಿಯನ್ನು ಏಕೆ ಅನುಸರಿಸಲಾಗುತ್ತಿದೆ ಎಂದು ಕೇಂದ್ರವನ್ನು ನ್ಯಾಯಾಲಯ ಪ್ರಶ್ನೆ ಮಾಡಿದೆ. ಇದು ಲಿಂಗತಾರತಮ್ಯ ಎಂದು ಉಲ್ಲೇಖಿಸಿದ್ದು, ಸಹ ಶಿಕ್ಷಣ ಅಷ್ಟೊಂದು ಸಮಸ್ಯಾತ್ಮಕವೇ ಎಂದಿದೆ.

ಸೇನೆಯಲ್ಲಿ ಮಹಿಳೆಗೆ ಅವಕಾಶ ಇದ್ದಾಗ, ಎನ್‌ಡಿಎ ಪರೀಕ್ಷೆ ಬರೆಯಲು ಏಕೆ ತಡೆಯಲಾಗುತ್ತಿದೆ ಎಂದು ಕೇಳಿದ್ದು, ಸರ್ಕಾರ ಯಾವಾಗಲೂ ನ್ಯಾಯಾಂಗದ ಮಧ್ಯಸ್ಥಿಕೆ ಬಯಸಬಾರದು ಎಂದು ಹೇಳಿದೆ.

English summary
Supreme Court on Wednesday passed an interim order allowing women to take the admission exam to National Defence Academy (NDA) where only men can join
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X