Atiq Ahmed Case Update: ಯೋಗಿ ಆದಿತ್ಯನಾಥ್ ಸರ್ಕಾರಕ್ಕೆ ಸುಪ್ರೀಂಕೋರ್ಟ್ ತರಾಟೆ!
ದೆಹಲಿ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ಸುಪ್ರೀಂ ಗರಂ ಆಗಿದೆ. ಪ್ರಯಾಗ್‌ರಾಜ್‌ನಲ್ಲಿ ಗ್ಯಾಂಗ್‌ಸ್ಟಾರ್ ಅತೀಕ್ ಅಹ್ಮದ್ (Atiq Ahmed) ಮತ್ತು ಆತನ ಸಹೋದರ ಅಶ್ರಫ್ (Ashraf) ಹತ್ಯೆಗೆ ಸಂಬಂಧಿಸಿದಂತೆ ಸೂಕ್ತ ಮಾಹಿತಿ ಒದಗಿಸಲು ಕೇಳಿದೆ. ಅಲ್ಲದೆ ಇಬ್ಬರನ್ನೂ ರಸ್ತೆಯಲ್ಲಿ ಬಹಿರಂಗವಾಗಿ ಕರೆದೊಯ್ದಿದ್ದು ಏಕೆ? ಮಾಧ್ಯಮಗಳ ಮುಂದೆ ನಿಲ್ಲಿಸಿದ್ದೇಕೆ? ಎಂದು ಪ್ರಶ್ನಿಸಲಾಗಿದೆ.
#BREAKING #SupremeCourt seeks a comprehensive affidavit from the State of UP on the steps taken to inquire into the killings of Atiq Ahmed and brother Ashraf Ahmad when they were in police custody and also the previous encounter killings of the accused in Umesh Pal Murder case. https://t.co/5p5FfqiOFn
— Live Law (@LiveLawIndia) April 28, 2023
ಏಪ್ರಿಲ್ 15 ರಂದು ರಾತ್ರಿ ಉತ್ತರ ಪ್ರದೇಶದ (Uttar Pradesh) ಪ್ರಯಾಗ್‌ರಾಜ್‌ನಲ್ಲಿ ವೈದ್ಯಕೀಯ ತಪಾಸಣೆಗೆ ಇಬ್ಬರನ್ನು ಪೊಲೀಸರು ಕರೆದೊಯ್ಯುತ್ತಿದ್ದಾಗ ಮೂವರು ಪತ್ರಕರ್ತರ ಸೋಗಿನಲ್ಲಿ ಬಂದು ಗುಂಡು ಹಾರಿಸಿ ಹತ್ಯೆ ಮಾಡಿದ್ದರು. ಇನ್ನು ಈ ಘಟನೆ ಬಳಿಕ ಉತ್ತರ ಪ್ರದೇಶದಲ್ಲಿ ತೀವ್ರ ಸಂಚಲನ ಸೃಷ್ಟಿಯಾಗಿತ್ತು. ಅಲ್ಲದೆ ಯೋಗಿ ಆದಿತ್ಯನಾಥ್ ಸರ್ಕಾರದಲ್ಲಿ ಏನಾಗುತ್ತಿದೆ? ಎಂಬ ಪ್ರಶ್ನೆಯೂ ಭುಗಿಲೇಳುವಂತೆ ಮಾಡಿತ್ತು. ಇದೀಗ ಸುಪ್ರೀಂಕೋರ್ಟ್ (Supreme Court) ಕೂಡ ಅದೇ ರೀತಿ ಪ್ರಶ್ನೆ ಮಾಡಿದ್ದು, ಇಬ್ಬರ ಹತ್ಯೆಯ ಬಗ್ಗೆ ಸಂಪೂರ್ಣ ವರದಿ ನೀಡಲು ಸೂಚಿಸಿದೆ.

ಯೋಗಿ ಸರ್ಕಾರಕ್ಕೆ 3 ವಾರ ಡೆಡ್‌ಲೈನ್
ಇನ್ನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಸ್ ರವೀಂದ್ರ ಭಟ್ ಮತ್ತು ದೀಪಂಕರ್ ದತ್ತ ಅವರ ಪೀಠ, 3 ವಾರದಲ್ಲಿ ಹತ್ಯೆ ಸ್ಥಿತಿಗತಿ ವರದಿ ಸಲ್ಲಿಸಲು ಯುಪಿ ಸರ್ಕಾರಕ್ಕೆ ಸೂಚಿಸಿದೆ. ವಕೀಲ ವಿಶಾಲ್ ತಿವಾರಿ ಎಂಬುವವರು ಅತೀಕ್ ಅಹ್ಮದ್ ಮತ್ತು ಅಶ್ರಫ್ ಹತ್ಯೆ ಬಗ್ಗೆ ಸ್ವತಂತ್ರ ತನಿಖೆಗೆ ಕೋರಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ಈ ಆದೇಶ ಹೊರಡಿಸಲಾಗಿದೆ. ಹಾಗೇ ಅತೀಕ್ ಅಹ್ಮದ್ ಪುತ್ರ ಅಸದ್ ಎನ್‌ಕೌಂಟರ್‌ನ ಸ್ಥಿತಿಗತಿ ವರದಿಯನ್ನು ಕೂಡ ಸುಪ್ರೀಂಕೋರ್ಟ್ ಕೇಳಿದೆ.
ಯೋಗಿ ಸರ್ಕಾರಕ್ಕೆ ತಲೆನೋವು!
ರೌಡಿ ಶೀಟರ್‌ಗಳನ್ನು ಎನ್‌ಕೌಂಟರ್ ಮಾಡುವುದು, ಅವರ ಮನೆ ಮೇಲೆ ಬುಲ್ಡೋಜರ್ ಹರಿಸೋದು. ಹೀಗೆ ಹಲವು ವಿಚಾರಗಳು ಪದೇಪದೆ ಚರ್ಚೆ ಬರುತ್ತವೆ. ಆದರೆ ಅತೀಕ್ ಅಹ್ಮದ್ & ಅಶ್ರಫ್ ಭೀಕರ ಹತ್ಯೆ ಬೇರೆಯದ್ದೇ ಚರ್ಚೆಗೆ ದಾರಿ ಮಾಡಿಕೊಟ್ಟಿದೆ. 'ಮಾಧ್ಯಮಗಳು ಹಾಗೂ ಪೊಲೀಸರ ಸಮ್ಮುಖದಲ್ಲೇ ಇಂತಹ ಘಟನೆ ನಡೆದರೂ ಪೊಲೀಸರ ಬಂದೂಕು ಸುಮ್ಮನೆ ಇದ್ದಿದ್ದು ಯಾಕೆ' ಎಂಬ ಪ್ರಶ್ನೆಯನ್ನ ವಿಪಕ್ಷ ನಾಯಕರು ಕೇಳುತ್ತಿರುವ ನಡುವೆ ಸುಪ್ರೀಂಕೋರ್ಟ್ ಕೂಡ ಸೂಕ್ತ ಮಾಹಿತಿ ಒದಗಿಸಲು ಸೂಚಿಸಿದೆ.
ಅತೀಕ್ ಅಹ್ಮದ್ ಪತ್ನಿಗೆ ಹುಡುಕಾಟ
ಒಂದು ಕಡೆ ಅತೀಕ್ ಅಹ್ಮದ್ ಮತ್ತು ಅಶ್ರಫ್ ಹತ್ಯೆಯ ಬಗ್ಗೆ ಚರ್ಚೆ ನಡೆಯುತ್ತಿದ್ದರೆ, ಮತ್ತೊಂದು ಕಡೆ ಅತೀಕ್ ಅಹ್ಮದ್ ಪತ್ನಿ ಶೈಸ್ತಾ ಪರ್ವೀನ್ ಬಂಧನಕ್ಕೆ ಪೊಲೀಸರು ನಿರಂತರವಾಗಿ ಶೋಧ ನಡೆಸುತ್ತಿದ್ದಾರೆ. ಅನುಮಾನ ಬಂದ ಜಾಗದಲ್ಲೆಲ್ಲಾ ಪೊಲೀಸರು ದಾಳಿ ನಡೆಸಿ, ತನಿಖೆ ನಡೆಸುತ್ತಿದ್ದಾರೆ. ಕೊಸಾಂಬಿಯಲ್ಲಿ ಶೈಸ್ತಾ ಪತ್ತೆಗಾಗಿ ದಾಳಿ ನಡೆಸಲಾಗಿದೆ. ಶೈಸ್ತಾ ತನ್ನ ಪತಿ ಅತೀಕ್ ಅಹ್ಮದ್ ಮತ್ತು ಮಗ ಅಸದ್ ಅಂತ್ಯಕ್ರಿಯೆಯಲ್ಲಿ ಕೂಡ ಭಾಗವಹಿಸಲಿಲ್ಲ. ಹೀಗಾಗಿ ಮಾಹಿತಿ ಸಿಕ್ಕ ಸಿಕ್ಕ ಜಾಗದಲ್ಲಿ ಉತ್ತರ ಪ್ರದೇಶ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಒಟ್ನಲ್ಲಿ ಉತ್ತರ ಪ್ರದೇಶದಲ್ಲಿ ನಡೆದ ಅತೀಕ್ ಅಹ್ಮದ್ ಮತ್ತು ಅಶ್ರಫ್ ಹತ್ಯೆ ಘಟನೆ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಮತ್ತೊಂದು ಕಡೆ ಸುಪ್ರೀಂಕೋರ್ಟ್ ಕೂಡ ಸೂಕ್ತ ವರದಿ ನೀಡಲು ಯೋಗಿ ಆದಿತ್ಯನಾಥ್ ಅವರ ಸರ್ಕಾರಕ್ಕೆ 3 ವಾರದ ಡೆಡ್‌ಲೈನ್ ಕೊಟ್ಟಿದೆ. ಇಷ್ಟೆಲ್ಲದರ ನಡುವೆ ಅತೀಕ್ ಅಹ್ಮದ್ ಪತ್ನಿ ಶೈಸ್ತಾ ಪರ್ವೀನ್ ಬಂಧನಕ್ಕೂ ಬಲೆ ಬೀಸಲಾಗಿದ್ದು, ಮುಂದೆ ಏನಾಗಲಿದೆ ಎಂಬುದನ್ನ ಕಾದು ನೋಡಬೇಕು.
-
ಇರಾನ್ ಅಧ್ಯಕ್ಷರ ಜೊತೆ ಪ್ರಧಾನಿ ಮೋದಿ ಮಾತುಕತೆ: ಜಾಗತಿಕ ಪೂರೈಕೆ ವ್ಯತ್ಯಯದ ಬಗ್ಗೆ ಆತಂಕ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ












Click it and Unblock the Notifications