ಬಿಎಸ್ III ವಾಹನ ಮಾರಾಟಕ್ಕೆ ಸುಪ್ರೀಂ ಕೋರ್ಟ್ ನಿಷೇಧ

ಏಪ್ರಿಲ್ 1ರಿಂದ ಬಿಎಸ್ III ವಾಹನಗಳ ನೋಂದಣಿ ಮತ್ತು ಮಾರಾಟವನ್ನು ಸುಪ್ರೀಂಕೋರ್ಟ್ ನಿಷೇಧಿಸಿದೆ.ವಾಹನ ತಯಾರಕರು ತಮ್ಮ ವಾಹನಗಳನ್ನು ಬಿಎಸ್ IV ಮಾನದಂಡಕ್ಕೆ ತಕ್ಕಂತೆ ಮೇಲ್ದರ್ಜೆಗೆ ಏರಿಸಬೇಕಿದೆ.

ನವದೆಹಲಿ, ಮಾಚ್. 29 : ಏಪ್ರಿಲ್ 1ರಿಂದ ಮೋಟಾರು ವಾಹನಗಳ ವಾಯುಮಾಲಿನ್ಯ ಪರಿಮಿತಿ ಮಾನದಂಡ ಬಿಎಸ್ IV ಜಾರಿಗೆ ಬರುವ ಹಿನ್ನೆಲೆಯಲ್ಲಿ ಬಿಎಸ್ III ವಾಹನಗಳ ನೋಂದಣಿ ಮತ್ತು ಮಾರಾಟವನ್ನು ಸುಪ್ರೀಂಕೋರ್ಟ್ ನಿಷೇಧಿಸಿದೆ.

ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಸಲ್ಲಿಸಿದ ಅರ್ಜಿ ಬಗ್ಗೆ ಬುಧವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಮದನ್ ಬಿ ಲೋಕುರ್ ಮತ್ತು ದೀಪಕ್ ಗುಪ್ತಾ ಬೆಂಚ್, ವಾಣಿಜ್ಯ ಹಿತಾಸಕ್ತಿಗಿಂತ ಲಕ್ಷಾಂತರ ಜನರ ಆರೋಗ್ಯದ ಹಿತಾಸಕ್ತಿ ಮುಖ್ಯ ಎಂದು ಹೇಳಿದೆ.

Supreme Court bans sale of BS-III vehicles from April 1

ಮಾರ್ಚ್ 31ರ ಬಳಿಕ ಬಿಎಸ್ III ವಾಹನಗಳ ನೋಂದಣಿ ಮಾಡದಂತೆ ಸರ್ಕಾರಕ್ಕೆ ಆದೇಶಿಸಿದ ನ್ಯಾಯಾಲಯ ಈ ವಾಹನಗಳ ಮಾರಾಟವನ್ನು ನಿಷೇಧಿಸಿ ತೀರ್ಪು ನೀಡಿದೆ.

ವಾಹನ ತಯಾರಕರು ತಮ್ಮ ವಾಹನಗಳನ್ನು ಬಿಎಸ್ IV ಮಾನದಂಡಕ್ಕೆ ತಕ್ಕಂತೆ ಮೇಲ್ದರ್ಜೆಗೆ ಏರಿಸಬೇಕು ಮತ್ತು ಇದನ್ನು ಸರ್ಕಾರ ಖಾತ್ರಿ ಪಡಿಸಬೇಕು ಎಂದು ಕೋರ್ಟ್ ಹೇಳಿದೆ.

ಸುಪ್ರೀಂಕೋರ್ಟ್ ನ ಈ ತೀರ್ಪಿನಿಂದಾಗಿ ಮಾರಾಟಕ್ಕೆ ಸಿದ್ಧವಾಗಿರುವ ಸರಿಸುಮಾರು 8 ಲಕ್ಷ ಬಿಎಸ್ III ವಾಹನಗಳ ಮೇಲೆ ಹೊಡೆತ ಬೀಳಲಿದೆ. 2010ರಿಂದ ಬಿಎಸ್ IVನ್ನು ಹಂತ ಹಂತವಾಗಿ ಪರಿಚಯಿಸಲಾಗಿದ್ದು, ಇದು ಏಪ್ರಿಲ್ 1ರಿಂದ ದೇಶದಾದ್ಯಂತ ಜಾರಿಯಾಗುವ ಸಾಧ್ಯತೆ ಇದೆ.

ಹಳೆಯ ವಾಹನಗಳು ಮಾರುಕಟ್ಟೆಯಲ್ಲಿ ಮುಂದುವರಿದರೆ ಸ್ವಚ್ಛ ಇಂಧನ ತಂತ್ರಜ್ಞಾನವನ್ನು ಅನುಷ್ಠಾನ ಮಾಡಲು ಸಾಧ್ಯವಿಲ್ಲ ಎಂದು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಹೇಳಿದೆ.

ಬಜಾಜ್ ಹೊರತು ಪಡಿಸಿ ಇನ್ನಿತರ ಆಟೊಮೊಬೈಲ್ ಕಂಪನಿಗಳು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅರ್ಜಿಯನ್ನು ವಿರೋಧಿಸಿದ್ದವು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+