ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಮ್ಮು- ಕಾಶ್ಮೀರಕ್ಕೆ ವಿಶೇಷ ಸ್ಥಾನ ಅರ್ಜಿ ವಿಚಾರಣೆಗೆ ಸುಪ್ರೀಂ ಅಸ್ತು

|
Google Oneindia Kannada News

ನವದೆಹಲಿ, ಫೆಬ್ರವರಿ 19: ಕಾಶ್ಮೀರಕ್ಕೆ ವಿಶೇಷ ಸ್ಥಾನ ನೀಡಿರುವ ವಿವಾದಿತ ಸಂವಿಧಾನದ 370ನೇ ವಿಧಿ ಈ ಬಾರಿ ಕೂಡಾ ಚುನಾವಣೆಯ ಮುಖ್ಯ ವಿಷಯ ಆಗುವ ಸಾಧ್ಯತೆ ಕಂಡು ಬಂದಿದೆ. ಈ ನಡುವೆ 370ನೇ ವಿಧಿ ಕುರಿತಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ತ್ವರಿತವಾಗಿ ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂಕೋರ್ಟ್ ಅಸ್ತು ಎಂದಿದೆ.

ಜಮ್ಮು ಕಾಶ್ಮೀರದಲ್ಲಿ ಯಾವುದೇ ಅಭಿವೃದ್ಧಿ ಆಗುತ್ತಿಲ್ಲ. ಅತ್ಯಂತ ಹಿಂದುಳಿದಿದೆ. ಇದಕ್ಕೆ 370ನೇ ವಿಧಿಯೇ ಕಾರಣ ಎಂದು ಈ ವಿಧಿ ರದ್ದುಪಡಿಸಲು ಆಗ್ರಹಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಕಲಾಗಿದೆ. ಈ ನಡುವೆ ಪರಿಚ್ಛೇದ 35ಎ ಕುರಿತಂತೆ ಕೂಡಾ ವಿಚಾರಣೆ ಜಾರಿಯಲ್ಲಿದೆ.

ಭಾರತ ಸಂವಿಧಾನದ 370ನೇ ಪರಿಚ್ಛೇದ ಏನು? ಎತ್ತ?ಭಾರತ ಸಂವಿಧಾನದ 370ನೇ ಪರಿಚ್ಛೇದ ಏನು? ಎತ್ತ?

ಜಮ್ಮು ಕಾಶ್ಮೀರದಲ್ಲಿ ಯಾವುದೇ ಅಭಿವೃದ್ಧಿ ಆಗುತ್ತಿಲ್ಲ. ಅತ್ಯಂತ ಹಿಂದುಳಿದಿದೆ. ಇದಕ್ಕೆ 370ನೇ ವಿಧಿಯೇ ಕಾರಣ ಎಂದು ಈ ವಿಧಿ ರದ್ದುಪಡಿಸಲು ಆಗ್ರಹಿಸುತ್ತಿರುವವರು ವಾದ ಮಂಡಿಸುತ್ತಾರೆ. ಬಿಜೆಪಿ ಮುಖಂಡ ಅಶ್ವಿನಿ ಉಪಾಧ್ಯಾಯ್ ಅವರು ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗಾಯ್ ಅವರಿರುವ ನ್ಯಾಯಪೀಠ ಮಾನ್ಯ ಮಾಡಿದ್ದು, ತ್ವರಿತ ವಿಚಾರಣೆ ನಡೆಸುವುದಾಗಿ ಹೇಳಿದೆ.

 Supreme Court to consider plea for urgent hearing of PIL against Article 370 J&K

ಒಂದು ರಾಷ್ಟ್ರ, ಒಂದು ಸಂವಿಧಾನ, ಒಂದು ರಾಷ್ಟ್ರಗೀತೆ ಹಾಗೂ ಒಂದು ರಾಷ್ಟ್ರಧ್ವಜ ಎಂಬ ಪರಿಕಲ್ಪನೆಗೆ ವ್ಯತಿರಿಕ್ತವಾದ ಪರಿಸ್ಥಿತಿಯನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಣಬಹುದು. ಇತರೆ ರಾಜ್ಯಗಳಿಗಿಂತ ಹೆಚ್ಚಿನ ಅನುದಾನ ಹಾಗೂ ಕಾಳಜಿ ಕಣಿವೆ ರಾಜ್ಯದ ಮೇಲೆ ಎಲ್ಲಾ ಸರ್ಕಾರಗಳು ನೀಡುತ್ತಾ ಬಂದರೂ ಅಲ್ಲಿನ ಪರಿಸ್ಥಿತಿ ಸುಧಾರಿಸಿಲ್ಲ. ತಾತ್ಕಾಲಿಕವಾಗಿ ಜಾರಿಗೆ ಬಂದ ಪರಿಚ್ಛೇದ 370(3) ರ ಅಗತ್ಯ ಈಗ ಇಲ್ಲ ಎಂದು ವಾದಿಸಲಾಗಿದೆ.

ಜಮ್ಮು ಮತ್ತು ಕಾಶ್ಮೀರ ನಿವಾಸಿಗಳ ವಿಶೇಷಾಧಿಕಾರ ಕಲಂ 35ಎ ಎಂದರೇನು? ಜಮ್ಮು ಮತ್ತು ಕಾಶ್ಮೀರ ನಿವಾಸಿಗಳ ವಿಶೇಷಾಧಿಕಾರ ಕಲಂ 35ಎ ಎಂದರೇನು?

ಜಮ್ಮು ಕಾಶ್ಮೀರದಲ್ಲಿ ಹೊರ ರಾಜ್ಯದ ಯಾರೂ ಆಸ್ತಿ ಹಾಗೂ ಭೂಮಿ ಖರೀದಿಸುವಂತಿಲ್ಲ. ಈ ನಿಯಮವೇ ಜಮ್ಮು ಕಾಶ್ಮೀರವು ಭಾರತದಿಂದ ಬೇರೆ ಎಂಬ ಭಾವನೆ ಬೆಳೆಯಲು ಕಾರಣವಾಗಿದೆ. ಅಲ್ಲಿನವರಿಗೆ ಕೂಡ ತಾವು ಸಂಪೂರ್ಣ ಭಾರತೀಯರು ಎಂಬುದನ್ನು ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ. ರಾಜ್ಯದ ಹೊರತಾಗಿ ಬೇರೆಯವರು ಬಂಡವಾಳ ತೊಡಗಿಸಲು ಅವಕಾಶವಿಲ್ಲದ ಕಾರಣ ಇಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಇದಕ್ಕಾಗಿಯೇ ಸ್ಥಳೀಯರು ಶಸ್ತ್ರ ಕೈಗೆತ್ತಿಕೊಂಡು ಉಗ್ರರಾಗುತ್ತಿದ್ದಾರೆಂದು ವರದಿ ಹೇಳುತ್ತದೆ.

ಈ ನಿಬಂಧನೆಯು ಕೇವಲ ತಾತ್ಕಾಲಿಕವಾಗಿರುವ ಕಾರಣ ಯಾವುದೇ ಸಂದರ್ಭದಲ್ಲಿ ರದ್ದುಪಡಿಸಬಹುದು. ಈ ವಿಧಿ ರಚಿಸುವಾಗಲೇ ಇದೊಂದು ತಾತ್ಕಾಲಿಕ ವ್ಯವಸ್ಥೆಯಾಗಿದ್ದು, ಯಾವಾಗ ಬೇಕಾದರೂ ರದ್ದುಪಡಿಸಬಹುದೆಂದು ಸ್ಪಷ್ಟಪಡಿಸಲಾಗಿದೆ. ಭಾರತದ ರಾಷ್ಟ್ರಪತಿಯವರು ಒಂದು ಸಾರ್ವಜನಿಕ ಅಧಿಸೂಚನೆ ಹೊರಡಿಸುವ ಮೂಲಕ ರದ್ದುಪಡಿಸುವ ಅಧಿಕಾರ ಹೊಂದಿದ್ದಾರೆ.

English summary
The Supreme Court on Monday said that it would look into the plea seeking urgent hearing of a PIL challenging the constitutional validity of Article 370 of the Constitution, which grants special status to Jammu and Kashmir and limits Parliament’s power to make laws for the state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X