ಬೆದರಿಕೆ ಕರೆ: ಮುಖೇಶ್ ಅಂಬಾನಿ ಮತ್ತು ಅವರ ಕುಟುಂಬ ಸದಸ್ಯರಿಗೆ Z+ ಭದ್ರತೆ!
ಭಾರತ ಮತ್ತು ವಿದೇಶಗಳಲ್ಲಿ ಉದ್ಯಮಿ ಮುಖೇಶ್ ಅಂಬಾನಿ ಮತ್ತು ಅವರ ಕುಟುಂಬ ಸದಸ್ಯರಿಗೆ ಅತ್ಯುನ್ನತ ಮಟ್ಟದ Z+ ಭದ್ರತೆ ಒದಗಿಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.
ಉದ್ಯಮಿ ಮುಖೇಶ್ ಅಂಬಾನಿ ಮತ್ತು ಅವರ ಕುಟುಂಬ ಸದಸ್ಯರಿಗೆ ಭಾರತ ಮತ್ತು ವಿದೇಶಗಳಲ್ಲಿ ಉನ್ನತ ಮಟ್ಟದ Z+ ಭದ್ರತೆಯನ್ನು ಒದಗಿಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ. ಭಾರತ ಅಥವಾ ವಿದೇಶದಲ್ಲಿ ಅತ್ಯುನ್ನತ ಮಟ್ಟದ Z+ ಭದ್ರತೆಯನ್ನು ಒದಗಿಸುವ ಸಂಪೂರ್ಣ ವೆಚ್ಚವನ್ನು ಅವರು ಭರಿಸುತ್ತಾರೆ ಎಂದು ನ್ಯಾಯಾಲಯ ಹೇಳಿದೆ.
ಮುಂಬೈ ಮಹಾನಗರ ಮೇಲೆ ಮತ್ತೊಂದು ಭಯೋತ್ಪಾದಕ ದಾಳಿ ಸೂಚನೆ ಸಿಕ್ಕಿದೆ. ಇದಕ್ಕಾಗಿ ಭಾರಿ ಶಸ್ತ್ರಾಸ್ತ್ರದೊಂದಿಗೆ 25 ಉಗ್ರರು ಮುಂಬೈ ನಗರದಲ್ಲಿ ಬೀಡು ಬಿಟ್ಟಿದ್ದಾರೆ. ಇತ್ತ ಉದ್ಯಮಿ ಮುಕೇಶ್ ಅಂಬಾನಿ, ಅಮಿತಾಬ್ ಬಚ್ಚನ್, ಮತ್ತೋರ್ವ ಬಾಲಿವುಡ್ ನಟ ಧರ್ಮೆಂದ್ರ ಮನೆಗಳನ್ನು ಸ್ಪೋಟಿಸುವುದಾಗಿ ಬೆದರಿಕೆ ಕರೆಯೊಂದು ಬಂದಿದೆ.

ನಾಗ್ಪುರ ಪೊಲೀಸರಿಗೆ ಈ ಬೆದರಿಕೆ ಕರೆ ಬಂದಿದೆ. ತಕ್ಷಣ ನಾಗ್ಪುರ ಪೊಲೀಸರು ಮುಂಬೈ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಇದರ ಬೆನ್ನಲ್ಲೇ ಮುಂಬೈನಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಇತ್ತ ಸೈಬರ್ ಕ್ರೈಮ್ ವಿಭಾಗ ಈ ಕರೆ ಬಂದಿರುವ ಐಪಿಎ ಅಡ್ರೆಸ್ ಹಾಗೂ ಆರೋಪಿಗಳ ಜಾಡು ಪತ್ತೆ ಆರಂಭಿಸಿದೆ.
Supreme Court directs to provide highest level Z+ security cover to businessman Mukesh Ambani and his family members throughout India & abroad.
— ANI (@ANI) February 28, 2023
Entire cost of providing highest level Z+ security cover within territory of India or abroad shall be borne by them, court said. pic.twitter.com/qABwon3eIU
ಇತ್ತೀಚೆಗೆ ಹಲವು ಬಾರಿ ಮುಕೇಶ್ ಅಂಬಾನಿ ಮನೆ ಸ್ಪೋಟಿಸುವುದಾಗಿ ಮುಂಬೈ ಹಾಗೂ ನಾಗ್ಪುರ ಪೊಲೀಸರು ಹುಸಿ ಬೆದರಿಕೆ ಕರೆ ಸ್ವೀಕರಿಸಿದ್ದಾರೆ. ಮುಂಬೈ ಮೇಲೆ ಬಾಂಬ್ ಸ್ಪೋಟ ಸೇರಿದಂತೆ ಹಲವು ರೀತಿ ಉಗ್ರ ದಾಳಿ ಹುಸಿ ಬೆದರಿಕೆ ಕರೆಗಳು ಸ್ವೀಕರಿಸಿದ್ದಾರೆ. ಆದರೆ ಈ ರೀತಿಯ ಕರೆಗಳ ಬೆನ್ನಲ್ಲೇ ಮುಂಬೈ ಪೊಲೀಸರು ಆಲರ್ಟ್ ಸಂದೇಶ ನೀಡಿ ಭದ್ರತೆ ಹೆಚ್ಚಿಸಿದ್ದಾರೆ. ಜೊತೆಗೆ ತನಿಖೆಯನ್ನೂ ನಡೆಸಿ ಸತ್ಯ ಬಯಲಿಗೆಳಿದಿದ್ದಾರೆ. ಇತ್ತೀಚೆಗೆ ಈ ರೀತಿ ಕರೆಗಳು ಹೆಚ್ಚಾಗುತ್ತಿದೆ.

ಮುಕೇಶ್ ಅಂಬಾನಿ ಕುಟುಂಬ ಮತ್ತು ಒಡೆತನದ ಸರ್ ಎಚ್‌ಎನ್ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯನ್ನು ಸ್ಪೋಟಿಸುವುದಾಗಿ ಬುಧವಾರ ಅನಾಮಧೇಯ ವ್ಯಕ್ತಿಯೊಬ್ಬ ಬೆದರಿಕೆ ಕರೆ ಮಾಡಿದ್ದಾನೆ. ಆಸ್ಪತ್ರೆಗೆ ಲ್ಯಾಂಡ್‌ಲೈನ್‌ಗೆ ಬುಧವಾರ ಮಧ್ಯಾಹ್ನ 12.57ರ ಸುಮಾರಿಗೆ ಕರೆ ಮಾಡಿದ ಅನಾಮಧೇಯ, ಆಸ್ಪತ್ರೆಯನ್ನು ಸ್ಪೋಟಿಸುವುದಾಗಿ ಹೇಳಿದ್ದಾನೆ.
ಈ ಕುರಿತಾಗಿ ಡಿಬಿ ಮಾರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದಕ್ಕೂ ಮೊದಲು ಆಸ್ಪತ್ರೆ ಸ್ಪೋಟಿಸುವುದಾಗಿ ಆ.15ರಂದು ಸಹ ಬೆದರಿಕೆ ಕರೆ ಮಾಡಲಾಗಿತ್ತು. ಈ ಕರೆಗಳನ್ನು ಮಾಡಿದ್ದ ವ್ಯಕ್ತಿಯನ್ನು ಗುರುತಿಸಿದ್ದ ಪೊಲೀಸರು ಆತನನ್ನು ಬಂಧಿಸಿದ್ದರು.
-
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
SSLC Hindi Exam: ಮಾರ್ಚ್ 30ರ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಗೆ ಹೊಸ ಸಮಸ್ಯೆ: ಪರೀಕ್ಷಾ ಮಂಡಳಿ ಹೇಳಿದ್ದೇನು -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್








Click it and Unblock the Notifications