ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ನೀಟ್ ಪರೀಕ್ಷೆ ಮುಂದೂಡಿಕೆ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

|
Google Oneindia Kannada News

ನವದೆಹಲಿ, ಮೇ 13: ಸ್ನಾತಕೋತ್ತರ ವೈದ್ಯಕೀಯ ಪ್ರವೇಶ ಪರೀಕ್ಷೆಯನ್ನು ಮುಂದೂಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ನೀಟ್ ಪರೀಕ್ಷೆ ಮುಂದೂಡಿಕೆಯಿಂದ ಸಾವಿರಾರು ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಲಿದೆ ಎಂದು ಕೋರ್ಟ್ ಹೇಳಿದೆ.

ಸ್ನಾತಕೋತ್ತರ ಪದವಿಗಾಗಿ 2022ನೇ ಸಾಲಿನಲ್ಲಿ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (NEET PG) ಪರೀಕ್ಷೆಗೆ ನೋಂದಾಯಿಸಿದ ಸಾವಿರಾರು ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ತಿಳಿಸಿದೆ.

ನೀಟ್ ಪಿಜಿ 2022: ಪರೀಕ್ಷಾರ್ಥಿಗಳು ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಳ್ಳುವುದು ಹೇಗೆ?ನೀಟ್ ಪಿಜಿ 2022: ಪರೀಕ್ಷಾರ್ಥಿಗಳು ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಳ್ಳುವುದು ಹೇಗೆ?

ಸ್ನಾತಕೋತ್ತರ ಪ್ರವೇಶಕ್ಕಾಗಿ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (NEET PG) 2022 ಅನ್ನು ಮೇ 21ರಂದು ಆರಂಭಿಸಲಾಗುತ್ತಿದ್ದು, ಹದಿನೈದು ದಿನಗಳ ಅವಧಿಯಲ್ಲಿ ನಡೆಸಲಾಗುವುದು ಎಂದು ಘೋಷಿಸಲಾಗಿದೆ

Supreme Court dismisses plea to postpone NEET PG 2022 exam

ನೀಟ್ ಮುಂದೂಡಿಕೆಗೆ ಆಗ್ರಹಿಸಿ ಪ್ರತಿಭಟನೆ:

ದೆಹಲಿಯ ಜಂತರ್ ಮಂತರ್‌ನಲ್ಲಿ ವೈದ್ಯಕೀಯ ಅಭ್ಯರ್ಥಿಗಳು ಪರೀಕ್ಷೆ ಮುಂದೂಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಅಖಿಲ ಭಾರತ ವೈದ್ಯಕೀಯ ವಿದ್ಯಾರ್ಥಿಗಳ ಸಂಘ (ಎಐಎಂಎಸ್‌ಎ) ಶಾಂತಿಯುತ ಸಭೆ ಮತ್ತು ಮೌನ ಪ್ರತಿಭಟನೆ ನಡೆಸಿತು. ಈ ವಿದ್ಯಾರ್ಥಿಗಳಿಗೆ ಇತರ ಸಂಘಗಳು ಬೆಂಬಲ ಸೂಚಿಸಿದವು. ಕಳೆದ ಶುಕ್ರವಾರವಷ್ಟೇ 15,000 ಅಭ್ಯರ್ಥಿಗಳು 2022ನೇ ಸಾಲಿನ ನೀಟ್ ಪರೀಕ್ಷೆಯನ್ನು ಮುಂದೂಡುವಂತೆ ಒತ್ತಾಯಿಸಿ ಪ್ರಧಾನಿ ಮೋದಿಯವರಿಗೆ ಮನವಿ ಪತ್ರವನ್ನು ಸಲ್ಲಿಸಿದ್ದರು. ಕೌನ್ಸೆಲಿಂಗ್ ಪ್ರಕ್ರಿಯೆಯ ಅನಿಶ್ಚಿತತೆಯಿಂದಾಗಿ 50,000ಕ್ಕೂ ಹೆಚ್ಚು ಆಕಾಂಕ್ಷಿಗಳು NEET PG 2022 ಪರೀಕ್ಷೆಗೆ ಅರ್ಜಿ ಸಲ್ಲಿಸಲು ಸಾಧ್ಯವಾಗಲಿಲ್ಲ ಎಂದು ಮೆಮೊರಾಂಡಮ್ ಪತ್ರದಲ್ಲಿ ಉಲ್ಲೇಖಿಸಲಾಗಿತ್ತು.

Supreme Court dismisses plea to postpone NEET PG 2022 exam

ಮೇ 21ರ ವೇಳಾಪಟ್ಟಿ ಪ್ರಕಾರ ನೀಟ್ ಪರೀಕ್ಷೆ:

ನೀಟ್ ಪರೀಕ್ಷೆ ಮುಂದೂಡಿಕೆಗೆ ಸಂಬಂಧಿಸಿದಂತೆ ನಕಲಿ ಅಧಿಸೂಚನೆಯನ್ನು ಸರ್ಕಾರವು ಗಮನಿಸಿದೆ. ಟ್ವಿಟರ್‌ನಲ್ಲಿ ತನ್ನ ಫ್ಯಾಕ್ಟ್ ಚೆಕಿಂಗ್ ಹ್ಯಾಂಡಲ್ ಮೂಲಕ, NEET PG 2022 ಅನ್ನು ಮುಂದೂಡಲಾಗಿಲ್ಲ. ಮೇ 21ರಂದು ವೇಳಾಪಟ್ಟಿಯ ಪ್ರಕಾರ ಪರೀಕ್ಷೆಯನ್ನು ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದೆ. ನ್ಯಾಷನಲ್ ಬೋರ್ಡ್ ಆಫ್ ಎಕ್ಸಾಮಿನೇಷನ್ಸ್ (NBEMS) ಹೆಸರಿನಲ್ಲಿ ನಕಲಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಜುಲೈ 9ಕ್ಕೆ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಹೇಳುವ ಮೂಲಕ ಜನರನ್ನು ದಾರಿತಪ್ಪಿಸಲು ಪ್ರಯತ್ನಿಸಲಾಗಿತ್ತು.

"ನ್ಯಾಷನಲ್ ಬೋರ್ಡ್ ಆಫ್ ಎಕ್ಸಾಮಿನೇಷನ್ಸ್ ಹೆಸರಿನಲ್ಲಿ ನೀಡಲಾದ ನಕಲಿ ನೋಟೀಸ್ NEET PG ಪರೀಕ್ಷೆಯನ್ನು ಮುಂದೂಡಲಾಗಿದೆ. ಜುಲೈ 9ರ 2022 ರಂದು ನಡೆಸಲಾಗುವುದು ಎಂದು ಹೇಳಲಾಗಿದೆ. ಆದರೆ ಪರೀಕ್ಷೆಯನ್ನು ಮುಂದೂಡಲಾಗಿಲ್ಲ. ಇದನ್ನು 21 ಮೇ 2022 ರಂದು ನಡೆಸಲಾಗುವುದು," ಎಂದು PIB ಯ ಫ್ಯಾಕ್ಟ್ ಚೆಕ್ ಹ್ಯಾಂಡಲ್ ಟ್ವೀಟ್ ಮಾಡಿದೆ.

English summary
Supreme Court dismisses plea to postpone NEET PG 2022 exam.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X