• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಪಿಎಂ ಕೇರ್ಸ್ ನಿಧಿ ವರ್ಗಾವಣೆ ಇಲ್ಲ: ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

|
Google Oneindia Kannada News

ನವದೆಹಲಿ, ಆಗಸ್ಟ್ 18: ಕೊರೊನಾ ವೈರಸ್ ಸನ್ನಿವೇಶವನ್ನು ನಿರ್ವಹಿಸಲು ಕೇಂದ್ರ ಸರ್ಕಾರ ಅನುದಾನ ಸಂಗ್ರಹಿಸುತ್ತಿರುವ ಪಿಎಂ ಕೇರ್ಸ್ ಫಂಡ್ಸ್‌ಗೆ ಸುಪ್ರೀಂಕೋರ್ಟ್‌ನಿಂದ ಕಾನೂನಾತ್ಮಕ ಮನ್ನಣೆ ದೊರೆತಂತಾಗಿದೆ. ಪಿಎಂ ಕೇರ್ಸ್ ನಿಧಿಯಲ್ಲಿನ ಹಣವನ್ನು ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಗೆ ವರ್ಗಾಯಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯೊಂದನ್ನು ಸುಪ್ರೀಂಕೋರ್ಟ್ ಮಂಗಳವಾರ ವಜಾಗೊಳಿಸಿದೆ.

   ಚೀನಾ ಕಂಪನಿ Vivo ಗೆ ಸೆಡ್ಡು ಹೊಡೆದು IPL ಗೆ ಎಂಟ್ರಿ ಕೊಟ್ಟ Dream 11 | Oneindia Kannada

   ಕೊವಿಡ್ 19 ನಿರ್ವಹಣೆಗೆ ಯಾವುದೇ ಹೊಸ ರಾಷ್ಟ್ರೀಯ ವಿಪತ್ತು ಪರಿಹಾರ ಯೋಜನೆಯ ಅಗತ್ಯವಿಲ್ಲ ಎಂದ ಸುಪ್ರೀಂ ಕೋರ್ಟ್, ಕೊವಿಡ್ 19ರ ಕಾರ್ಯಗಳಿಗೆ ವಿಪತ್ತು ನಿರ್ವಹಣಾ ಕಾಯ್ದೆಯ ಅಡಿ ಹೊರಡಿಸಲಾಗಿರುವ ಕನಿಷ್ಠ ಮಟ್ಟದ ಪರಿಹಾರವೇ ಸಾಕು ಎಂದು ಅಭಿಪ್ರಾಯಪಟ್ಟಿದೆ.

   ಪ್ರಶಾಂತ್ ಭೂಷಣ್ ನ್ಯಾಯಾಂಗ ನಿಂದನೆ ಪ್ರಕರಣ: ಮತ್ತಷ್ಟು ಪರಿಶೀಲನೆಗೆ ಮುಂದಾದ ಸುಪ್ರೀಂಕೋರ್ಟ್ಪ್ರಶಾಂತ್ ಭೂಷಣ್ ನ್ಯಾಯಾಂಗ ನಿಂದನೆ ಪ್ರಕರಣ: ಮತ್ತಷ್ಟು ಪರಿಶೀಲನೆಗೆ ಮುಂದಾದ ಸುಪ್ರೀಂಕೋರ್ಟ್

   ಸೂಕ್ತವೆನಿಸಿದ ಸಂದರ್ಭದಲ್ಲಿ ಪರಿಹಾರದ ನಿಧಿಯನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಗೆ ವರ್ಗಾವಣೆ ಮಾಡಲು ಕೇಂದ್ರ ಸರ್ಕಾರಕ್ಕೆ ಸ್ವಾತಂತ್ರ್ಯವಿದೆ. ಹಾಗೆಯೇ ವ್ಯಕ್ತಿಗಳು ಎನ್‌ಡಿಆರ್‌ಎಫ್‌ಗೆ ದೇಣಿಗೆ ನೀಡಬಹುದು ಎಂದು ಪೀಠ ಸ್ಪಷ್ಟಪಡಿಸಿದೆ.

   ಪಿಎ ಕೇರ್ಸ್ ನಿಧಿಗೆ ದೇಣಿಗೆ ನೀಡುವುದನ್ನು ತಡೆಯಲು ಯಾವುದೇ ಸಂಸ್ಥೆಗೆ ಅಧಿಕಾರವಿಲ್ಲ. ಪಿಎಂ ಕೇರ್ಸ್ ಮೂಲಕ ಸಂಗ್ರಹಿಸಲಾಗುತ್ತಿರುವ ದೇಣಿಗೆಯು ದತ್ತಿ ಕಾರ್ಯಗಳಿಗೆ ಬಳಸಲಾಗುತ್ತದೆ. ಹೀಗಾಗಿ ಅದನ್ನು ಎನ್‌ಡಿಆರ್‌ಎಫ್‌ಗೆ ವರ್ಗಾವಣೆ ಮಾಡುವ ಅವಶ್ಯಕತೆ ಇಲ್ಲ ಎಂದು ಕೋರ್ಟ್ ಹೇಳಿದೆ.

   ನೀಟ್, ಜೆಇಇ ಪರೀಕ್ಷೆ ಮುಂದೂಡಿಕೆ ಅರ್ಜಿ ತಿರಸ್ಕರಿಸಿದ ಸುಪ್ರೀಂನೀಟ್, ಜೆಇಇ ಪರೀಕ್ಷೆ ಮುಂದೂಡಿಕೆ ಅರ್ಜಿ ತಿರಸ್ಕರಿಸಿದ ಸುಪ್ರೀಂ

   ವಕೀಲ ಪ್ರಶಾಂತ್ ಭೂಷಣ್ ನೇತೃತ್ವದ ತಂಡವು ಪಿಎಂ ಕೇರ್ಸ್ ಹಣವನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯಡಿ ಎನ್‌ಡಿಆರ್‌ಎಫ್‌ಗೆ ವರ್ಗಾವಣೆ ಮಾಡಲು ಆದೇಶ ನೀಡುವಂತೆ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. ಇದರ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಆರ್. ಸುಭಾಷ್ ರೆಡ್ಡಿ ಮತ್ತು ಎಂ ಆರ್ ಶಾ ಅವರನ್ನು ಒಳಗೊಂಡ ನ್ಯಾಯಪೀಠ ಜುಲೈ 27ರಂದು ತೀರ್ಪು ಕಾಯ್ದಿರಿಸಿತ್ತು.

   English summary
   The Supreme Court on Tuesday has dismissed a petition seeking transfer of PM Cares Funds to NDRF.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X