Arvind Kejriwal: ಅರವಿಂದ್ ಕೇಜ್ರಿವಾಲ್‌ಗೆ ಜಾಮೀನು ಮಂಜೂರು
ದೆಹಲಿ ಅಬಕಾರಿ ಮದ್ಯನೀತಿ ಪರಿಷ್ಕರಣೆ ಅಕ್ರಮ ಪ್ರಕರಣದಲ್ಲಿ ಜೈಲಿನಲ್ಲಿದ್ದ ದೆಹಲಿ ಮುಖ್ಯಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಬಿಗ್ ರಿಲೀಫ್ ಸಿಕ್ಕಿದೆ. ಸುಪ್ರೀಂ ಕೋರ್ಟ್ ಇಂದು ಸಿಬಿಐ ಪ್ರಕರಣಣದಲ್ಲಿ ಜಾಮೀನು ಮಂಜೂರು ಮಾಡಿದ್ದು, ಇಂದು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.
ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೂನ್‌ನಲ್ಲಿ ಸಿಬಿಐ ಅವರು ಬಂಧಿಸಿತ್ತು. ಈಗಾಗಳಲೇ ಜಾರಿ ನಿರ್ದೇಶನಾಲಯವು ಸಲ್ಲಿಸಿದ ಪ್ರಕರಣದಲ್ಲಿ ಜಾಮೀನು ಪಡೆದಿರುವ ಅರವಿಂದ್ ಕೇಜ್ರಿವಾಲ್ ಅವರು ಈಗ ಜೈಲಿನಿಂದ ಹೊರಬರಲಿದ್ದಾರೆ. ಸುಮಾರು ಆರು ತಿಂಗಳ ಜೈಲುವಾಸದ ನಂತರ ಅವರು ಬಿಡುಗಡೆಯಾಗಲಿದ್ದ ಆಮ್ ಆದ್ಮಿ ಪಕ್ಷದ ನಾಯಕರು, ಕಾರ್ಯಕರ್ತರಲ್ಲಿ ಸಂಬ್ರಮ ಮನೆ ಮಾಡಿದೆ.

ಸುಪ್ರೀಂ ಕೋರ್ಟ್ ಹೇಳಿದ್ದೇನು?
ದೀರ್ಘಕಾಲದ ಸೆರೆವಾಸಲು ಅನ್ಯಾಯಸ ಸ್ವಾತಂತ್ರ್ಯದ ಹರಣವಾಗಿದೆ ಎಂದು ಪರಿಗಣಿಸಿದ ಸುಪ್ರೀಂ ಕೋರ್ಟ್ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು ಮಾಡಿದೆ. ವಿಚಾರಣೆಯಿಲ್ಲದೆ ಸುಮಾರು ಆರು ತಿಂಗಳ ಜೈಲುವಾಸ ಅನುಭವಿಸಿದ್ದ ಅವರು, ಜೈಲಿನಿಂದಲೇ ಆಡಳಿತ ನಡೆಸಿದ್ದರು.
ಶುಕ್ರವಾರ ಬೆಳಿಗ್ಗೆ ಸಂಕ್ಷಿಪ್ತ ವಿಚಾರಣೆಯಲ್ಲಿ ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಮತ್ತು ನ್ಯಾಯಮೂರ್ತಿ ಸೂರ್ಯ ಕಾಂತ್ ಅವರ ದ್ವಿಸದಸ್ಯ ಪೀಠವು ಅರವಿಂದ್ ಕೇಜ್ರಿವಾಲ್ ಅವರ ಮನವಿ ಮೇಲೆ ಪ್ರತ್ಯೇಕ ತೀರ್ಪುಗಳನ್ನು ನೀಡಿದರೂ, ಮುಖ್ಯಮಂತ್ರಿ ಕೇಜ್ರಿವಾಲ್ ಅವರನ್ನು ಬಿಡುಗಡೆ ಮಾಡಬೇಕು ಎಂದು ಆದೇಶ ನೀಡಿತು.
ಇಡಿ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯ ನಿಯಮಿತ ಜಾಮೀನು ನೀಡಿದ ನಂತರವೇ ಸಿಬಿಐ ಸಕ್ರಿಯವಾಗಿದೆ ಮತ್ತು ಕಸ್ಟಡಿಗೆ ಕೋರಿದೆ ಎಂದು ತೋರುತ್ತದೆ. 22 ತಿಂಗಳುಗಳಿಗಿಂತ ಹೆಚ್ಚು ಕಾಲ ಬಂಧಿಸುವ ಅಗತ್ಯವಿಲ್ಲ ಎನಿಸುತ್ತದೆ ಎಂದು ನ್ಯಾಯಮೂರ್ತಿ ಭುಯಾನ್ ಅಭಿಪ್ರಾಯಪಟ್ಟರು.
ಜಾಮೀನಿಗೆ ಮೊದಲು ಆದ್ಯತೆ ಜೈಲು ನಂತರದ ಆಯ್ಕೆಯಷ್ಟೇ ಎಂದ ನ್ಯಾಯಾಧೀಶರು, ವಿಚಾರಣೆಯ ಪ್ರಕ್ರಿಯೆ ಅಥವಾ ಬಂಧನಕ್ಕೆ ಕಾರಣವಾಗುವ ಹಂತಗಳು ಕಿರುಕುಳವಾಗಿ ಮಾರ್ಪಡಬಾರದು ಎಂದು ಅಭಿಪ್ರಾಯಪಟ್ಟಿದೆ. ಅಲ್ಲದೆ ಸಿಬಿಐ ತಾನು ಪಂಜರದ ಗಿಳಿ ಎಂಬ ಭಾವನೆಯನ್ನು ಹೋಗಲಾಡಿಸಿಕೊಳ್ಳಲಿ ಎಂದು ಚಾಟಿ ಬೀಸಿದೆ.
ಷರತ್ತುಬದ್ಧ ಜಾಮೀನು ಮಂಜೂರು
ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರಂ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತು. ₹ 10 ಲಕ್ಷ ಮೊತ್ತದ ಜಾಮೀನು ಬಾಂಡ್ ನೀಡಿ ಜಾಮೀನಿನ ಮೇಲೆ ಬಿಡುಗಡೆಯಾಗುವಂತೆ ಸೂಚನೆ ನೀಡಿದೆ. ಪ್ರಕರಣದ ಬಗ್ಗೆ ಬಹಿರಂಗವಾಗಿ ಹೇಳಿಕೆ ನೀಡದಂತೆ ಸೂಚನೆ ಕೊಟ್ಟಿದೆ.
ಈಗಾಗಲೇ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಡುಗಡೆಯಾಗಿದ್ದ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಎಎಪಿ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಮತ್ತು ತೆಲಂಗಾಣ ರಾಜಕಾರಣಿ ಕೆ ಕವಿತಾ ಮೂವರಿಗೂ ಜಾಮೀನು ಸಿಕ್ಕಿದೆ.
ಅರವಿಂದ್ ಕೇಜ್ರಿವಾಲ್ ಬಂಧನವನ್ನು ಪ್ರಜಾಪ್ರಭುತ್ವಕ್ಕೆ ಮಾಡಿದ ಅನ್ಯಾಯ ಎಂದಿದ್ದ ಆಮ್ ಆದ್ಮಿ ಪಕ್ಷ ಭಾರಿ ಪ್ರತಿಭಟನೆ ಮಾಡಿತ್ತು. ಇಂದು ಕೇಜ್ರಿವಾಲ್ ಅವರಿಗೆ ಜಾಮೀನು ಸಿಕ್ಕಿದ್ದು, ಪಕ್ಷದ ನಾಯಕರು, ಅಭಿಮಾನಿಗಳು, ಕಾರ್ಯಕರ್ತರು ಸಂಭ್ರಮಿಸುತ್ತಿದ್ದಾರೆ.












Click it and Unblock the Notifications