Satyendar Jain: ಸತ್ಯೇಂದ್ರ ಜೈನ್‌ಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂಕೋರ್ಟ್
ನವದೆಹಲಿ, ಮೇ 26: ಮನಿ ಲಾಂಡರಿಂಗ್ ಆರೋಪದ ಅಡಿಯಲ್ಲಿ 2022ರ ಮೇ ತಿಂಗಳಿನಿಂದ ತಿಹಾರ್ ಜೈಲಿನಲ್ಲಿರುವ ದೆಹಲಿ ಮಾಜಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರಿಗೆ ಸುಪ್ರೀಂ ಕೋರ್ಟ್ ಆರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಆರೋಗ್ಯದ ಕಾರಣಗಳಿಂದಾಗಿ ಅವರಿಗೆ ಜುಲೈ 1ರವರೆಗೆ ಜಾಮೀನು ಮಂಜೂರು ಮಾಡಲಾಗಿದ್ದು. ಈ ಅವಧಿಯಲ್ಲಿ ಸಾಕ್ಷಿಗಳ ಮೇಲೆ ಪ್ರಭಾವ ಬೀರುವುದು, ಸಾಕ್ಷ್ಯವನ್ನು ಹಾಳುಮಾಡುವುದು ಅಥವಾ ಆ ಅವಧಿಯಲ್ಲಿ ದೆಹಲಿಯನ್ನು ಬಿಟ್ಟು ಹೋಗದಂತೆ ಎಚ್ಚರಿಕೆ ನೀಡಲಾಗಿದೆ.

ತಿಹಾರ್ ಜೈಲಿನಲ್ಲಿದ್ದ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಕಾರಣ ಅವರನ್ನು ಐಸಿಯುಗೆ ದಾಖಲಿಸಲಾಗಿದೆ. ದೆಹಲಿಯ ಲೋಕನಾಯಕ ಜೈ ಪ್ರಕಾಶ್ ನಾರಾಯಣ್ (ಎಲ್‌ಎನ್‌ಜೆಪಿ) ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.












Click it and Unblock the Notifications