Breaking: ಕವಿ, ಹೋರಾಟಗಾರ ಡಾ. ಪಿ ವರವರ ರಾವ್‌ಗೆ ಜಾಮೀನು
ನವದೆಹಲಿ, ಆಗಸ್ಟ್ 10: ಕವಿ, ಹೋರಾಟಗಾರ ಡಾ. ಪಿ ವರವರ ರಾವ್‌ಗೆ ಸುಪ್ರೀಂಕೋರ್ಟ್ ಇಂದು ಜಾಮೀನು ನೀಡಿದೆ. ಸಾಮಾಜಿಕ ಹೋರಾಟಗಾರ ವರವರ ರಾವ್‌ಗೆ ವೈದ್ಯಕೀಯ ಕಾರಣಗಳಿಗಾಗಿ ಜಾಮೀನು ಮಂಜೂರಾಗಿದೆ. 2018 ರ ಭೀಮಾ ಕೊರೆಂಗಾವ್ ಹಿಂಸಾಚಾರ ಸಂಬಂಧಿಸಿದ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ.
ನ್ಯಾಯಮೂರ್ತಿಗಳಾದ ಉದಯ್ ಉಮೇಶ್ ಲಲಿತ್, ಎಸ್ ರವೀಂದ್ರ ಭಟ್ ಮತ್ತು ಸುಧಾಂಶು ಧುಲಿಯಾ ಅವರ ಪೀಠವು ಜಾಮೀನು ಅರ್ಜಿಯ ಬಗ್ಗೆ ಔಪಚಾರಿಕ ನೋಟಿಸ್ ನೀಡಿದ್ದು, ಮುಂದಿನ ವಿಚಾರಣೆ ವೇಳೆ ಪ್ರಕರಣವನ್ನು ಇತ್ಯರ್ಥಪಡಿಸಲಾಗುವುದು ಎಂದು ಹೇಳಿತ್ತು. ಅಂತಿಮ ವಿಚಾರಣೆ ಆಗಸ್ಟ್ 10ರಂದು ನಡೆಸಿ, ತಾತ್ಕಾಲಿಕವಾಗಿ ನೀಡಿದ ಜಾಮೀನನ್ನು ಪೂರ್ಣಾವಧಿ ಜಾಮೀನು ಆಗಿ ನೀಡಿದ್ದಾರೆ.
ಬಂಧನದ ಬಳಿಕ 83 ವರ್ಷ ವಯಸ್ಸಿನ ರಾವ್ ಆರೋಗ್ಯ ಪರಿಸ್ಥಿತಿ ತೀವ್ರವಾಗಿ ಕ್ಷೀಣಿಸಿತ್ತು. ರಾವ್ ಪರ ವಕೀಲರಾದ ಇಂದಿರಾ ಜೈಸಿಂಗ್, ಅವರ ಆರೋಗ್ಯ ಕ್ಷೀಣಿಸುತ್ತಿದೆ ಮತ್ತು ಅವರು ಜೈಲಿನಲ್ಲಿಯೇ ಕೊನೆಯುಸಿರು ಎಳೆಯುವ ಅಪಾಯಕಾರಿ ಸ್ಥಿತಿ ಉಂಟಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು. ನಂತರ ಮುಂಬೈನ ನಾನಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು.
ಜೈಲಿನಲ್ಲಿರುವ ರಾವ್ ಅವರನ್ನು ನಾನಾವತಿ ಆಸ್ಪತ್ರೆಯ ವೈದ್ಯರ ತಂಡ ತಪಾಸಣೆ ನಡೆಸುವಂತೆ ಹೈಕೋರ್ಟ್ ಆರಂಭದಲ್ಲಿ ಸಲಹೆ ನೀಡಿತ್ತು. ಆದರೆ ಇದಕ್ಕೆ ಎನ್‌ಐಎ ವಿರೋಧ ವ್ಯಕ್ತಪಡಿಸಿತು.

ಭೀಮಾ ಕೊರೆಗಾಂವ್ ಕದನದ 200 ನೇ ವರ್ಷಾಚರಣೆಯ ವೇಳೆ ಕಳೆದ ಜನವರಿ ತಿಂಗಳಿನಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಕೆಲವು ವಿಚಾರವಾದಿಗಳನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ.
ಆಂಧ್ರದ ಕ್ರಾಂತಿಕಾರಿ ಕವಿ ವರವರ ರಾವ್, ನಾಗರೀಕ ಹಕ್ಕುಗಳ ಹೋರಾಟಗಾರ್ತಿ ಸುಧಾ ಭಾರದ್ವಾಜ್, ಲೇಖಕ ಆನಂದ ತೆಲ್ತುಂಬ್ಡೆ, ಮಾನವ ಹಕ್ಕು ಕಾರ್ಯಕರ್ತ ಅರುಣ್, ಪತ್ರಕರ್ತ ಗೌತಮ್, ಮಾನವ ಹಕ್ಕುಗಳ ಕಾರ್ಯಕರ್ತೆ ಸುಸಾನ್ ಅಬ್ರಹಾಂ, ಸಾಮಾಜಿಕ ಹೋರಾಟಗಾರ ಗೊನ್ಸಾಲ್ವಿಸ್ ಅವರುಗಳನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದರು.
ಭೀಮಾ ಕೊರೆಗಾಂವ್ ಗಲಭೆ:
ಜನವರಿ 1, 1818 ರಂದು ದಲಿತರು ಮತ್ತು ಮರಾಠರ ನಡುವೆ ನಡೆದ ಗಲಭೆಯೇ ಭೀಮಾ ಕೊರೆಗಾಂವ್ ಗಲಭೆ. ಕೊರೆಗಾಂವ್ ಎಂಬ ಹಳ್ಳಿ ಭೀಮಾ ನದಿ ತೀರದಲ್ಲಿದೆ. ಈ ಪ್ರದೇಶದಲ್ಲಿ ಯುದ್ಧ ನಡೆದಿದ್ದರಿಂದ ಅದಕ್ಕೆ ಭೀಮಾ ಕೊರೆಗಾಂವ್ ಎಂಬ ಹೆಸರು. ಇದರ 200 ವರ್ಷಾಚರಣೆ ಡಿಸೆಂಬರ್(2017) -ಜನವರಿಯಲ್ಲಿ ನಡೆದಿತ್ತು. ಈ ಸಂದರ್ಭದಲ್ಲಿ ಮರಾಠರ ವಿರುದ್ಧ ಯುದ್ಧ ಗೆದ್ದ ದಿನವನ್ನು, 'ವಿಜಯ ದಿವಸ' ಎಂಬ ಹೆಸರಿನಲ್ಲಿ ದಲಿತರು ಆಚರಿಸುತ್ತಿದ್ದರು. ಆದರೆ ಆಚರಣೆಯ ಸಂದರ್ಭ ದಲ್ಲಿ ಇದ್ದಕ್ಕಿದ್ದಂತೆ ಘರ್ಷಣೆ ಉಂಟಾಗಿ, ದಲಿತ ಯುವಕನೋರ್ವ ಮೃತಪಟ್ಟಿದ್ದ. ಇದರಿಂದ ಈ ಘರ್ಷಣೆ ಉಗ್ರರೂಪ ಪಡೆದು, ಸಾಕಷ್ಟು ಜನರಿಗೆ ಗಾಯವಾಗಿತ್ತು. ನಂತರ ಮಹಾರಾಷ್ಟ್ರ ಬಂದ್ ಸಹ ಆಚರಿಸಲಾಗಿತ್ತು.
ಮಾವೋ ಸಿದ್ಧಾಂತಗಳ ಅನುಯಾಯಿಗಳಾದ ಕೆಲವು ವಿಚಾರವಾದಿಗಳ ಕೈವಾಡವೂ ಈ ಗಲಭೆಯಲ್ಲಿದೆ ಎಂಬ ಮಾಹಿತಿ ಮಹಾರಾಷ್ಟ್ರ ಪೊಲಿಸರಿಗೆ ಲಭ್ಯವಾದ ಪರಿಣಾಮ UAPA(Unlawful Activities Prevention Act) ಕಾಯ್ದೆಯ ಅಡಿಯಲ್ಲಿ ಅವರನ್ನು ಬಂಧಿಸಲಾಗಿತ್ತು. ಈ ಕಾಯ್ದೆಯ ಪ್ರಕಾರ ಯಾವುದೇ ವಾರೆಂಟ್ ಅಗತ್ಯವಿಲ್ಲದೆ ವ್ಯಕ್ತಿಯ ಮನೆಯಲ್ಲಿ ತನಿಖೆ ನಡೆಸಬಹುದು. ಈ ಕಾಯ್ದೆಯಡಿಯಲ್ಲೇ ದೂರು ದಾಖಲಿಸಿ ವಿಚಾರವಾದಿಗಳ ಮನೆಯಲ್ಲಿ ಪೊಲೀಸರು ಹುಡುಕಾಟ ನಡೆಸಿದ್ದರು.

ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಸಂಚು ರೂಪಿಸಿರುವ ಮಾಹಿತಿಗಳನ್ನೊಳಗೊಂಡ ಎರಡು ಪತ್ರಗಳು ಪೊಲೀಸರಿಗೆ ಲಭಿಸಿತ್ತು. ಈ ಪತ್ರದಲ್ಲಿ, ಮಾವೋವಾದಿಗಳೇ ರಾಜೀವ್ ಗಾಂಧಿ ಹತ್ಯೆಯ ಮಾದರಿಯಲ್ಲಿಯೇ ಮೋದಿ ಹತ್ಯೆಗೂ ಸಂಚು ರೂಪಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿತ್ತು. ಆದ್ದರಿಂದ ಮಾವೋ ಸಿದ್ಧಾಂತವನ್ನು ಅನುಸರಿಸುವವರ ಮೇಲೆ ಒಂದು ಕಣ್ಣಿಡಲು ಪೊಲೀಸರು ಚಿಂತಿಸಿದ್ದರು.
ವರವರರಾವ್ ಅವರ ಬ್ಯಾಂಕ್ ಖಾತೆ, ಇ-ಮೇಲ್ ಸೇರಿ ಎಲ್ಲವನ್ನೂ ತನಿಖೆಗೆ ಒಳಪಡಿಸಲಾಗಿತ್ತು. ಕೆಲವು ತಿಂಗಳುಗಳ ಹಿಂದೆ ಅಷ್ಟೆ ಕೊರೆಗಾಂವ್ ಗಲಭೆ ತನಿಖೆ ವೇಳೆಯಲ್ಲಿ ಮೋದಿ ಅವರನ್ನು ರಾಜೀವ್ ಮಾದರಿಯಲ್ಲಿ ಹತ್ಯೆ ಮಾಡಬೇಕು ಎಂದು ಬರೆದಿದ್ದ ಪತ್ರವೊಂದು ಪೊಲೀಸರಿಗೆ ದೊರೆತಿತ್ತು.
ವರವರರಾವ್ ಅವರು ನೆರವು ಬೇಡಿದ್ದ ವ್ಯಕ್ತಿಗಳನ್ನೂ ವಿಶೇಷ ಪೊಲೀಸರು ವಿಚಾರಣೆ ನಡೆಸಿದ್ದರು. ಜಾರ್ಖಂಡ್, ಗೋವಾ, ಆಂಧ್ರಪ್ರದೇಶ, ದೆಹಲಿಗಳಿಗೂ ವಿಶೇಷ ಪೊಲೀಸ್ ದಳ ಭೇಟಿ ನೀಡಿ ಈಗಾಗಲೇ ತನಿಖೆ ನಡೆಸಲಾಗಿತ್ತು.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election












Click it and Unblock the Notifications